ಕಮಲ್ ಹಾಸನ್-ಶಿವಣ್ಣ 
ಸಿನಿಮಾ ಸುದ್ದಿ

'ತಮಿಳಿನಿಂದ ಕನ್ನಡ ಹುಟ್ಟಿತು': ಶಿವಣ್ಣನ ಎದುರೇ ಕಮಲ್ ಹಾಸನ್ ಹೇಳಿಕೆ; ವಿವಾದ ಸೃಷ್ಟಿ, Video!

ತಮಿಳು ನಟ ಕಮಲ್ ಹಾಸನ್ ಥಗ್ ಲೈಫ್ ಪ್ರಚಾರದಲ್ಲಿ ನಿರತರಾಗಿದ್ದಾರೆ. ಇದೇ ವೇಳೆ ಮಾತನಾಡುವಾಗ ಕಮಲ್ ಹಾಸನ್ ತಮಿಳಿನಿಂದ ಕನ್ನಡ ಹುಟ್ಟಿದ್ದು ಎಂದು ಹೇಳಿಕೆ ಕೊಟ್ಟಿದ್ದಾರೆ.

ತಮಿಳು ನಟ ಕಮಲ್ ಹಾಸನ್ ಥಗ್ ಲೈಫ್ ಪ್ರಚಾರದಲ್ಲಿ ನಿರತರಾಗಿದ್ದಾರೆ. ಇದೇ ವೇಳೆ ಮಾತನಾಡುವಾಗ ಕಮಲ್ ಹಾಸನ್ ತಮಿಳಿನಿಂದ ಕನ್ನಡ ಹುಟ್ಟಿದ್ದು ಎಂದು ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ. ಅದು ನಟ ಶಿವರಾಜ್​ಕುಮಾರ್ ಅವರ ಎದುರೇ ಈ ಹೇಳಿಕೆ ನೀಡಿದ್ದು ಈ ವಿಡಿಯೋ ಇದೀಗ ವೈರಲ್ ಆಗಿದೆ.

ಶಿವರಾಜ್ ಕುಮಾರ್ ಅವರು ಥಗ್ ಲೈಫ್​ ಕಾರ್ಯಕ್ರಮದಲ್ಲಿ ಭಾಗಿಯಾಗಿ ಚಿತ್ರಕ್ಕೆ ಬೆಂಬಲ ನೀಡಿದರು. ವೇದಿಕೆ ಮೇಲೆ ಮಾತನಾಡಿದ್ದ ಕಮಲ್ ಹಾಸನ್ ಅವರು, ಡಾ.ರಾಜ್​ಕುಮಾರ್ ಬಗ್ಗೆ ತಮಗಿರುವ ಗೌರವ ಹಂಚಿಕೊಂಡಿದ್ದರು. ಕನ್ನಡಿಗರ ಪ್ರೀತಿ, ಗೌರವಕ್ಕೆ ವಂದಿಸುತ್ತಲೇ ನಮ್ಮ ತಮಿಳುನಾಡು ಭಾಷೆಯಿಂದ ನಿಮ್ಮ ಕನ್ನಡ ಹುಟ್ಟಿದ್ದು ಎಂದು ಕಮಲ್ ಹಾಸನ್ ಹೇಳಿದ್ದಾರೆ.

ಕಮಲ್ ಹಾಸನ್​ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಕನ್ನಡ ತಮಿಳಿನಿಂದ ಬಂದಿಲ್ಲ. ತಮಿಳಿಗಿಂತ ಕನ್ನಡ ಭಾಷೆಯೇ ಪುರಾತನವಾದದ್ದು ಎಂದು ನೆಟ್ಟಿಗರು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್