ಜಿಎಸ್ ಟಿ ಪೋಸ್ಟರ್ 
ಸಿನಿಮಾ ಸುದ್ದಿ

ಸೃಜನ್ ಲೋಕೇಶ್ ಅಭಿನಯದ ಬಹು ನಿರೀಕ್ಷಿತ 'GST' ಟ್ರೈಲರ್ ರಿಲೀಸ್!

ಸಂದೇಶ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಸಂದೇಶ್ ಎನ್. ಅವರು ನಿರ್ಮಿಸಿರುವ ಈ ಚಿತ್ರವು ಹಾರರ್-ಕಾಮಿಡಿ ಕಥಾಹಂದರವನ್ನು ಹೊಂದಿದೆ.

ಟಾಕಿಂಗ್ ಸ್ಟಾರ್ ಸೃಜನ್ ಲೋಕೇಶ್ ಚೊಚ್ಚಲ ನಿರ್ದೇಶನದ ಜೊತೆಗೆ ನಾಯಕ ನಟನಾಗಿ ಅಭಿನಯಿಸಿರುವ ಬಹುನಿರೀಕ್ಷಿತ 'GST'ಚಿತ್ರದ ಟ್ರೈಲರ್ ರಿಲೀಸ್ ಆಗಿದೆ.

ಸಂದೇಶ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಸಂದೇಶ್ ಎನ್. ಅವರು ನಿರ್ಮಿಸಿರುವ ಈ ಚಿತ್ರವು ಹಾರರ್-ಕಾಮಿಡಿ ಕಥಾಹಂದರವನ್ನು ಹೊಂದಿದೆ. ಚಿತ್ರಕ್ಕೆ ಚಂದನ್ ಶೆಟ್ಟಿ ಅವರ ಸಂಗೀತ ಮತ್ತು ಸುರೇಶ್ ಅವರ ಛಾಯಾಗ್ರಹಣವಿದೆ.

ಈ ಚಿತ್ರದಲ್ಲಿ ಸೃಜನ್ ಲೋಕೇಶ್ ಅವರಿಗೆ ನಾಯಕಿಯಾಗಿ ರಜನಿ ಭಾರದ್ವಾಜ್ ನಟಿಸಿದ್ದಾರೆ. ಜೊತೆಗೆ ಅವರ ಗಿರಿಜಾ ಲೋಕೇಶ್ ಮತ್ತು ಸೃಜನ್ ಅವರ ಪುತ್ರ ಸುಕೃತ್ ಕೂಡ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಉಳಿದಂತೆ ಪ್ರಮೋದ್ ಶೆಟ್ಟಿ, ಶೋಭರಾಜ್, ಶರತ್ ಲೋಹಿತಾಶ್ವ, ನಿವೇದಿತಾ ಗೌಡ, ತಬಲಾ ನಾಣಿ, ರವಿಶಂಕರ್ ಗೌಡ ಮತ್ತು ವಿನೋದ್ ಗೊಬ್ಬರಗಾಲ ಮತ್ತಿತರರ ತಾರಾಬಳಗವಿದೆ. ಈ ಚಿತ್ರವು ನವೆಂಬರ್ 28 ರಂದು ರಾಜ್ಯಾದ್ಯಂತ ತೆರೆಗೆ ಬರಲು ಸಿದ್ಧವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜ್ಞಾನೇಶ್ ಕುಮಾರ್ ವಿರುದ್ಧ ದೆಹಲಿ, ಮುಂಬೈನಲ್ಲಿ ಬೃಹತ್ ಪ್ರತಿಭಟನೆ; 700 ಮಂದಿ ವಶಕ್ಕೆ

Flydubai ಘಟನೆ ಹಿಂದೆ ಯಾವುದೇ ಶಕ್ತಿಯ ಕೈವಾಡವಿದ್ದರೂ ಡೋಂಟ್ ಕೇರ್, 'ಭಾರಿ ಬೆಲೆ' ತೆರಬೇಕಾಗುತ್ತೆ- ಇಸ್ರೇಲ್ ಪ್ರಧಾನಿ ನೆತನ್ಯಾಹು ಎಚ್ಚರಿಕೆ

ಬಿಹಾರ ಪ್ರವಾಹ: ವಾಯುಪಡೆಯ ಹೆಲಿಕಾಪ್ಟರ್‌ನಿಂದ ಪರಿಹಾರ ಸಾಮಗ್ರಿಯ ಪ್ಯಾಕೆಟ್ ಬಿದ್ದು ವೃದ್ಧ ಸಾವು!

Asian Games 2026: 44 ವರ್ಷಗಳ ಬರ ನೀಗಿಸಿದ ಮಹಿಳಾ ಪಡೆ; ಚೀನಾ ಮಣಿಸಿ ಚಿನ್ನ ಗೆದ್ದ ಭಾರತ!

CJP ಪ್ರತಿಭಟನೆಗೆ ಕೈಜೋಡಿಸಿದ ನಸೀರುದ್ದೀನ್ ಶಾ: ನಟನನ್ನು ಅಪ್ಪಿಕೊಂಡು ಕಣ್ಣೀರಿಟ್ಟ ಅಭಿಜೀತ್ ದೀಪ್ಕೆ, Video!