ಬಿಂದು ಘೋಷ್ 
ಸಿನಿಮಾ ಸುದ್ದಿ

ಖ್ಯಾತ ಹಿರಿಯ ಹಾಸ್ಯ ನಟಿ ಬಿಂದು ಘೋಷ್ ನಿಧನ

ಬಿಂದು ಘೋಷ್ ಅವರು ತಮಿಳು ಸಿನಿಮಾ ಸೇರಿದಂತೆ ದಕ್ಷಿಣ ಭಾರತದ ಹಲವಾರು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.

ಚೆನ್ನೈ: ಕಳೆದ ಕೆಲವು ತಿಂಗಳುಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಹಾಸ್ಯ ನಟಿ ಬಿಂದು ಘೋಷ್ ಅವರು ಭಾನುವಾರ ನಿಧನರಾಗಿದ್ದಾರೆ.

ಬಿಂದು ಘೋಷ್ ಅವರು ತಮಿಳು ಸಿನಿಮಾ ಸೇರಿದಂತೆ ದಕ್ಷಿಣ ಭಾರತದ ಹಲವಾರು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ತಮಿಳು ಸೂಪರ್ ಸ್ಟಾರ್ ಗಳಾದ ರಜನಿಕಾಂತ್ ಮತ್ತು ಕಮಲ್ ಹಾಸನ್ ಸೇರಿದಂತೆ ನಟರೊಂದಿಗೆ ನಟಿಸಿದ್ದಾರೆ.

ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಬಿಂದು ಘೋಷ್ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ.

ಬಿಂದು ಘೋಷ್ ಅವರ ಪಾರ್ಥಿವ ಶರೀರವನ್ನು ಚೆನ್ನೈನ ವಿರುಗಂಬಕ್ಕಂನಲ್ಲಿರುವ ಅವರ ನಿವಾಸದಲ್ಲಿ ಸಾರ್ವಜನಿಕ ದರ್ಶನಕ್ಕಾಗಿ ಇರಿಸಲಾಗಿದೆ. ನಾಳೆ ಅಂತ್ಯಕ್ರಿಯೆ ನಡೆಯಲಿದೆ ಎಂದು ವರದಿಯಾಗಿದೆ.

ಬಿಂದು ಘೋಷ್ ಅವರು 'ಗೌರಿ ಕಲ್ಯಾಣಂ', 'ಸುರಕೊಟ್ಟೈ ಸಿಂಗಕುಟ್ಟಿ', 'ಮಂಗಮ್ಮಳ್ ಚಪಧಂ' ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿ ಜನರನ್ನು ನಗಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಜೆಪಿ ಪ್ರತಿಭಟನೆ: ಮೆಟ್ರೋ, ಇಂಟರ್ನೆಟ್ ಸೇವೆ ಸ್ಥಗಿತ, ಅಕ್ರಮ ಬಂಧನಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕೇಂದ್ರಕ್ಕೆ ಸೂಚನೆ

'ಸತ್ತ ಮೇಲೂ ಕಾಡ್ತಿದ್ದಾನೆ'; ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನಲ್ಲೂ ನಾನಾ ಪಾಟೇಕರ್ ಹೆಸರು ಎಳೆತಂದ ತನುಶ್ರೀ ದತ್ತಾ; ನೆಟ್ಟಿಗರ ಆಕ್ರೋಶ!

ನನ್ನ ಕನಸು ನೀವೇ ಸರ್‌; ನಿಮ್ಮ ಕಣ್ಣಲ್ಲಿ ನೀರು ತರಿಸಿದೆ: ಕಿಚ್ಚ ಸುದೀಪ್ ಮುಂದೆ ಕಣ್ಣೀರಿಟ್ಟ ಮಾಡರ್ನ್ ಮಹಾಕವಿ ಮಂಜು

'ಮೈಸೂರು ರಾಜಮನೆತನ ಹೊರಗಿಟ್ಟು ಕರ್ನಾಟಕ ಇತಿಹಾಸ ಊಹಿಸುವುದು ಕಷ್ಟ': ಗವಿಸಿದ್ಧೇಶ್ವರ ಶ್ರೀಗಳು; Video

'ಮೊದಲು ನಿಮ್ಮ ಅಮೆರಿಕದಲ್ಲಿ ಕೈಗೆಟುಕುವ ದರದಲ್ಲಿ ಸೇವೆ ಒದಗಿಸಿ': ಒತ್ತಡಕ್ಕೆ ಭಾರತ ಮಣಿಯಲ್ಲ; ಎಲಾನ್ ಮಸ್ಕ್ ವಿರುದ್ಧ ನಿಶಿಕಾಂತ್ ದುಬೆ