ಬಿಗ್ಬಾಸ್ ಕನ್ನಡ ಸೀಸನ್ 11 (Bigg Boss Kannada) ಮುಗಿದಿದ್ದು ಮತ್ತೊಂದು ಆವೃತ್ತಿಗೆ ತಯಾರಿಗಳು ಜೋರಾಗಿ ನಡೆಯುತ್ತಿವೆ. ಕಳೆದ ಬಾರಿ ಬಿಗ್ ಬಾಸ್ ಮುಗಿಯುತ್ತಿದ್ದಂತೆ ನಿರೂಪಣೆಗೆ ಕಿಚ್ಚ ಸುದೀಪ್ ಗುಡ್ ಬೈ ಹೇಳಿದ್ದರು. ಕನ್ನಡ ಬಿಗ್ ಬಾಸ್ ಶೋ ಆರಂಭವಾದಾಗಿನಿಂದಲೂ ಸುದೀಪ್ ಅವರು ನಿರೂಪಣೆ ಮಾಡಿಕೊಂಡು ಬಂದಿದ್ದಾರೆ. ಅವರ ಜಾಗದಲ್ಲಿ ಮತ್ತೊಬ್ಬರನ್ನು ಊಹಿಸುವುದು ಅಸಾಧ್ಯ. ಈಗಿರುವಾಗ ಹೊಸ ಆವೃತ್ತಿಯ ಕುರಿತಂತೆ ನಾಳೆ ಬಿಗ್ ಬಾಸ್ ಆಯೋಜಕರು ಪತ್ರಿಕಾಗೋಷ್ಠಿ ಆಯೋಜನೆ ಮಾಡಿದೆ.
ತಾಜ್ ಹೋಟೆಲ್ನಲ್ಲಿ ಜೂನ್ 30ರಂದು ಪತ್ರಿಕಾಗೋಷ್ಠಿ ಆಯೋಜನೆ ಮಾಡಲಾಗಿದ್ದು, ಸಾರ್ವಜನಿಕರಿಗೆ ಪ್ರವೇಶವಿಲ್ಲ. ನಾಳೆ ಬಿಗ್ಬಾಸ್ ಕನ್ನಡ ಸೀಸನ್ 12 ಅನ್ನು ಯಾರು ನಿರೂಪಣೆ ಮಾಡಲಿದ್ದಾರೆ ಎಂಬ ಪ್ರಶ್ನೆಗೆ ಉತ್ತರ ಸಿಗುವ ಸಾಧ್ಯತೆ. ಒಂದು ವೇಳೆ ಕಿಚ್ಚ ಸುದೀಪ್ ಒಪ್ಪಿಕೊಂಡಿದ್ದರೆ ಮುಂದಿನ ಆವೃತ್ತಿಯನ್ನು ಅವರೇ ನಿರೂಪಣೆ ಮಾಡಲಿದ್ದಾರೆ. ಇಲ್ಲದಿದ್ದರೆ ಅವರ ಜಾಗಕ್ಕೆ ಯಾರೂ ಬರುತ್ತಾರೆ ಎಂಬುದು ನಾಳೆ ಸಂಜೆ 4 ಗಂಟೆಗೆ ತಿಳಿಯಲಿದೆ.