ವಿಜಯ್ ದೇವರಕೊಂಡ - ಅಪಘಾತಕ್ಕೀಡಾದ ಕಾರು 
ಸಿನಿಮಾ ಸುದ್ದಿ

ನಟ ವಿಜಯ್ ದೇವರಕೊಂಡ ಕಾರು ಅಪಘಾತ; ಅದೃಷ್ಟವಶಾತ್ ಅಪಾಯದಿಂದ ಪಾರು!

ಪುಟ್ಟಪರ್ತಿಯಿಂದ ಹೈದರಾಬಾದ್‌ಗೆ ಹಿಂತಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಮತ್ತೊಂದು ಕಾರು ವಿಜಯ್ ದೇವರಕೊಂಡ ಅವರ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿಗೆ ಹಾನಿಯಾಗಿದೆ.

ಗದ್ವಾಲ್: ಎರಡು ದಿನಗಳ ಹಿಂದಷ್ಟೇ ನಟಿ ರಶ್ಮಿಕಾ ಮಂದಣ್ಣ ಅವರ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಟಾಲಿವುಡ್​ ಸ್ಟಾರ್ ವಿಜಯ್ ದೇವರಕೊಂಡ ಅವರ ಕಾರು ಸೋಮವಾರ ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ.

ಇಂದು ಗದ್ವಾಲ್ ಜಿಲ್ಲೆಯ ಉಂಡವೆಲ್ಲಿ ಬಳಿಯ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ನಟ ವಿಜಯ್ ದೇವರಕೊಂಡ ಅವರ ಕಾರು ಸಣ್ಣ ಅಪಘಾತಕ್ಕೀಡಾಗಿದ್ದು, ಅವರಿಗೆ ಯಾವುದೇ ಹಾನಿಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ನೆರೆಯ ಆಂಧ್ರಪ್ರದೇಶದ ಪುಟ್ಟಪರ್ತಿಯಿಂದ ಹೈದರಾಬಾದ್‌ಗೆ ಹಿಂತಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಮತ್ತೊಂದು ಕಾರು ವಿಜಯ್ ದೇವರಕೊಂಡ ಅವರ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿಗೆ ಹಾನಿಯಾಗಿದೆ.

ಅಪಘಾತದ ನಂತರ, ನಟ ತನ್ನ ವಾಹನದಿಂದ ಇಳಿದು ಸ್ನೇಹಿತನ ಕಾರಿನಲ್ಲಿ ತೆರಳಿದರು ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!

'ನ್ಯಾಯಾಂಗ ತನಿಖೆಗೆ ಒಪ್ಪಿಸಿ, ₹1 ಕೋಟಿ ಪರಿಹಾರ ನೀಡಿ': ಹನೂರು ಶೂಟೌಟ್ ಪ್ರಕರಣದ ಮಹಿಮಾ ದಾಸ್ ಸೇರಿ ಸಂತ್ರಸ್ತರ ಆಗ್ರಹ