ನಟಿ ರಮ್ಯಾ ಮತ್ತು ಶಿವರಾಜ್ ಕುಮಾರ್ 
ಸಿನಿಮಾ ಸುದ್ದಿ

Actor Darshan Fans ವಿರುದ್ಧ ಸಮರ: ನಟಿ Ramya ಬೆಂಬಲಕ್ಕೆ ನಿಂತ 'ದೊಡ್ಮನೆ'; ನಟ ಶಿವರಾಜ್ ಕುಮಾರ್ ಹೇಳಿದ್ದೇನು?

ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರವಾಗಿ ನಟ ದರ್ಶನ್ ಅಭಿಮಾನಿಗಳು ನಟಿ ರಮ್ಯಾ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿ ಟೀಕೆ ಮಾಡುತ್ತಿದ್ದು, ಇದರ ವಿರುದ್ಧ ನಟಿ ಬಹಿರಂಗವಾಗಿಯೇ ಸಮರ ಸಾರಿದ್ದರು.

ಬೆಂಗಳೂರು: ನಟ ದರ್ಶನ್ ಅಭಿಮಾನಿಗಳ ದುರ್ವರ್ತನೆ ವಿರುದ್ಧ ನಟಿ ರಮ್ಯಾ ಸಾರಿರುವ ಸಮರಕ್ಕೆ ದೊಡ್ಮನೆ ಬೆಂಬಲ ದೊರೆತಿದ್ದು, ನಟ ಶಿವರಾಜ್ ಕುಮಾರ್ ದಂಪತಿ ರಮ್ಯಾ ಪರ ಬ್ಯಾಟ್ ಬೀಸಿದ್ದಾರೆ.

ಹೌದು.. ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರವಾಗಿ ನಟ ದರ್ಶನ್ ಅಭಿಮಾನಿಗಳು ನಟಿ ರಮ್ಯಾ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿ ಟೀಕೆ ಮಾಡುತ್ತಿದ್ದು, ಇದರ ವಿರುದ್ಧ ನಟಿ ಬಹಿರಂಗವಾಗಿಯೇ ಸಮರ ಸಾರಿದ್ದರು.

ಈ ಸಂಬಂಧ ಪೊಲೀಸ್ ದೂರು ನೀಡಿರುವ ನಟಿ ರಮ್ಯಾಗೆ ಇದೀಗ ಎಲ್ಲಡೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ.

ರಮ್ಯಾ ಬಗ್ಗೆ ದರ್ಶನ್ ಅಭಿಮಾನಿಗಳು ಮಾಡಿರುವ ಅಶ್ಲೀಲ ಕಮೆಂಟ್​ಗಳನ್ನು ಖಂಡಿಸಿ ಇದೀಗ ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ಸಹ ನಟಿ ರಮ್ಯಾ ಅವರ ಬೆಂಬಲಕ್ಕೆ ನಿಂತಿದ್ದಾರೆ.

ದರ್ಶನ್ ಅಭಿಮಾನಿಗಳ ದುರ್ವರ್ತನೆಯನ್ನು ಸಾಮಾಜಿಕ ಜಾಲತಾಣದ ಮೂಲಕ ಖಂಡಿಸುತ್ತಿದ್ದ ರಮ್ಯಾ ಇದೀಗ ಕಾನೂನು ಮೊರೆ ಹೋಗಿದ್ದು, ಪೊಲೀಸರಿಗೆ ಅಧಿಕೃತವಾಗಿ ದೂರು ದಾಖಲಿಸಿದ್ದಾರೆ. ಅಗತ್ಯ ದಾಖಲೆಗಳನ್ನು ನೀಡಿದ್ದಾರೆ.

ಶಿವಣ್ಣನ ಬೆಂಬಲ

ಇನ್ನು ನಟಿ ರಮ್ಯಾ ವಿರುದ್ಧ ಆನ್​ಲೈನ್ ಟ್ರೋಲಿಂಗ್ ಮತ್ತು ಅಶ್ಲೀಲ ಪದ ಬಳಕೆ ವಿಚಾರವಾಗಿ ನಟ ಶಿವರಾಜ್ ಕುಮಾರ್ ಕೆಂಡಾಮಂಡಲಾಗಿದ್ದು, ಈ ಸಮರದಲ್ಲಿ ರಮ್ಯಾಗೆ ಶಿವರಾಜ್ ಕುಮಾರ್ ಬೆಂಬಲ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಶಿವಣ್ಣ, 'ರಮ್ಯಾ, ನಿಮ್ಮ ನಿಲವು ಸರಿಯಿದೆ, ನಿಮ್ಮ ಜೊತೆಗೆ ನಾವು ಸದಾ ನಿಲ್ಲುತ್ತೇವೆ’ ಎಂದಿದ್ದಾರೆ. ಮುಂದುವರೆದು, ‘ರಮ್ಯಾ ಅವರ ವಿರುದ್ಧ ಬಳಸಿರುವ ಪದಗಳು ಖಂಡನೀಯ. ಯಾವ ಮಹಿಳೆಯ ವಿರುದ್ಧವೂ ಹೀಗೆ ಮಾತನಾಡುವುದು ಸರಿಯಲ್ಲ. ಅದನ್ನು ನಾವು ಸಹಿಸಬಾರದು' ಎಂದು ಎಕ್ಸ್ ನಲ್ಲಿ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಅಂತೆಯೇ ‘ಮಹಿಳೆಯರನ್ನು ತಾಯಿಯಾಗಿ, ಅಕ್ಕನಾಗಿ, ಮಗಳಾಗಿ, ಮಡದಿಯಾಗಿ ಮತ್ತು ಮೊಟ್ಟಮೊದಲು ವ್ಯಕ್ತಿಯಾಗಿ ಗೌರವಿಸುವುದು ತುಂಬಾ ಮುಖ್ಯ. ಸೋಷಿಯಲ್ ಮೀಡಿಯಾ ತುಂಬಾ ಬಲಷ್ಠವಾದ ಅಸ್ತ್ರ ಅದನ್ನು ತಮ್ಮ ಏಳಿಗಾಗಿ ಬಳಸಬೇಕೇ ಹೊರತು ಅವಾಚ್ಯ ಶಬ್ದಗಳಿಂದ ನಿಂದಿಸಿ ದ್ವೇಷ-ಅಸೂಯೆಯನ್ನು ಬಿತ್ತಲು ಬಳಸಬಾರದು. ನಿಮ್ಮ ನಿಲವು ಸರಿಯದೆ, ನಿಮ್ಮ ಜೊತೆ ನಾವು ನಿಲ್ಲುತ್ತೇವೆ’ ಎಂದಿದ್ದಾರೆ.

ಇನ್ನು ಶಿವರಾಜ್ ಕುಮಾರ್ ಮತ್ತು ಗೀತಾ ಶಿವರಾಜ್ ಕುಮಾರ್ ಇಬ್ಬರೂ ಸಹ ಈ ಸಂದೇಶವನ್ನು ಹಂಚಿಕೊಂಡಿದ್ದು, ಇಬ್ಬರೂ ಸಹ ರಮ್ಯಾ ಪರವಾಗಿ ನಿಂತಿದ್ದಾರೆ. ಆ ಮೂಲಕ ದೊಡ್ಮನೆ ಕುಟುಂಬದವರು ಸಂತ್ರಸ್ತ ನಟಿಯ ಪರವಾಗಿ ನಿಂತಿದ್ದಾರೆ.

ಧನ್ಯವಾದ ಹೇಳಿದ ರಮ್ಯಾ

ಇನ್ನು ಶಿವಣ್ಣನ ಕುಟುಂಬದಿಂದ ಬಂದ ಬೆಂಬಲಕ್ಕೆ ನಟಿ ರಮ್ಯಾ ಧನ್ಯವಾದ ಹೇಳಿ ಎಕ್ಸ್ ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

ಏನಿದು ವಿವಾದ?

ದರ್ಶನ್ ಜಾಮೀನು ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್​ನ ಹೇಳಿಕೆಯನ್ನು ಆಧರಿಸಿ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ದೊರಕುವ ವಿಶ್ವಾಸವಿದೆ ಎಂದು ರಮ್ಯಾ ಹೇಳಿದ್ದರು. ಅದರ ಬೆನ್ನಲ್ಲೆ ದರ್ಶನ್ ಅಭಿಮಾನಿಗಳು ರಮ್ಯಾರ ವಿರುದ್ಧ ಅಶ್ಲೀಲ ಪೋಸ್ಟ್​ಗಳನ್ನು ಹಂಚಿಕೊಳ್ಳಲು ಆರಂಭಿಸಿದರು. ಇದನ್ನು ಕಟುವಾಗಿ ವಿರೋಧಿಸಿದ್ದ ರಮ್ಯಾ ಪೊಲೀಸರಿಗೆ ದೂರು ದಾಖಲಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಮತ್ತೊಂದು ಬೃಹತ್ ದರೋಡೆ: ವಿಜಯಪುರ SBI ಬ್ಯಾಂಕ್‌ ಸಿಬ್ಬಂದಿ ಕಟ್ಟಿಹಾಕಿ, 8 ಕೋಟಿ ಹಣ, 50 ಕೋಟಿ ಚಿನ್ನಾಭರಣ ಕಳವು?

ಕ್ರೈಸ್ತ ಬ್ರಾಹ್ಮಣ, ಕ್ರೈಸ್ತ ಒಕ್ಕಲಿಗ, ಕ್ರೈಸ್ತ ಕುರುಬ Hindu ಉಪಜಾತಿ ಸೇರ್ಪಡೆ ವಿರುದ್ಧ ರಾಜ್ಯಪಾಲರಿಗೆ BJP ದೂರು!

ಸು...ರ್ ಕುಮಾರ್: ಹಸ್ತ ಲಾಘವ ಕೊಡದ ಟೀಂ ಇಂಡಿಯಾ ನಾಯಕನಿಗೆ ಅವಹೇಳನಕಾರಿ ಶಬ್ದದಿಂದ ನಿಂದಿಸಿದ ಪಾಕ್ ಮಾಜಿ ಕ್ರಿಕೆಟಿಗ

75ರ ವಸಂತಕ್ಕೆ ಕಾಲಿಡುತ್ತಿರುವ ನರೇಂದ್ರ ಮೋದಿ: ಜನರ ಪ್ರಧಾನಿಯ ಏಳು ಬೀಳುಗಳ ಸ್ಮರಣೀಯ ಪ್ರಯಾಣ

ಹಿಮಾಚಲದಲ್ಲಿ ವಿನಾಶ: ಮೇಘಸ್ಫೋಟ-ಭೂಕುಸಿತ; 13 ಮಂದಿ ಸಾವು, 16ಕ್ಕೂ ಹೆಚ್ಚು ಮಂದಿ ನಾಪತ್ತೆ, SDRF ಕಾರ್ಯಾಚರಣೆ!

SCROLL FOR NEXT