ಗಿಲ್ಲಿಗೆ ಹೊಡೆದ ರಿಷಾ ಗೌಡ 
ಸಿನಿಮಾ ಸುದ್ದಿ

Bigg Boss Kannada 12: ಗಿಲ್ಲಿಗೆ ಹೊಡೆದ ರಿಷಾ ಗೌಡ; ಅರ್ಧದಲ್ಲೇ ಡೊಡ್ಮನೆಯಿಂದ 'ಔಟ್' ಆಗ್ತಾರಾ?

ರಿಷಾ ಅವರ ಬಟ್ಟೆಯನ್ನು ತಂದು ಬಾತ್​ರೂಂ ಹೊರ ಭಾಗದಲ್ಲಿರುವ ನೆಲದ ಮೇಲೆ ಹಾಕಿದ್ದಾರೆ. ಇದು ರಿಷಾ ಕೋಪಕ್ಕೆ ಕಾರಣ ಆಗಿದೆ. ‘ಗಿಲ್ಲಿ’ ಎಂದು ಕೂಗುತ್ತಾ ಬಂದ ಅವರು, ಗಿಲ್ಲಿಗೆ ಹೊಡೆದಿದ್ದಾರೆ.

ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 12ರ ಮುಂದಿನ ಸಂಚಿಕೆಯಲ್ಲಿ ದೊಡ್ಡ ಹೈಡ್ರಾಮ ನಡೆದಿದೆ. ಸ್ಪರ್ಧಿಗಳಾದ ರಿಷಾ ಗೌಡ ಹಾಗೂ ಗಿಲ್ಲಿ ನಡುವೆ ದೊಡ್ಡ ಜಗಳ ನಡೆದಿದೆ. ಬಕೆಟ್ ವಿಚಾರವಾಗಿ ಪರಿಸ್ಥಿತಿ ಕೈ ಮೀರಿದ್ದು, ರಿಷಾ ಗೌಡ ಗಿಲ್ಲಿಗೆ ಹೊಡೆದಿದ್ದಾರೆ. ವಾಹಿನಿ ಬಿಡುಗಡೆ ಮಾಡಿರುವ ಪ್ರೋಮೋದಲ್ಲಿ ಈ ದೃಶ್ಯವಿದ್ದು, ವೀಕ್ಷಕರು ನಾನಾ ರೀತಿಯಲ್ಲಿ ಪ್ರತಿಕ್ರಿಯಿಸುತ್ತಿದ್ದಾರೆ.

ರಿಷಾ ಗೌಡ ಗಿಲ್ಲಿಗೆ ಹೊಡೆದದ್ದು ನಿಜವೇ? ಅಂದಹಾಗೆ, ಯಾಕೆ ಈ ಜಗಳ ಶುರುವಾಯಿತು ಅಂದ್ರೆ ಬಾತ್​ರೂಂನಲ್ಲಿ ರಿಷಾ ಅವರ ಬಳಿ ಬಕೆಟ್ ಕೊಡುವಂತೆ ಗಿಲ್ಲಿ ಅವರು ಮನವಿ ಮಾಡಿದ್ದಾರೆ. ಆದರೆ, ರಿಷಾ ಇದಕ್ಕೆ ಬಗ್ಗಲಿಲ್ಲ. ಏನು ಮಾಡಬೇಕು ಎಂಬುದು ನನಗೆ ಗೊತ್ತಿದೆ ಎಂದು ಹೊರಟ ಗಿಲ್ಲಿ ಅವರು, ರಿಷಾ ಅವರ ಬಟ್ಟೆಯನ್ನು ತಂದು ಬಾತ್​ರೂಂ ಹೊರ ಭಾಗದಲ್ಲಿರುವ ನೆಲದ ಮೇಲೆ ಹಾಕಿದ್ದಾರೆ. ಇದು ರಿಷಾ ಕೋಪಕ್ಕೆ ಕಾರಣ ಆಗಿದೆ. ‘ಗಿಲ್ಲಿ’ ಎಂದು ಕೂಗುತ್ತಾ ಬಂದ ಅವರು, ಗಿಲ್ಲಿಗೆ ಹೊಡೆದಿದ್ದಾರೆ.

ರಿಷಾ ಮಾಡಿದ್ದು ಬಿಗ್ ಬಾಸ್ ನಿಯಮಗಳಿಗೆ ವಿರುದ್ದವೇ?

ಇಷ್ಟಕ್ಕೆ ರಿಷಾ ನಿಲ್ಲಲಿಲ್ಲ. ರಿಷಾ ಅವರು ಗಿಲ್ಲಿ ಮೇಲೆ ಕೂಗಾಡಿದ್ದಾರೆ. ಗಿಲ್ಲಿ ಬಟ್ಟೆಗಳನ್ನೆಲ್ಲ ಎತ್ತಿ ಬೀಸಾಕಿದ್ದಾರೆ. ಸೂಟ್​ಕೇಸ್​ನ ಒದ್ದಿದ್ದಾರೆ ಆ ಬಳಿಕ ಗಿಲ್ಲಿಯನ್ನು ತಳ್ಳಿದ್ದಾರೆ. ರಿಷಾ ಮಾಡಿದ್ದು ಬಿಗ್ ಬಾಸ್ ಮೂಲ ನಿಯಮಗಳಿಗೆ ವಿರುದ್ಧವಾಗಿದೆ. ಕಳೆದ ಸೀಸನ್​ಗಳಲ್ಲಿ ಈ ರೀತಿ ಮಾಡಿದಾಗ ತಕ್ಷಣವೇ ಅವರನ್ನು ದೊಡ್ಮನೆಯಿಂದ ಹೊರಕ್ಕೆ ಹಾಕಲಾಗಿತ್ತು. ಈ ಬಾರಿಯೂ ಅದೇ ರೀತಿ ಮಾಡಲಾಗುತ್ತದೆಯೇ ಎನ್ನುವ ಚರ್ಚೆ ವೀಕ್ಷಕರಲ್ಲಿ ನಡೆದಿದೆ.

ಬಿಗ್ ಬಾಸ್​ನ ಮೂಲ ನಿಯಮ ಏನು?

‘ಯಾರ ಮೇಲೆ ಯಾರೂ ಹಲ್ಲೆ ಮಾಡಬಾರದು’ ಎಂಬುದು ಬಿಗ್ ಬಾಸ್​ನ ಮೂಲ ನಿಯಮಗಳಲ್ಲಿ ಒಂದು. ಈ ರೀತಿ ಮಾಡಿದರೆ ಆ ಕ್ಷಣವೇ ಅವರನ್ನು ಮನೆಯಿಂದ ಹೊರಕ್ಕೆ ಕಳುಹಿಸಲಾಗುತ್ತದೆ. ಈ ಹಿಂದಿನ ಅನೇಕ ಆವೃತ್ತಿಗಳಲ್ಲಿ ಈ ರೀತಿ ಆದ ಸಾಕಷ್ಟು ಉದಾಹರಣೆ ಇದೆ. ಕಳೆದ ಸೀಸನ್​ನಲ್ಲಿ ರಂಜಿತ್ ಅವರು ಇದೇ ರೀತಿ ವಕೀಲ ಜಗದೀಶ್ ಮೇಲೆ ಹಲ್ಲೆ ಮಾಡಿ, ಮನೆಯಿಂದ ಹೊರ ಹೋಗಿದ್ದರು. ಈಗ ಗಿಲ್ಲಿ ಮೇಲೆ ರಿಷಾ ಅವರು ಕೈ ಮಾಡಿದ್ದಾರೆ.

ಈ ವಿಚಾರ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಅವರನ್ನು ಮನೆಯಿಂದ ಹೊರಗೆ ಕಳುಹಿಸಬೇಕು ಎಂದು ಆನ್ ಲೈನ್ ನಲ್ಲಿ ಕೆಲ ವೀಕ್ಷಕರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಬಿಗ್ ಬಾಸ್ ಈ ಬಗ್ಗೆ ಯಾವ ರೀತಿಯ ತೀರ್ಮಾನ ಕೈಗೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಚಿವ ಸಂಪುಟ ಪುನಾರಚನೆ: ಆತುರದ ನಿರ್ಧಾರ ಕೈಗೊಳ್ಳದೆ, ಕಾದು ನೋಡುವ ತಂತ್ರ ಅಳವಡಿಸಿಕೊಂಡ 'ಕೈ' ಕಮಾಂಡ್

ಬಿಹಾರ ಚುನಾವಣೆಯಲ್ಲಿ ಮಹಾಘಟಬಂಧನ್‌ಗೆ ಆಡಳಿತ ವಿರೋಧಿ ಅಲೆ ಸಹಾಯ ಮಾಡುತ್ತದೆ: ಸಿಎಂ ಸಿದ್ದರಾಮಯ್ಯ

ಉಪ ಮುಖ್ಯಮಂತ್ರಿಯಾಗಲು ನಾನು ಸಿದ್ಧ: ಹೈಕಮಾಂಡ್ ಬಯಸಿದರೆ ಸಚಿವ ಸ್ಥಾನ ತ್ಯಾಗ; ಜಮೀರ್‌ ಅಹ್ಮದ್‌ ಖಾನ್‌

ನ.18ರಿಂದ Bengaluru Tech Summit 2025: ‘ಡೀಪ್‌ಟೆಕ್ ದಶಕ’ಕ್ಕೆ 600 ಕೋಟಿ ರೂ. ಹೂಡಿಕೆ; ಸಚಿವ ಪ್ರಿಯಾಂಕ್ ಖರ್ಗೆ

ನಗರದ ಘನತೆ, ಸಂಸ್ಕೃತಿಗೆ ಧಕ್ಕೆಯಾಗದಂತೆ ಗ್ರೇಟರ್ ಮೈಸೂರು ರಚನೆ: ನನಗೂ ಅರಸುಗೂ ಹೋಲಿಕೆ ಬೇಡ; ಸಿಎಂ ಗರಂ!

SCROLL FOR NEXT