ಹೈದರಾಬಾದ್: ಖ್ಯಾತ ನಿರ್ದೇಶಕ ಎಸ್. ಎಸ್.ರಾಜಮೌಳಿ ಹಾಗೂ ಮಹೇಶ್ ಬಾಬು ಕಾಂಬಿನೇಷ್ ನಲ್ಲಿ ತಯಾರಾಗುತ್ತಿರುವ ಹೊಸ ಸಿನಿಮಾದ ಟೈಟಲ್ ಅನಾವರಣವಾಗಿದೆ.
ರಾಮೋಜಿ ಫಿಲ್ಮ್ ಸಿಟಿಯಲ್ಲಿ ನಡೆಯುತ್ತಿರುವ Globetrotter ಕಾರ್ಯಕ್ರಮದಲ್ಲಿ ರಾಜಮೌಳಿ ನಿರ್ದೇಶಿಸುತ್ತಿರುವ, ಮಹೇಶ್ ಬಾಬು ನಾಯಕ ನಟನಾಗಿ ಅಭಿನಯಿಸುತ್ತಿರುವ ಹೊಸ ಸಿನಿಮಾಕ್ಕೆ 'ವಾರಾಣಸಿ' ಎಂದು ಹೆಸರಿಡಲಾಗಿದೆ.
ಬೃಹತ್ ಎಲ್ ಇಡಿ ಪರದೆಯಲ್ಲಿ ಬೃಹತ್ ಜನಸ್ತೋಮದ ನಡುವೆ ಸಿನಿಮಾದ ಟೈಟಲ್ ಹಾಗೂ ಮಹೇಶ್ ಬಾಬು ಅವರ ಫಸ್ಟ್ ಲುಕ್ ಅನಾವರಣಗೊಂಡಿದೆ.
ಅಭಿಮಾನಿಗಳು ಟೈಟಲ್ ಕೇಳಿ ಸಂಭ್ರಮಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ.
ರಾಜಮೌಳಿ ಅವರ ತಂದೆ ಎಸ್ ಎಸ್ ವಿಜಯೇಂದ್ರ ಪ್ರಸಾದ್ ಕಥೆ ಹೊಂದಿರುವ ಬಿಗ್ ಬಜೆಟ್ ಚಿತ್ರ ಆಫ್ರಿಕಾದ ದಟ್ಟ ಕಾಡುಗಳಲ್ಲಿ ಚಿತ್ರೀಕರಣವಾಗುತ್ತಿದ್ದು, ಪೃಥ್ವಿರಾಜ್ ಸುಕುಮಾರನ್, ಪ್ರಿಯಾಂಕ್ ಚೋಪ್ರಾ ಮತ್ತಿತರರು ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ.