ಬೆಂಗಳೂರು: ಕ್ಯಾನ್ಸರ್ ಸಮಸ್ಯೆಯಾಗಿ ಅಮೆರಿಕದಲ್ಲಿ ಚಿಕಿತ್ಸೆ ಪಡೆದು ನಟ ಶಿವರಾಜ್ ಕುಮಾರ್ ಗುಣಮುಖರಾಗಿ ಭಾರತಕ್ಕೆ ವಾಪಸ್ ಆದ ಬೆನ್ನಲ್ಲೇ ಇದೀಗ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಕೂಡ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.
ಶಿವರಾಜ್ಕುಮಾರ್ ಅವರ ಪತ್ನಿ ಗೀತಾ ಶಿವರಾಜ್ಕುಮಾರ್ (Geetha Shivarajkumar) ಅವರು ಕತ್ತಿನ ಭಾಗದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ ಎಂದು ತಿಳಿದುಬಂದಿದೆ.
ಗೀತಾ ಶಿವರಾಜ್ಕುಮಾರ್ ಅವರಿಗೆ ನರದ ಸಮಸ್ಯೆಯಿಂದ ಕತ್ತಿನ ಭಾಗದಲ್ಲಿ ನೋವು ಕಾಣಿಸಿಕೊಂಡಿತ್ತು ಎನ್ನಲಾಗಿದೆ. ಈ ಮೊದಲೇ ಅವರು ಇದಕ್ಕೆ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಬೇಕಿತ್ತು.
ಆದರೆ ಅದು ಸಾಧ್ಯವಾಗಿರಲಿಲ್ಲ. ಈಗ ಗೀತಾ ಅವರು ಕತ್ತಿನ ಭಾಗದಲ್ಲಿ ಸರ್ಜರಿ ಮಾಡಿಸಿಕೊಂಡಿದ್ದಾರೆ ಎನ್ನಲಾಗಿದೆ. ಅವರು ಬೇಗ ಚೇತರಿಕೆ ಕಾಣಲಿ ಎಂದು ಫ್ಯಾನ್ಸ್ ಹಾರೈಸುತ್ತಿದ್ದಾರೆ.
ಶಿವರಾಜ್ಕುಮಾರ್ಗೆ ಅವರಿಗೆ ಕ್ಯಾನ್ಸರ್ ಕಾಣಿಸಿಕೊಂಡಾಗಿನಿಂದ ಕ್ಯಾನ್ಸರ್ಗೆ ಚಿಕಿತ್ಸೆ ಪಡೆಯುವವರೆಗೆ ಗೀತಾ ಅವರು ಬೆಂಬಲವಾಗಿ ನಿಂತಿದ್ದರು. ಪ್ರತಿ ಹಂತದಲ್ಲೂ ಪತಿಗೆ ಧೈರ್ಯ ತುಂಬಿದ್ದರು.