ಕಾಂತಾರ ಚಾಪ್ಟರ್ 1 ಪೋಸ್ಟರ್  
ಸಿನಿಮಾ ಸುದ್ದಿ

ಕಾಂತಾರ-ಚಾಪ್ಟರ್ 1 ಬಿಡುಗಡೆ, ಮೊದಲ ದಿನವೇ ಜನ ಬಹುಪರಾಕ್, ಎಲ್ಲೆಡೆ ಭರ್ಜರಿ ಪ್ರದರ್ಶನ

'ಕಾಂತಾರ: ಚಾಪ್ಟರ್ 1' ಸಿನಿಮಾದಲ್ಲಿ ನಿರ್ದೇಶಕ, ನಟ ರಿಷಬ್ ಶೆಟ್ಟಿ, ಕ್ರಿ.ಶ.4-5 ಶತಮಾನದ ಕದಂಬರ ಆಳ್ವಿಕೆಯ ಸಮಯವನ್ನು ಹಿನ್ನೆಲೆಯಾಗಿಟ್ಟುಕೊಂಡು ಒಂದು ಮಾಯಾವಿ ಲೋಕವನ್ನು ನೋಡುಗನ ಮುಂದಿರಿಸಿದ್ದಾರೆ.

ಕಾಂತಾರ-ಚಾಪ್ಟರ್ 1 ಚಿತ್ರ ಬಿಡುಗಡೆಯಾಗಿದ್ದು, ನಿರೀಕ್ಷೆಯಂತೆ ಭರ್ಜರಿ ಪ್ರತಿಕ್ರಿಯೆ ಸಿಕ್ಕಿದೆ. 2022ರ ಅಕ್ಟೋಬರ್ ತಿಂಗಳಲ್ಲಿ ಕಾಂತಾರ ಚಿತ್ರ ಬಿಡುಗಡೆಯಾಗಿದ್ದಾಗ ಬಹುತೇಕರು ಮೆಚ್ಚಿಕೊಂಡು ಗಲ್ಲಾಪೆಟ್ಟಿಗೆಯಲ್ಲಿ ಸಾವಿರಾರು ಕೋಟಿ ರೂಪಾಯಿ ಬಾಚಿಕೊಂಡಿತ್ತು.

ಇದೇ ಉತ್ಸಾಹದಲ್ಲಿ ರಿಷಬ್ ಶೆಟ್ಟಿ ‘ಕಾಂತಾರ: ಚಾಪ್ಟರ್ 1’ ಮಾಡುವ ಘೋಷಣೆ ಮಾಡಿದಾಗ ಹೊಂಬಾಳೆ ಫಿಲ್ಮ್ಸ್ ಸಂಸ್ಥೆ ಕೂಡ ಕೈಜೋಡಿಸಿತು. ‘ಕಾಂತಾರ’ ಸಿನಿಮಾದಲ್ಲಿ ಪಂಜುರ್ಲಿ ದೈವದ ಬಗ್ಗೆ ರಿಷಬ್ ಹೇಳಿದ್ದರು. ‘ಕಾಂತಾರ: ಚಾಪ್ಟರ್ 1’ ಚಿತ್ರದಲ್ಲೂ ದೈವದ ವಿಚಾರವೇ ಉಲ್ಲೇಖ. ಇಲ್ಲಿ ಹಲವು ದೈವಗಳ ಅವತಾರವನ್ನು ತೋರಿಸಲಾಗಿದೆ.

'ಕಾಂತಾರ: ಚಾಪ್ಟರ್ 1' ಸಿನಿಮಾದಲ್ಲಿ ನಿರ್ದೇಶಕ, ನಟ ರಿಷಬ್ ಶೆಟ್ಟಿ, ಕ್ರಿ.ಶ.4-5 ಶತಮಾನದ ಕದಂಬರ ಆಳ್ವಿಕೆಯ ಸಮಯವನ್ನು ಹಿನ್ನೆಲೆಯಾಗಿಟ್ಟುಕೊಂಡು ಒಂದು ಮಾಯಾವಿ ಲೋಕವನ್ನು ನೋಡುಗನ ಮುಂದಿರಿಸಿದ್ದಾರೆ.

ಪ್ರೀಮಿಯರ್ ಶೋಗಳಿಂದಲೇ ಕೋಟಿ ಕೋಟಿ

'ಕಾಂತಾರ: ಚಾಪ್ಟರ್ 1' ಸಿನಿಮಾ ಇಂದು ಅಕ್ಟೋಬರ್ 2ರಂದು ವಿಶ್ವಾದ್ಯಂತ ಬಿಡುಗಡೆಯಾಗಿದೆ. ದುಬಾರಿ ಟಿಕೆಟ್ ಬೆಲೆ ಮತ್ತು ಯಶಸ್ವಿ ಪ್ರೀಮಿಯರ್ ಶೋಗಳಿಂದ ಚಿತ್ರಕ್ಕೆ ಕೋಟಿ ಕೋಟಿ ಹರಿದುಬಂದಿದೆ. ರಿಷಬ್ ಶೆಟ್ಟಿ ನಿರ್ದೇಶನದ ಈ ಚಿತ್ರವು ಮೊದಲ ದಿನವೇ ಭಾರಿ ಕಲೆಕ್ಷನ್ ಮಾಡುತ್ತಿದೆ. ಸೋಷಿಯಲ್ ಮೀಡಿಯಾಗಳಲ್ಲಿ ಇಂದು ಪ್ರೇಕ್ಷಕರ ಅಭಿಪ್ರಾಯ, ವಿಮರ್ಶೆಗಳೇ ತುಂಬಿಹೋಗಿವೆ.

ಕಳೆದ ರಾತ್ರಿ ಬೆಂಗಳೂರು ಸೇರಿದಂತೆ ಹಲವೆಡೆ ಪ್ರೀಮಿಯರ್ ಶೋ ಇಡಲಾಗಿದ್ದು, ಅದರಿಂದಲೇ ಕೋಟಿ ರೂಪಾಯಿ ಬಾಚಲಾಗಿದೆ. ‘ಕಾಂತಾರ: ಚಾಪ್ಟರ್ ’ ಸಿನಿಮಾಗೆ ರಿಷಬ್ ಶೆಟ್ಟಿ ನಾಯಕ. ನಿರ್ದೇಶನ ಕೂಡ ಅವರದ್ದೇ. ನಾಯಕಿ ಕನಕವತಿ ಪಾತ್ರದಲ್ಲಿ ರುಕ್ಮಿಣಿ ವಸಂತ್, ಇತರ ಪ್ರಮುಖ ಪಾತ್ರವರ್ಗದಲ್ಲಿ ಜಯರಾಂ, ಕುಲ್ಶನ್ ದೇವಯ್ಯ ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದ್ವಿಪಕ್ಷೀಯ ಸಂಬಂಧ ವೃದ್ಧಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಡಿ. 5–6 ರಂದು ಭಾರತಕ್ಕೆ ಭೇಟಿ ನಿರೀಕ್ಷೆ

ಗಾಂಧಿ ಜಯಂತಿ 2025: ರಾಜ್‌ಘಾಟ್‌ನಲ್ಲಿ ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಪುಷ್ಪ ನಮನ

1st Test: Mohammed Siraj ದಾಳಿಗೆ ಪತರುಗುಟ್ಟಿದ West Indies, ಭೋಜನ ವಿರಾಮದ ವೇಳೆಗೆ 90/5

ಸರ್ಕಾರ ವಿರುದ್ಧ ಸೋನಮ್ ವಾಂಗ್‌ಚುಕ್ ಪತ್ನಿಯಿಂದ ಕಿರುಕುಳದ ಆರೋಪ: ಪ್ರಧಾನಿ, ರಾಷ್ಟ್ರಪತಿಗಳಿಗೆ ಪತ್ರ, ಪತಿಯನ್ನು ಕೂಡಲೇ ಬಿಡುಗಡೆ ಮಾಡುವಂತೆ ಆಗ್ರಹ

ವಸ್ತುಸ್ಥಿತಿಯ ಬಗ್ಗೆ ಅರಿವಿಲ್ಲದೇ ಮಾತನಾಡುವ ವಿಪಕ್ಷಗಳ ಭವಿಷ್ಯ ನಿಜವಾಗದು: ಸಿಎಂ ಸಿದ್ದರಾಮಯ್ಯ

SCROLL FOR NEXT