ಸಚಿನ್ ಚೆಲುವರಾಯಸ್ವಾಮಿ - ಸಂಗೀತ ಭಟ್ 
ಸಿನಿಮಾ ಸುದ್ದಿ

ಸುನೀಲ್ ಕುಮಾರ್ ವಿಎ ನಿರ್ದೇಶನದ 'ಕಮಲ್ ಶ್ರೀದೇವಿ' ಚಿತ್ರಕ್ಕೆ ಸಚಿನ್ ಚೆಲುವರಾಯಸ್ವಾಮಿ ನಾಯಕ

ಸ್ವರ್ಣಾಂಬಿಕಾ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಧನಲಕ್ಷ್ಮಿ ಬಿಕೆ ಚಿತ್ರವನ್ನು ನಿರ್ಮಿಸಲಿದ್ದಾರೆ ಮತ್ತು ರಾಜವರ್ದನ್ ಅವರ ಬಾರ್ನ್ ಸ್ವಾಲೋ ಸಹ ನಿರ್ಮಾಣದ ಹೊಣೆ ಹೊತ್ತಿದೆ.

ಸುನೀಲ್ ಕುಮಾರ್ ವಿಎ ನಿರ್ದೇಶನದ 'ಕಮಲ್ ಶ್ರೀದೇವಿ' ಚಿತ್ರ ಈಗಾಗಲೇ ತನ್ನ ಶೀರ್ಷಿಕೆಯಿಂದಲೇ ತೀವ್ರ ಕುತೂಹಲ ಮೂಡಿಸಿದೆ. ಚಿತ್ರದಲ್ಲಿ ನಟ ಕಿಶೋರ್ ಕುಮಾರ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದು, ಸಚಿನ್ ಚೆಲುವರಾಯಸ್ವಾಮಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಸಚಿವ ಎನ್ ಚಲುವರಾಯಸ್ವಾಮಿ ಚಿತ್ರ ಪ್ರಸ್ತುತಪಡಿಸಿದ್ದು, ಇದು ತಂದೆ-ಮಗನ ಸಹಯೋಗವಾಗಿದೆ.

ಸ್ವರ್ಣಾಂಬಿಕಾ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಧನಲಕ್ಷ್ಮಿ ಬಿಕೆ ಚಿತ್ರವನ್ನು ನಿರ್ಮಿಸಲಿದ್ದಾರೆ ಮತ್ತು ರಾಜವರ್ದನ್ ಅವರ ಬಾರ್ನ್ ಸ್ವಾಲೋ ಸಹ ನಿರ್ಮಾಣದ ಹೊಣೆ ಹೊತ್ತಿದೆ. ಕಮಲ್ ಶ್ರೀದೇವಿ ಚಿತ್ರವನ್ನು ಕನ್ನಡ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಬಿಡುಗಡೆ ಮಾಡಲು ಯೋಜಿಸಿದ್ದು, ಹೆಚ್ಚಿನ ಪ್ರೇಕ್ಷಕರನ್ನು ಆಕರ್ಷಿಸುವ ಗುರಿಯನ್ನು ಹೊಂದಿದೆ.

ಹ್ಯಾಪಿ ಬರ್ತ್‌ಡೇ (2016) ಮತ್ತು ಬೆಂಗಳೂರು ಬಾಯ್ಸ್ (2023) ನಂತರ ಸಚಿನ್ ಅವರ ಮೂರನೇ ಚಿತ್ರ ಇದಾಗಿದೆ. ಕಮಲ್ ಶ್ರೀದೇವಿ ಚಿತ್ರದಲ್ಲಿ ರಾಜವರ್ದನ್ ಕ್ರಿಯೇಟೀವ್ ಹೆಡ್ ಆಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.

ಎರಡನೇ ಸಲ ಮತ್ತು ಕೊನೆಯದಾಗಿ ಕ್ಲಾಂಟಾ ಚಿತ್ರದಲ್ಲಿ ಕಾಣಿಸಿಕೊಂಡಿದ್ದ ನಟಿ ಸಂಗೀತ ಭಟ್ ಸಚಿನ್ ಜೊತೆಯಾಗಿದ್ದಾರೆ. ಚಿತ್ರದಲ್ಲಿ ರಮೇಶ್ ಇಂದಿರಾ, ಮಿತ್ರ ಮತ್ತು ಎಂಎಸ್ ಉಮೇಶ್ ಸೇರಿದಂತೆ ಇತರರು ನಟಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

NCERT ಪಠ್ಯಪುಸ್ತಕ ವಿವಾದ: ನಾವು ನ್ಯಾಯಾಂಗವನ್ನು ಗೌರವಿಸುತ್ತೇವೆ; ಬಿಜೆಪಿ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

SCROLL FOR NEXT