ಸಂಧ್ಯಾ ಜೊತೆ ಉಗ್ರಂ ಮಂಜು ನಿಶ್ಚಿತಾರ್ಥ 
ಸಿನಿಮಾ ಸುದ್ದಿ

ಉಗ್ರಂ ಮಂಜುಗೆ ಕೂಡಿಬಂದ ಕಂಕಣಭಾಗ್ಯ; ಸಂಧ್ಯಾ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ಬಿಗ್ ಬಾಸ್ ಖ್ಯಾತಿಯ ನಟ!

ನಿಶ್ಚಿತಾರ್ಥ ಕಾರ್ಯಕ್ರಮ ಆತ್ಮೀಯರು, ಸ್ನೇಹಿತರ ಸಮ್ಮುಖದಲ್ಲಿ ನೆರವೇರಿದ್ದು, ಜನವರಿಯಲ್ಲಿ ಮದುವೆ ನಡೆಯಲಿದೆ ಎಂದು ಹೇಳಲಾಗಿದೆ.

ಬೆಂಗಳೂರು: ಬಿಗ್ ಬಾಸ್ ಕನ್ನಡ 11ನೇ ಸೀಸನ್ ಸ್ಪರ್ಧಿಯಾಗಿದ್ದ ನಟ ಉಗ್ರಂ ಮಂಜು ಬದುಕಿನಲ್ಲಿ ಸಂತೋಷದ ವಿಚಾರ ನಡೆದಿದೆ. ಇಷ್ಟು ದಿನ ಮದುವೆ ಯಾವಾಗ ಎನ್ನುತ್ತಿದ್ದವರಿಗೆ ಕೊನೆಗೂ ಉತ್ತರ ಸಿಕ್ಕಂತಾಗಿದೆ. ಉಗ್ರಂ ಮಂಜು ಅವರು ಸಂಧ್ಯಾ ಅವರೊಂದಿಗೆ ಇಂದು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ನಿಶ್ಚಿತಾರ್ಥ ಕಾರ್ಯಕ್ರಮ ಆತ್ಮೀಯರು, ಸ್ನೇಹಿತರ ಸಮ್ಮುಖದಲ್ಲಿ ನೆರವೇರಿದ್ದು, ಜನವರಿಯಲ್ಲಿ ಮದುವೆ ನಡೆಯಲಿದೆ ಎಂದು ಹೇಳಲಾಗಿದೆ.

ಈ ವಿಚಾರವನ್ನು ಮಂಜು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದು, ಇಬ್ಬರು ಉಂಗುರ ಬದಲಿಸಿಕೊಳ್ಳುತ್ತಿರುವ ಚಿತ್ರವನ್ನು ಹಂಚಿಕೊಂಡಿದ್ದಾರೆ. 'ಬದುಕಿನ ಹೊಸ ಅಧ್ಯಾಯ ಆರಂಭವಾಗಿದೆ… ನಿಮ್ಮ ಆಶೀರ್ವಾದ ನಮ್ಮ ಮೇಲಿರಲಿ. ದೇವರ ಕೃಪೆಯಿಂದ, ಕುಟುಂಬದ ಆಶೀರ್ವಾದದಿಂದ… ನಾವು ಜೀವನದ ಹೊಸ ಹಾದಿಗೆ ಕಾಲಿಟ್ಟಿದ್ದೇವೆ. ಹೊಸ ಬಂಧದ ಆರಂಭ… ನಿಶ್ಚಿತಾರ್ಥದ ಸುಂದರ ಕ್ಷಣ ನಿಮ್ಮೆಲ್ಲರೊಂದಿಗೆ ಹಂಚಿಕೊಳ್ಳುತ್ತಿದ್ದೇವೆ' ಎಂದು ಬರೆದಿದ್ದಾರೆ.

ಸಂಧ್ಯಾ ಅವರು ಸ್ಪರ್ಶ್ ಆಸ್ಪತ್ರೆಯಲ್ಲಿ ಟ್ರಾನ್ಸ್​ಪ್ಲಾಂಟ್ ಕೋಆರ್ಡಿನೇಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಬಿಗ್ ಬಾಸ್ ಕನ್ನಡ ಸೀಸನ್ ಬಳಿಕ ಉಗ್ರಂ ಮಂಜು ಸಾಕಷ್ಟು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಹಲವು ಕುಟುಂಬಗಳ ಹೆಣ್ಮಕ್ಕಳ ಮರ್ಯಾದೆ ಕಳೆದ ಪುಣ್ಯಾತ್ಮ ಡಿಕೆಶಿ; ಪ್ರಜ್ವಲ್​​ ಕೇಸ್​ ಹಿಂದಿದ್ದವರಿಂದ ಮಾಜಿ ಸಿಎಂ ಸ್ಟಿಂಗ್​​ ಆಪರೇಷನ್: HDK ಹೊಸ ಬಾಂಬ್

ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಶನ್: ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಪೆನ್ ಡ್ರೈವ್ ಸಲ್ಲಿಕೆ; ನ್ಯಾಯಾಂಗ ತನಿಖೆಗೆ ಆಗ್ರಹ!

Jantar Mantar ಬಳಿ ಭಾರೀ ಹೈಡ್ರಾಮಾ: ಬ್ಯಾರಿಕೇಡ್ ದಾಟಿದ CJP ನಾಯಕರು ಪೊಲೀಸ್ ವಶಕ್ಕೆ; ಪ್ರತಿರೋಧ ನಿಷೇಧ ಸಾಧ್ಯವಿಲ್ಲ-ಕೇಂದ್ರದ ವಿರುದ್ಧ ದೀಪ್ಕೆ ಆಕ್ರೋಶ

Batman masks, offline maps: ನಟಿ ರಿಚಾ ಚಡ್ಡಾ ಐಡಿಯಾ ಫಾಲೋ ಮಾಡ್ತಿರುವ ಯುವಕರು; Facial recognition camera ಫುಲ್ ಕನ್‌ಫ್ಯೂಸ್, ದೆಹಲಿ ಪೊಲೀಸರು ತಬ್ಬಿಬ್ಬು..!

ಪಂಜಾಬ್: ಫೇಸ್‌ಬುಕ್ ಲೈವ್‌ನಲ್ಲಿರುವಾಗಲೇ ಮಾದಕವಸ್ತು ವಿರೋಧಿ ಹೋರಾಟಗಾರ ಪರ್ವಿಂದರ್ ಸಿಂಗ್ ಜೋತಾ ಗುಂಡೇಟಿಗೆ ಬಲಿ!