ಸೂತ್ರಧಾರಿ ಚಿತ್ರ ತಂಡ. 
ಸಿನಿಮಾ ಸುದ್ದಿ

ಚಂದನ್ ಶೆಟ್ಟಿ ಅಭಿನಯದ 'ಸೂತ್ರಧಾರಿ' ಚಿತ್ರ ಬಿಡುಗಡೆ ದಿನಾಂಕ ಫಿಕ್ಸ್

ಚಿತ್ರದಲ್ಲಿ ತಮ್ಮ ಗಾಯನದ ಮೂಲಕ ಜನಪ್ರಿಯರಾಗಿರುವ ಚಂದನ್ ಶೆಟ್ಟಿ ಮೊದಲ ಬಾರಿಗೆ ನಾಯಕನಾಗಿ ನಟಿಸಿದ್ದಾರೆ. ಚಂದನ್ ಅವರಿಗೆ ಜೋಡಿಯಾಗಿ ಅಪೂರ್ವ ಅವರು ನಟಿಸಿದ್ದಾರೆ. ಹಾಡೊಂದರಲ್ಲಿ ಸಂಜನಾ ಆನಂದ್ ಅವರು ಕಾಣಿಸಿಕೊಂಡಿದ್ದಾರೆ.

ನವರಸನ್ ನಿರ್ಮಾಣ‌ದ, ಕಿರಣ್ ಕುಮಾರ್ ಚೊಚ್ಚಲ ನಿರ್ದೇಶನದ “ಸೂತ್ರಧಾರಿ” ಚಿತ್ರ ಮೇ 9 ರಂದು ಬಿಡುಗಡೆಯಾಗಲಿದೆ.

ಚಿತ್ರದಲ್ಲಿ ತಮ್ಮ ಗಾಯನದ ಮೂಲಕ ಜನಪ್ರಿಯರಾಗಿರುವ ಚಂದನ್ ಶೆಟ್ಟಿ ಮೊದಲ ಬಾರಿಗೆ ನಾಯಕನಾಗಿ ನಟಿಸಿದ್ದಾರೆ. ಚಂದನ್ ಅವರಿಗೆ ಜೋಡಿಯಾಗಿ ಅಪೂರ್ವ ಅವರು ನಟಿಸಿದ್ದಾರೆ. ಹಾಡೊಂದರಲ್ಲಿ ಸಂಜನಾ ಆನಂದ್ ಅವರು ಕಾಣಿಸಿಕೊಂಡಿದ್ದಾರೆ.

ಇತ್ತೀಚೆಗಷ್ಟೇ ನಿರ್ಮಾಪಕರಾದ ಚೇತನ್ ಗೌಡ, ಮುನೇಗೌಡ ಹಾಗೂ ರಾಜೇಶ್ ಅವರು “ಸೂತ್ರಧಾರಿ” ಚಿತ್ರದ ಬಿಡುಗಡೆ ದಿನಾಂಕ ಅನಾವರಣ ಮಾಡಿದ್ದು, ಚಿತ್ರ ಯಶಸ್ವಿಯಾಗಲೆಂದು ಹಾರೈಸಿದರು.

ಈ ವೇಳೆ ಮಾತನಾಡಿದ ನಿರ್ಮಾಪಕ ನವರಸನ್ ಅವರು, ನಾನು ನಿರ್ಮಾಪಕ ಮತ್ತು ನಿರ್ದೇಶಕ ಮಾತ್ರ ಅಲ್ಲ. ವಿತರಕ ಕೂಡ. ಸುಮಾರು 200 ಚಿತ್ರಗಳನ್ನು ವಿತರಣೆ ಮಾಡಿದ್ದೇನೆ. ಕಳೆದ ವರ್ಷದಿಂದ ಇಲ್ಲಿಯವರೆಗೆ ವಾರಕ್ಕೆ 10 ರಂತೆ ಸಿನಿಮಾಗಳು ಬಿಡುಗಡೆಯಾಗುತ್ತಿದೆ. ಹಾಗಾಗಿ ನಾನು ಈ ಸಮಯದಲ್ಲಿ ನನ್ನ ಚಿತ್ರವನ್ನು ಬಿಡುಗಡೆ ಮಾಡಲಿಲ್ಲ‌. ಈಗ 40 ದಿನಗಳ ಮುಂಚೆ ಚಿತ್ರದ ದಿನಾಂಕ ಘೋಷಣೆ ಮಾಡುತ್ತಿದ್ದೇನೆ. ಮೇ 9 ರಂದು ನಮ್ಮ ಚಿತ್ರ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ ಎಂದು ಹೇಳಿದರು.

ಚಿತ್ರತಂಡದ ಎಲ್ಲರ ಸಹಕಾರದಿಂದ ಚಿತ್ರ ಉತ್ತಮವಾಗಿ ಮೂಡಿಬಂದಿದೆ. ಇಂದಿನಿಂದ ಚಿತ್ರದ ಪ್ರಚಾರ ಕಾರ್ಯ ಆರಂಭಿಸಿದ್ದೇವೆ. ಈ ಚಿತ್ರದಲ್ಲಿ ನೀವು ಚಂದನ್ ಶೆಟ್ಟಿ ಅವರನ್ನು ವಿಭಿನ್ನ ಪಾತ್ರದಲ್ಲಿ ನೋಡಬಹುದು. ಬಿಡುಗಡೆ ದಿನಾಂಕ ಅನಾವರಣ ಮಾಡಿಕೊಟ್ಟ ನಿರ್ಮಾಪಕರಿಗೆ ಹಾಗೂ ನನ್ನ‌ ತಂಡಕ್ಕೆ ಈ ಸಮಯದಲ್ಲಿ ಧನ್ಯವಾದ ತಿಳಿಸುತ್ತೇನೆಂದು ತಿಳಿಸಿದರು.

ನಾಯಕ ಚಂದನ್ ಶೆಟ್ಟಿ ಅವರು ಮಾತನಾಡಿ, ನಾಯಕನಾಗಿ ಇದು ಮೊದಲ ಸಿನಿಮಾ‌.‌ ನನ್ನ ಪಾತ್ರ ಬಹಳ ಚೆನ್ನಾಗಿದೆ. ಈ ಚಿತ್ರದಲ್ಲಿ ನಟಿಸಿದ ನಂತರ ನನ್ನ‌ ಜೀವನದಲ್ಲಿ ಸಾಕಷ್ಟು ಬದಲಾವಣೆ ಆಗಿದೆ. ಈಗ ನಾನು ಬಹಳ ದಿನಗಳಿಂದ ಕಾಯುತ್ತಿದ್ದ “ಸೂತ್ರಧಾರಿ” ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಮೇ 9 ರಂದು ಬಿಡುಗಡೆಯಾಗಲಿದೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಹಾಡುಗಳು ಅಧಿಕ ಮಿಲಿಯನ್ ವೀಕ್ಷಣೆಯಾಗಿ ಟ್ರೆಂಡಿಂಗ್ ನಲ್ಲಿದೆ. ಎಲ್ಲರ ಸಹಕಾರದಿಂದ ಉತ್ತಮವಾಗಿ ಮೂಡಿಬಂದಿರುವ ಈ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು.

ನಿರ್ದೇಶಕ ಕಿರಣ್ ಕುಮಾರ್ ಮಾತನಾಡಿ, ಇದು ನನ್ನ ಮೊದಲ‌ ನಿರ್ದೇಶನದ ಸಿನಿಮಾ. ಚಿತ್ರ ಚೆನ್ನಾಗಿ ‌ಮೂಡಿಬಂದಿದೆ.‌ ನಾನು ಛಾಯಾಗ್ರಾಹಕ ಪಿ.ಕೆ.ಹೆಚ್ ದಾಸ್ ಅವರ ಬಳಿ ಸಹಾಯಕನಾಗಿ ಕೆಲಸ‌ಮಾಡಿದ್ದೆ. ನನ್ನ ಮೊದಲ ನಿರ್ದೇಶನದ ಚೊಚ್ಚಲ ಚಿತ್ರಕ್ಕೆ ಗುರುಗಳೇ ಛಾಯಾಗ್ರಹಣ ಮಾಡಿರುವುದು ನೀಡಿರುವುದು ಖುಷಿಯ ವಿಚಾರ. ಅವಕಾಶ ನೀಡಿದ ನವರಸನ್ ಅವರಿಗೆ ಧನ್ಯವಾದ ಎಂದರು. ಚಿತ್ರದಲ್ಲಿ ಗಣೇಶ್ ನಾರಾಯಣ್, ಪ್ರಶಾಂತ್ ನಟನ, ಮೀರಾ ಶ್ರೀ, ಸುಷ್ಮಿತಾ ಮತ್ತು ಪಲ್ಲವಿ ನಟಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

SCROLL FOR NEXT