ಮಂಗ್ಲಿ 
ಸಿನಿಮಾ ಸುದ್ದಿ

ಹೈದರಾಬಾದ್‌: ಗಾಯಕಿ ಮಂಗ್ಲಿ ಬರ್ತ್​​ಡೇ ಪಾರ್ಟಿಯಲ್ಲಿ ಡ್ರಗ್ಸ್, 9 ಮಂದಿಗೆ ಪಾಸಿಟಿವ್; ಕೇಸ್ ದಾಖಲು

ಹೈದರಾಬಾದ್ ಹೊರವಲಯದಲ್ಲಿರುವ ಚೆವೆಲ್ಲಾದಲ್ಲಿರುವ ತ್ರಿಪುರಾ ರೆಸಾರ್ಟ್‌ನಲ್ಲಿ ಗಾಯಕಿ ಮಂಗ್ಲಿ ಅವರ ಬರ್ತ್​ಡೇ ಪಾರ್ಟಿ ನಡೆಯುತ್ತಿತ್ತು.

ಹೈದರಾಬಾದ್‌: ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಹಾಡು ಹಾಡಿರುವ ಖ್ಯಾತ ತೆಲುಗು ಗಾಯಕಿ ಮಂಗ್ಲಿ ಅವರ ಬರ್ತ್​​ಡೇ ಪಾರ್ಟಿ ಮೇಲೆ ಮಂಗಳವಾರ ರಾತ್ರಿ ತೆಲಂಗಾಣದಲ್ಲಿ ಪೊಲೀಸರು ದಾಳಿ ನಡೆಸಿದ್ದು, ಪಾರ್ಟಿಯಲ್ಲಿ ಡ್ರಗ್ಸ್ ಪತ್ತೆಯಾಗಿದೆ ಮತ್ತು 9 ಮಂದಿ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ.

ಹೈದರಾಬಾದ್ ಹೊರವಲಯದಲ್ಲಿರುವ ಚೆವೆಲ್ಲಾದಲ್ಲಿರುವ ತ್ರಿಪುರಾ ರೆಸಾರ್ಟ್‌ನಲ್ಲಿ ಗಾಯಕಿ ಮಂಗ್ಲಿ ಅವರ ಬರ್ತ್​ಡೇ ಪಾರ್ಟಿ ನಡೆಯುತ್ತಿತ್ತು. ಪಾರ್ಟಿಯ ಮೇಲೆ ದಾಳಿ ನಡೆಸಿದ ಪೊಲೀಸರು ಪಾರ್ಟಿಯಲ್ಲಿ ಭಾಗಿಯಾದವರ ರಕ್ತದ ಮಾದರಿಗಳನ್ನು ಪಡೆದು, ಪರೀಕ್ಷೆ ನಡೆಸಿದ್ದು, ಒಂಬತ್ತು ಜನ ಗಾಂಜಾ ಸೇವಿಸಿರುವುದು ಕಂಡುಬಂದಿದೆ. ಅಲ್ಲದೆ ಪಾರ್ಟಿಯಲ್ಲಿ ಕೆಲ ವಿದೇಶಿ ಮದ್ಯಗಳು ಸಹ ಪತ್ತೆಯಾಗಿದ್ದು, ಅವುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಅನುಮತಿಯಿಲ್ಲದೆ ವಿದೇಶಿ ಮದ್ಯ ಆಮದು ಮಾಡಿಕೊಂಡಿದ್ದಕ್ಕಾಗಿ ಗಾಯಕಿ ಮಂಗ್ಲಿ ವಿರುದ್ಧ ಪ್ರಕರಣ ದಾಖಲಾಗಿದೆ.

ಪಾರ್ಟಿಯಲ್ಲಿ ಮಂಗ್ಲಿ ಅವರ ಕುಟುಂಬ, ಆಪ್ತ ಸ್ನೇಹಿತರು ಮತ್ತು ತೆಲುಗು ಚಿತ್ರರಂಗದ ಹಲವ ಗಣ್ಯ ವ್ಯಕ್ತಿಗಳು ಸೇರಿದಂತೆ ಸುಮಾರು 50 ಅತಿಥಿಗಳು ಭಾಗವಹಿಸಿದ್ದರು. ರಚ್ಚಾ ರವಿ, ದಿವಿ, ಕಾಸರ್ಲಾ ಶ್ಯಾಮ್, ಗಾಯಕಿ ಇಂದ್ರಾವತಿ ಮತ್ತು ಇತರ ಗಣ್ಯರು ಸಹ ಪಾರ್ಟಿಯಲ್ಲಿ ಉಪಸ್ಥಿತರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel