ನಟ ಮಡೆನೂರು ಮನು 
ಸಿನಿಮಾ ಸುದ್ದಿ

Love Sex Aur Dhokha: ಕಿರುತೆರೆ ನಟಿ ಮೇಲೆ ಅತ್ಯಾಚಾರ ಆರೋಪ; ನಟ ಮಡೆನೂರು ಮನು ವಿರುದ್ಧ FIR

ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದ್ದು,ಕಿರುತೆರೆ ನಟಿಯೊಬ್ಬರು ಇವರ ವಿರುದ್ಧ ಈ ರೀತಿಯ ಆರೋಪ ಹೊರಿಸಿದ್ದಾರೆ.

ಬೆಂಗಳೂರು: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ನಟ ಮಡೆನೂರು ಮನು (Madenuru Manu) ವಿರುದ್ಧ ಕಿರುತೆರೆ ನಟಿಯೊಬ್ಬರು ಅತ್ಯಾಚಾರದ ಗಂಭೀರ ಆರೋಪ ಮಾಡಿದ್ದು ಈ ಸಂಬಂಧ ನಟನ ವಿರುದ್ಧ FIR ದಾಖಲಾಗಿದೆ.

ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದ್ದು,ಕಿರುತೆರೆ ನಟಿಯೊಬ್ಬರು ಇವರ ವಿರುದ್ಧ ಈ ರೀತಿಯ ಆರೋಪ ಹೊರಿಸಿದ್ದಾರೆ.

ಪ್ರಸ್ತುತ ಸಂತ್ರಸ್ಥ ನಟಿಯನ್ನು ಪೊಲೀಸರು ವೈದ್ಯಕೀಯ ಪರೀಕ್ಷೆಗೊಳಪಡಿಸಿದ್ದು, ನಟ ಮಡೆನೂರು ಮನು ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ. ವೈದ್ಯಕೀಯ ಪರೀಕ್ಷಾ ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. ಸದ್ಯ ಅನ್ನಪೂರ್ಣೇಶ್ವರಿ ನಗರ ಪೊಲೀಸರಿಂದ ಮನುಗಾಗಿ ಹುಡುಕಾಟ ನಡೆದಿದೆ.

ನಟಿ ಆರೋಪವೇನು?

ಸಂತ್ರಸ್ಥ ನಟಿ ಆರೋಪಿಸಿರುವಂತೆ ಚಿತ್ರರಂಗದಲ್ಲಿ ಕೆಲಸ ಮಾಡುವಾಗ ಮಡೆನೂರು ಮನುಗೆ ಕಿರುತೆರೆ ನಟಿ ಪರಿಚಯ ಆಗಿದೆ. ಆ ಬಳಿಕ ಇವರ ಮಧ್ಯೆ ಗೆಳೆತನ ಬೆಳೆದಿದೆ. ಈಗ ‘ನನ್ನ ಮೇಲೆ ಮನು ಅತ್ಯಾಚಾರ ಮಾಡಿದ್ದಾನೆ. ಅಲ್ಲದೆ ಬಲವಂತವಾಗಿ ನನ್ನ ನಗ್ನ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದಾನೆ ಎಂದು ನಟಿ ಆರೋಪಿಸಿದ್ದಾರೆ.

ಎಫ್​ಐಆರ್​​ನಲ್ಲೇನಿದೆ?

ಸಂತಸ್ತೆಗೆ ಮನು ನಾಗರಭಾವಿಯಲ್ಲಿ ಬಾಡಿಗೆ ಮನೆ ಹುಡುಕಿಕೊಟ್ಟಿದ್ದ. 2018ರಿಂದಲೂ ಮನುವಿನ ಪರಿಚಯ ಸಂತ್ರಸ್ತೆಗೆ ಇತ್ತು. ‘ಕಾಮಿಡಿ ಕಿಲಾಡಿಗಳು’ ಕಾರ್ಯಕ್ರಮದಲ್ಲಿ ಇಬ್ಬರೂ ಜೊತೆಯಾಗಿ ಕೆಲಸ ಮಾಡಿದ್ದರು. ಮೊದಲಿಗೆ ಪರಿಚಯ ಆಗಿ ಸ್ನೇಹ ಬೆಳೆದಿತ್ತು. ಒಮ್ಮೆ ಶಿಕಾರಿಪುರಕ್ಕೆ ಹೋದಾಗ ಹೋಟೆಲ್ ರೂಂಗೆ ಮನು ನಟಿಯನ್ನು ಕರೆಸಿಕೊಂಡಿದ್ದರು. ಬಳಿಕ ನನ್ನ ಮೇಲೆ ಅತ್ಯಾಚಾರ ಮಾಡಿದ್ದಾಗಿ ಅವರು ಆರೋಪಿಸಿದ್ದಾರೆ. ಈ ವೇಳೆ ಅವರು ಪ್ರೆಗ್ನೆಂಟ್ ಕೂಡ ಆಗಿದ್ದರು. ಆ ಬಳಿಕ ಮನು ಮಾತ್ರೆ ನೀಡಿ ಗರ್ಭಪಾತ ಮಾಡಿಸಿದ್ದರು ಎಂದು ನಟಿ ಆರೋಪಿಸಿದ್ದಾರೆ.

ಮೊದಲೇ ವಿವಾಹವಾಗಿತ್ತು?

ಇನ್ನು ನಟ ಮಡೆನೂರು ಮನುಗೆ ಮೊದಲೇ ವಿವಾಹವಾಗಿತ್ತು ಎನ್ನಲಾಗಿದೆ. ಮನುಗೆ ಮದುವೆ ಆಗಿ ಒಂದು ಮಗು ಕೂಡ ಇದೆ ಎಂದು ಹೇಳಲಾಗಿದೆ.

ಅಂದಹಾಗೆ ನಟ ಮಡೆನೂರು ಮನು ಪ್ರಸ್ತುತ ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದಲ್ಲಿ ನಾಯಕ ನಟನಾಗಿ ನಟಿಸುತ್ತಿದ್ದು, ಸಿನಿಮಾ ರಿಲೀಸ್ ಸಂದರ್ಭದಲ್ಲಿಯೇ ನಟಿ ದೂರು ನೀಡಿರುವುದು ಚಿತ್ರ ಬಿಡುಗಡೆಗೆ ತೀವ್ರ ಹಿನ್ನಡೆಯಾದಂತಾಗಿದೆ. ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ನಾಯಕನಾಗಿ ಮಡೆನೂರು ಮನು ಅವರು ನಟಿಸಿದ್ದಾರೆ. ಈ ಚಿತ್ರ ಮೇ 23ರಂದು ಬಿಡುಗಡೆ ಆಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಗ್ರೇಟರ್‌ ಬೆಂಗಳೂರು ಪಾಲಿಕೆ ಚುನಾವಣೆಯಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಟಿಕೆಟ್‌: ಡಿಕೆ ಶಿವಕುಮಾರ್ ಘೋಷಣೆ

ಅನಂತ್‌ನಾಗ್‌: ಕೂಂಬಿಂಗ್ ಕಾರ್ಯಾಚರಣೆ ವೇಳೆ ಇಬ್ಬರು ಸೈನಿಕರು ನಾಪತ್ತೆ!

ಬೆಂಗಳೂರು: CJI ಮೇಲೆ ಶೂ ಎಸೆಯಲು ಯತ್ನಿಸಿದ ವಕೀಲನ ವಿರುದ್ಧ ಎಫ್ಐಆರ್ ದಾಖಲು

ಸ್ವದೇಶಿ ಮಂತ್ರ: Gmailನಿಂದ Zoho Mailಗೆ ಅಮಿತ್ ಶಾ ಶಿಫ್ಟ್; ಟ್ರಂಪ್‌ಗೆ ಠಕ್ಕರ್

ತಾನು ಯಾವತ್ತಿಗೂ ವಿಮರ್ಶಾತೀತ ಎಂದೆಣಿಸುವುದರಲ್ಲಿ ಯಾವ ನ್ಯಾಯವಿದೆ? (ತೆರೆದ ಕಿಟಕಿ)

SCROLL FOR NEXT