ಸುಮಲತಾ-ದರ್ಶನ್  
ಸಿನಿಮಾ ಸುದ್ದಿ

ಸುಮಲತಾ-ದರ್ಶನ್ ನಡುವೆ ಬಿರುಕು? Insta ಪೇಜಿನಿಂದ ಮದರ್ ಇಂಡಿಯಾ ಔಟ್; ಚರ್ಚೆಗೆ ಗ್ರಾಸವಾಯ್ತು ಮಾಜಿ ಸಂಸದೆ ಪೋಸ್ಟ್!

ದರ್ಶನ್ ಜೈಲಿಗೆ ಹೋದಾಗ ಮೌನ ಕಾಯ್ದುಕೊಂಡಿದ್ದ ಸುಮಲತಾ, ದರ್ಶನ್ ಅವರು ಹೊರ ಬರುತ್ತಿದ್ದಂತೆ ‘ಅವನು ಯಾವಾಗಲೂ ನನ್ನ ಮಗ’ ಎಂದಿದ್ದರು.

ಬೆಂಗಳೂರು: ಸುಮಲತಾ ಅಂಬರೀಷ್ ಹಾಗೂ ದರ್ಶನ್ ಮಧ್ಯೆ ಒಳ್ಳೆಯ ಬಾಂಧವ್ಯ ಇತ್ತು. ದರ್ಶನ್​ನ ಮಗ ಎಂದು ಸುಮಲತಾ ಪರಿಗಣಿಸಿದ್ದರು.

ದರ್ಶನ್ ಜೈಲಿಗೆ ಹೋದಾಗ ಮೌನ ಕಾಯ್ದುಕೊಂಡಿದ್ದ ಸುಮಲತಾ, ದರ್ಶನ್ ಅವರು ಹೊರ ಬರುತ್ತಿದ್ದಂತೆ ‘ಅವನು ಯಾವಾಗಲೂ ನನ್ನ ಮಗ’ ಎಂದಿದ್ದರು. ಈಗ ಡೆವಿಲ್ ಚಿತ್ರೀಕರಣ ಶುರುವಾಗುವ ಹೊತ್ತಿನಲ್ಲೇ ಆಪ್ತರಿಗೆ ಇನ್‌ಸ್ಟಾದಿಂದ ದರ್ಶನ್‌ ಕೊಕ್‌ ಕೊಟ್ಟಿದ್ದಾರೆ.

ನಟ ದರ್ಶನ್ ಅವರು ಇನ್​ಸ್ಟಾಗ್ರಾಮ್​ನಲ್ಲಿ ಇಷ್ಟು ದಿನ ಕೆಲವೇ ಕೆಲವರನ್ನು ಫಾಲೋ ಮಾಡುತ್ತಾ ಇದ್ದರು. ಆ ಪೈಕಿ ಸುಮಲತಾ, ಅಭಿಷೇಕ್ ಅಂಬರೀಷ್, ಅಭಿ ಪತ್ನಿ ಅವಿವಾ, ಪುತ್ರ ವಿನೀಶ್, ಡಿ ಕಂಪನಿ ಇದ್ದವು. ಆದರೆ, ಈಗ ಅವರು ಎಲ್ಲರನ್ನೂ ಅನ್​ಫಾಲೋ ಮಾಡಿದ್ದಾರೆ. ಅವರು ಯಾರನ್ನು ಫಾಲೋ ಮಾಡದೇ ಇರೋದು ಹಲವು ಪ್ರಶ್ನೆ ಹುಟ್ಟಿ ಹಾಕಿದೆ. ಫಾಲೋ ಮಾಡುವವರ ಸಂಖ್ಯೆ ʻ0ʼ ಆಗಿದೆ. ಆದ್ರೆ ಇಂಥ ನಿರ್ಧಾರಕ್ಕೆ ಕಾರಣ ಏನು ಅಂತ ದರ್ಶನ್‌ ಫ್ಯಾನ್ಸ್‌ ತಲೆ ಕೆಡಿಸಿಕೊಂಡಿದ್ದಾರೆ.

ದರ್ಶನ್ ಜೈಲಿನಲ್ಲಿ ಇದ್ದಾಗ ಸುಮಲತಾ ಅವರನ್ನು ನೋಡಲು ಹೋಗಿಲ್ಲ. ರಾಜಕೀಯ ಕಾರಣಗಳಿಂದ ಅವರು ಹೀಗೆ ಮಾಡದೆ ಇರಬಹುದು. ಇದು ದರ್ಶನ್ ಮನಸ್ಸಿಗೆ ನಾಟಿದೆಯೇ ಎನ್ನುವ ಪ್ರಶ್ನೆ ಉಂಟುಮಾಡಿದೆ. ಸುಮಲತಾ ತಮ್ಮನ್ನು ಬೆಂಬಲಿಸಿಲ್ಲ ಎಂಬ ಕಾರಣಕ್ಕೆ ಇಬ್ಬರ ಮಧ್ಯೆ ವೈಮನಸ್ಸು ಮೂಡಿತೇ ಎನ್ನುವ ಪ್ರಶ್ನೆ ಹುಟ್ಟಿಕೊಂಡಿದೆ.

ದರ್ಶನ್ ಅನ್​ಫಾಲೋ ಮಾಡಿದ ವಿಚಾರ ಚರ್ಚೆ ಹುಟ್ಟುಹಾಕಿದ ಬೆನ್ನಲ್ಲೇ ಸುಮಲತಾ ಅವರು ಮಾರ್ಮಿಕವಾಗಿ ಪೋಸ್ಟ್ ಒಂದನ್ನು ಹಾಕಿದ್ದಾರೆ. ಇಂಗ್ಲಿಷ್ ಲೈನ್​ಗಳನ್ನು ಅವರು ಇನ್​ಸ್ಟಾಗ್ರಾಮ್​ ಸ್ಟೇಟಸ್​ಗೆ ಪೋಸ್ಟ್ ಮಾಡಿದ್ದಾರೆ. ಅತ್ಯುತ್ತಮ ನಟ ಆಸ್ಕರ್ ಅವಾರ್ಡ್ ಯಾರಿಗೆ ಹೋಗುತ್ತದೆ ಎಂದರೆ.. ಯಾರು ಸತ್ಯವನ್ನ ತಿರುಚುತ್ತಾರೆ, ಪಶ್ಚಾತಾಪ ಇಲ್ಲದೆ ಬೇರೆಯವರಿಗೆ ನೋವು ಮಾಡುತ್ತಾರೆ, ತಪ್ಪನ್ನು ಬೇರೆಯವರ ಮೇಲೆ ಹಾಕುತ್ತಾರೆ. ಆದಾಗ್ಯೂ ಅವರು ತಮ್ಮನ್ನು ತಾವು ಹೀರೋ ಎಂದುಕೊಳ್ಳುತ್ತಾರೆ’ ಎಂದು ಸುಮಲತಾ ಬರೆದುಕೊಂಡಿದ್ದಾರೆ.

ಸುಮಲತಾ ಪೋಸ್ಟ್

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Iran ನಲ್ಲಿ ಕೊನೆಗೂ ಆಡಳಿತ ಬದಲಾವಣೆ! ಅಮೆರಿಕ, ಇಸ್ರೇಲ್ ಬಯಸಿದ್ದೇ ಒಂದು, ಆಗಿದ್ದು ಇನ್ನೊಂದು!

Op Sindoor: ವಿಶ್ವಭೂಪಟದಿಂದ ಪಾಕ್ ನಿರ್ನಾಮಕ್ಕೆ ಕೆಲವೇ ನಿಮಿಷಗಳ ಅಂತರದಲ್ಲಿದ್ದೆವು, ಆದ್ರೆ ಅವರು ತಡೆದರು...: ಅಡ್ಮಿರಲ್ ದಿನೇಶ್ ಕೆ. ತ್ರಿಪಾಠಿ

IPL 2026: ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್; ಲಕ್ನೋ ವಿರುದ್ಧ ಗೆದ್ದು ಬೀಗಿದ ಡೆಲ್ಲಿ

IPL 2026: ಯಾರ್ ಮೇಲಾದ್ರೂ 5 ಸಾವಿರ ಹೂಡಿಕೆ ಮಾಡಿ ನೋಡಿ: LSG ಮಾಲೀಕರ ಕುರಿತು Mohammed Shami ಹೇಳಿಕೆ ವೈರಲ್!

ದೇಶದಲ್ಲೇ ಮೊದಲ ಬಾರಿಗೆ ಡ್ರಗ್ಸ್, ಸಾಮಾಜಿಕ–ಆರ್ಥಿಕ ಜನಗಣತಿ ಆರಂಭಿಸಿದ ಪಂಜಾಬ್: ನಿರೀಕ್ಷೆಗೂ ಮೀರಿದ ಪ್ರತಿಕ್ರಿಯೆ

SCROLL FOR NEXT