ನಿರ್ಮಾಪಕ ಅರವಿಂದ್ ವೆಂಕಟೇಶ್ ರೆಡ್ಡಿ ಹಾಗೂ ನಟಿಯ ಚಿತ್ರ 
ಸಿನಿಮಾ ಸುದ್ದಿ

ಸ್ಯಾಂಡಲ್ ವುಡ್ ನಟಿಗೆ ಲೈಂಗಿಕ ಕಿರುಕುಳ ಪ್ರಕರಣ: ಬಂಧಿತ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಪೊಲೀಸರಿಗೆ ಹೇಳಿದ್ದೇನು?

ಗೋವಿಂದರಾಜನಗರ ಪೊಲೀಸರು ಆರೋಪಿಯನ್ನು ವಿಚಾರಣೆ ನಡೆಸಿದ್ದು, ನಟಿಗಾಗಿ 3 ಕೋಟಿ ರೂ. ಹಣ ಖರ್ಚು ಮಾಡಿದ್ದೇನೆ. ಸೈಟ್, ಮನೆ ಕೊಡಿಸಿದ್ದೇನೆ. ದುಬಾರಿ ಕಾರನ್ನು ಗಿಫ್ಟ್ ಮಾಡಿದ್ದೇನೆ. ಆದರೆ ಅವಳು ನನ್ನ ಬಿಟ್ಟು ಬೇರೆ ವ್ಯಕ್ತಿ ಜೊತೆಗೆ ಕಾಣಿಕೊಳ್ಳುತ್ತಿದ್ದಳು ಎಂದು ಹೇಳಿದ್ದಾರೆ.

ಬೆಂಗಳೂರು: ಸ್ಯಾಂಡಲ್ ವುಡ್ ನ ಖ್ಯಾತ ನಟಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿರುವ ಉದ್ಯಮಿ, ನಿರ್ಮಾಪಕ ಅರವಿಂದ್ ವೆಂಕಟೇಶ್ ರೆಡ್ಡಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಆರೋಪಿ ಕೆಲವೊಂದು ಸ್ಪೋಟಕ ಮಾಹಿತಿಗಳನ್ನು ಬಹಿರಂಗಪಡಿಸಿದ್ದಾರೆ.

ಗೋವಿಂದರಾಜನಗರ ಪೊಲೀಸರು ಆರೋಪಿಯನ್ನು ವಿಚಾರಣೆ ನಡೆಸಿದ್ದು, ನಟಿಗಾಗಿ 3 ಕೋಟಿ ರೂ. ಹಣ ಖರ್ಚು ಮಾಡಿದ್ದೇನೆ. ಸೈಟ್, ಮನೆ ಕೊಡಿಸಿದ್ದೇನೆ. ದುಬಾರಿ ಕಾರನ್ನು ಗಿಫ್ಟ್ ಮಾಡಿದ್ದೇನೆ. ಆದರೆ ಅವಳು ನನ್ನ ಬಿಟ್ಟು ಬೇರೆ ವ್ಯಕ್ತಿ ಜೊತೆಗೆ ಕಾಣಿಕೊಳ್ಳುತ್ತಿದ್ದಳು ಎಂದು ಹೇಳಿದ್ದಾರೆ.

ನಾನು ಯಾವುದೇ ಕಿರುಕುಳ ನೀಡಿಲ್ಲ, ಅವಳೇ ನನಗೆ ಮೋಸ ಮಾಡಿದ್ದಾಳೆಂದು ಆರೋಪಿ ಹೇಳಿಕೊಂಡಿರುವುದಾಗಿ ವರದಿಯಾಗಿದೆ.

ಏನಿದು ಪ್ರಕರಣ

2022 ರಲ್ಲಿ ಭೇಟಿಯಾದ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಕಿರುಕುಳ, ಕಿರುಕುಳ ನೀಡಿದ್ದಾರೆ ಎಂದು ಕನ್ನಡ ಚಲನಚಿತ್ರ ನಟಿಯೊಬ್ಬರು ಆರೋಪಿಸಿ, ಪೊಲೀಸರಿಗೆ ದೂರು ನೀಡಿದ್ದರು. ಮೊದಲಿಗೆ ಆರ್‌ಆರ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಐದು ದಿನದ ಹಿಂದೆ ಈ ಪ್ರಕರಣ ಗೋವಿಂದರಾಜನಗರ ಠಾಣೆಗೆ ವರ್ಗಾವಣೆಗೊಂಡಿತ್ತು.

ಅದರಂತೆ ಆರೋಪಿ ಬಂಧನಕ್ಕೆ ಎಸಿಪಿ ಚಂದನ್ ಮತ್ತು ಸುಬ್ರಹ್ಮಣಿ ತಂಡ ರಚಿಸಲಾಗಿತ್ತು.ಈ ಮೊದಲು ಆರೋಪಿ ಬಂಧನಕ್ಕೆ ಪೊಲೀಸರು ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದರು. ಆದರೆ ಇಂದು (ನ.15) ಬೆಳಗಿನ ಜಾವ ಶ್ರೀಲಂಕಾದಿಂದ ಬರುವಾಗ ಆರೋಪಿಯನ್ನ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ರಿಯಲ್ ಎಸ್ಟೇಟ್ ಉದ್ಯಮಿಯಾಗಿರುವ ಅರವಿಂದ್ ರೆಡ್ಡಿ ಮಹಾರಾಜ ಬಳ್ಳಾರಿ ಟಸ್ಕರ್ಸ್ ಕ್ರಿಕೆಟ್ ತಂಡದ ಮಾಲೀಕರಾಗಿದ್ದರು. ಅಲ್ಲದೇ ಚಲನಚಿತ್ರ ನಿರ್ಮಾಪಕ ಆಗಿರುವ ಅರವಿಂದ್ ರೆಡ್ಡಿ ಸಿನಿಮಾ ಇಂಡಸ್ಟ್ರಿಯಲ್ಲಿ ಹೆಚ್ಚಾಗಿ ಗುರುತಿಸಿಕೊಂಡಿದ್ದಾರೆ. ಚಲನಚಿತ್ರ ನಟ, ನಟಿಯರಿಗಾಗಿಯೇ ಹಲವು ಕ್ರಿಕೆಟ್ ಪಂದ್ಯಾವಳಿ ಕೂಡ ಆಯೋಜಿಸಿದ್ದರು. ಅರವಿಂದ್ ರೆಡ್ಡಿ ಒಡೆತನದ ಎವಿಆರ್ ಗ್ರೂಪ್ ದುಬೈ, ಶ್ರೀಲಂಕಾ ಸೇರಿದಂತೆ ಹಲವು ಕಡೆ ನಡೆದ ಟೂರ್ನಮೆಂಟ್‌ಗೆ ಸ್ಪಾನ್ಸರ್ ಮಾಡಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಖ್ಯಮಂತ್ರಿ ಬದಲಾವಣೆ: ದೆಹಲಿಯಲ್ಲಿ ಕಾಂಗ್ರೆಸ್‌ ಮ್ಯಾರಥಾನ್‌ ಮೀಟಿಂಗ್ ಬಳಿಕ ಕೆ.ಸಿ ವೇಣುಗೋಪಾಲ್ ಹೇಳಿದ್ದೇನು? Video

IPL 2026, qualifier 1: ಟಾಸ್ ಗೆದ್ದ GT ಬೌಲಿಂಗ್ ಆಯ್ಕೆ; ಕುತೂಹಲಕ್ಕೆ ಬ್ರೇಕ್, ವೆಂಕಟೇಶ್ ಅಯ್ಯರ್ ಗೆ ಸ್ಟಿಕ್ ಆದ RCB!

IPL 2026 Qualifier 1: ಐಪಿಎಲ್ ಇತಿಹಾಸದ ಅತ್ಯಪರೂಪದ ದಾಖಲೆ ಬರೆದ Virat Kohli, ಡಬಲ್ ಆಘಾತ ಕೊಟ್ಟ Holder

ಕರ್ನಾಟಕ ವಿಧಾನ ಪರಿಷತ್‌ನ ಏಳು ಸ್ಥಾನಗಳಿಗೆ ಚುನಾವಣೆ ಘೋಷಣೆ; ಜೂನ್ 18 ರಂದು ಮತದಾನ

Bengaluru Rains: ಗುಡುಗು, ಸಿಡಿಲು ಸಹಿತ ಭಾರೀ ಮಳೆ; ಹಳಿ ಮೇಲೆ ಮರ ಬಿದ್ದು ಮೆಟ್ರೋ ಸಂಚಾರ ವ್ಯತ್ಯಯ!

SCROLL FOR NEXT