ಹಿರಂದಾಸ್ ಮುರಳಿ 
ಸಿನಿಮಾ ಸುದ್ದಿ

ಮದುವೆಯಾಗುವುದಾಗಿ ನಂಬಿಸಿ ಯುವ ವೈದ್ಯೆ ಮೇಲೆ ಲೈಂಗಿಕ ದೌರ್ಜನ್ಯ: ಮಲಯಾಳಂ ರ‍್ಯಾಪರ್ ಹಿರಂದಾಸ್ ಮುರಳಿ ವಿರುದ್ಧ FIR

ಕೇರಳದ ತ್ರಿಕ್ಕಾಕರ ಪೊಲೀಸ್ ಠಾಯಲಿ ರ‍್ಯಾಪರ್ ಹಿರಂದಾಸ್ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ತಿರುವನಂತಪುರಂ: ವೈದ್ಯೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಲ್ಲಿ ಮಲಯಾಳಂ ಖ್ಯಾತ ಮಲಯಾಳಂ ರ‍್ಯಾಪರ್ ಹಿರಂದಾಸ್ ವಿರುದ್ಧ ಪ್ರಕರಣ ದಾಖಲಾಗಿದೆ.

ಕೇರಳದ ತ್ರಿಕ್ಕಾಕರ ಪೊಲೀಸ್ ಠಾಯಲಿ ರ‍್ಯಾಪರ್ ಹಿರಂದಾಸ್ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮದುವೆಯಾಗುವುದಾಗಿ ಸುಳ್ಳು ಭರವಸೆ ನೀಡಿ ಯುವವೈದ್ಯೆಯೊಂದಿಗೆ ಹಿರಂದಾಸ್ ಲೈಂಗಿಕ ಸಂಬಂಧ ಹೊಂದಿದ್ದರು. 2021ರಿಂದ 2023ರವರೆಗೆ ಮದುವೆ ಭರವಸೆ ನೀಡುತ್ತ ಮೋಸ ಮಾಡಿದ್ದಾರೆ ಎಂದು ಸಂತ್ರಸ್ತೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಹಿರಂದಾಸ್ ವಿರುದ್ಧ ಪ್ರಕರಣ ದಾಖಲಾಗಿದೆ .

ಏಪ್ರಿಲ್ ನಲ್ಲಿ ಡ್ರಗ್ಸ್ ಪ್ರಕರಣದಲ್ಲಿ ಹಿರಂದಾಸ್ ಮುರಳಿಯನ್ನು ಬಂಧಿಸಲಾಗಿತ್ತು. ಜಾಮೀನು ಮೇಲೆ ಹೊರ ಬಂದಿದ್ದ ಅವರು ಬಳಿಕ ಚಿರತೆ ಹಲ್ಲುಗಳನ್ನು ಹೊಂದಿದ್ದ ಆರೋಪದಡಿ ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದರು. ಸಾಲು ಸಾಲು ಪ್ರಕರಣಗಳಲ್ಲಿ ರ‍್ಯಾಪರ್ ಹಿರಂದಾಸ್ ಮುರಳಿ ವಿರುದ್ಧ ಆರೋಪ ಕೇಳಿಬಂದಿದ್ದು, ಕೇಸ್ ದಾಖಲಾಗಿದೆ.

ಲೈಂಗಿಕ ದೌರ್ಜನ್ಯ ಆರೋಪಗಳನ್ನು ಎದುರಿಸುತ್ತಿರುವುದು ಇದೇ ಮೊದಲಲ್ಲ; ಮೀಟೂ ಚಳವಳಿಯ ಸಮಯದಲ್ಲಿ ಇದೇ ರೀತಿಯ ಆರೋಪಗಳು ಬಂದವು ಆದರೆ ಯಾವುದೇ ಪೊಲೀಸ್ ಪ್ರಕರಣ ದಾಖಲಾಗಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್