ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹಾಗೂ ಸುದೀಪ್ 
ಸಿನಿಮಾ ಸುದ್ದಿ

Bigg Boss Kannada ರಿಯಾಲಿಟಿ ಶೋ ಪುನಾರಂಭಕ್ಕೆ ಗ್ರೀನ್ ಸಿಗ್ನಲ್: ಡಿಕೆ ಶಿವಕುಮಾರ್‌ಗೆ ಧನ್ಯವಾದ ಹೇಳಿದ ಕಿಚ್ಚ ಸುದೀಪ್

ಸರಿಯಾದ ಸಮಯಕ್ಕೆ ಬೆಂಬಲ ನೀಡಿದ್ದಕ್ಕಾಗಿ ನಾನು ಗೌರವಾನ್ವಿತ ಡಿಕೆ ಶಿವಕುಮಾರ್ ಅವರಿಗೆ ಪ್ರಾಮಾಣಿಕವಾಗಿ ಧನ್ಯವಾದಗಳನ್ನು ಹೇಳುತ್ತೇನೆ.

ಬೆಂಗಳೂರು: ಜಾಲಿವುಡ್‌ ಸ್ಟುಡಿಯೋಸ್‌ ಓಪನ್‌ಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಗ್ರೀನ್ ಸಿಗ್ನಲ್ ನೀಡಿರುವ ಹಿನ್ನೆಲೆಯಲ್ಲಿ ನಟ ಸುದೀಪ್ ಅವರು ಧನ್ಯವಾದಗಳನ್ನು ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಸರಿಯಾದ ಸಮಯಕ್ಕೆ ಬೆಂಬಲ ನೀಡಿದ್ದಕ್ಕಾಗಿ ನಾನು ಗೌರವಾನ್ವಿತ ಡಿಕೆ ಶಿವಕುಮಾರ್ ಅವರಿಗೆ ಪ್ರಾಮಾಣಿಕವಾಗಿ ಧನ್ಯವಾದಗಳನ್ನು ಹೇಳುತ್ತೇನೆ. ಹಾಗೇ ಇತ್ತೀಚೆಗೆ ನಡೆದ ಅವಾಂತರದಲ್ಲಿ ಬಿಗ್ ಬಾಸ್ ಕನ್ನಡ ಭಾಗಿಯಾಗಿಲ್ಲ ಹಾಗೂ ಅದರ ಭಾಗವಾಗಿಲ್ಲ ಎಂದು ತಿಳಿಸಿದ್ದಕ್ಕಾಗಿ ಸಂಬಂಧಪಟ್ಟ ಅಧಿಕಾರಿಗಳಿಗೂ ಧನ್ಯವಾದ ಹೇಳಲು ಬಯಸುತ್ತೇನೆ.

ಹಾಗೆಯೇ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನನ್ನ ಕರೆಗೆ ಪ್ರತಿಕ್ರಿಯಿಸಿದ್ದಾಗಿ ನಾನು ಅವರನ್ನು ಪ್ರಶಂಶಿಸುತ್ತೇನೆ. ನಲಪಾಡ್ ಅವರ ಪ್ರಯತ್ನಕ್ಕೆ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಬಿಗ್ ಬಾಸ್ ಕನ್ನಡ 12 ಮುಂದುವರೆಯುತ್ತೆ ಎಂದು ಹೇಳಿದ್ದಾರೆ.

ಕಳೆದ ಎರಡು ದಿನಗಳಿಂದ ಬಿಗ್ ಬಾಸ್ ಕನ್ನಡ ಸೀಸನ್ 12 ಭಾರೀ ಚರ್ಚೆಗೆ ಗ್ರಾಸವಾಗಿದೆ. ಜಾಲಿವುಡ್ ಸ್ಟುಡಿಯೋ ಮಾಡಿದ ಎಡವಟ್ಟಿನಿಂದ ಬಿಗ್ ಬಾಸ್ ಕನ್ನಡ ಶೋ ಸ್ಥಗಿತಗೊಂಡಿತ್ತು.

ರಿಯಾಲಿಟಿ ಶೋ ನಡೆಯುತ್ತಿರುವ ಜಾಲಿವುಡ್ ಸ್ಟುಡಿಯೋ ಪರಿಸರದ ನಿಯಮಗಳನ್ನು ಪಾಲಿಸಿರಲಿಲ್ಲ. ಹಾಗೇ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ನೀಡಿದ ನೋಟಿಸ್‌ಗೆ ಪ್ರತಿಕ್ರಿಯೆ ಕೂಡ ನೀಡಿರಲಿಲ್ಲ ಎನ್ನಲಾಗಿತ್ತು.

ಈ ಕಾರಣಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಜಾಲಿವುಡ್‌ ಸ್ಟುಡಿಯೋವನ್ನು ಸೀಲ್‌ ಮಾಡಿದ್ದರು. ಹೀಗಾಗಿ ಅನಿವಾರ್ಯವಾಗಿ ಬಿಗ್ ಬಾಸ್ ಶೋ ಅನ್ನು ಸ್ಥಗಿತಗೊಳಸಬೇಕಾಯಿತು. ಈ ನಡುವೆ ಕಾರ್ಯಕ್ರಮ ಆರಂಭವಾಗುತ್ತಾ? ಇಲ್ಲವೇ? ಎಂಬ ಕುರಿತಂತೆಯೂ ಗೊಂದಲಗಳು ಮೂಡಿದ್ದವು.

ಈ ನಡುವೆ ಪ್ರತಿಕ್ರಿಯೆ ನೀಡಿದ್ದ ಡಿಕೆ.ಶಿವಕುಮಾರ್ ಅವರು, ಬಿಗ್ ಬಾಸ್ ಕಾರ್ಯಕ್ರಮದ ನಿರ್ಮಾಣ ಸಂಸ್ಥೆಯಾದ ಜಾಲಿವುಡ್ ಸ್ಟುಡಿಯೋಸ್‌ಗೆ ಮತ್ತೊಂದು ಅವಕಾಶ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದರು.

ಜಾಲಿವುಡ್ ಸ್ಟುಡಿಯೋಸ್‌ಗೆ 'ಇದೊಂದು ಬಾರಿ ಅನುಮತಿ ನೀಡುವಂತೆ' ಬೆಂಗಳೂರು ದಕ್ಷಿಣ (ರಾಮನಗರ) ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಒಮ್ಮೆ ತಪ್ಪು ಸರಿ ಮಾಡಿಕೊಳ್ಳಲು ಅವಕಾಶ ಕೊಡಿ ಎಂದಿದ್ದೇನೆ. ಉದ್ಯೋಗ ಮುಖ್ಯ, ಏನೇ ಇದ್ದರೂ ಅವರಿಗೊಂದು ಅವಕಾಶ ಕೊಡಿ. ಅವರು ಸಮಸ್ಯೆ ಬಗೆಹರಿಸಿಕೊಳ್ಳಲಿ. ನಮ್ಮಲ್ಲಿ ಮನೋರಂಜನೆ ಕೂಡ ಮುಖ್ಯ ಎಂದು ತಿಳಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

20 ಕ್ಕೂ ಹೆಚ್ಚು ಮಕ್ಕಳ ಸಾವಿಗೆ ಕಾರಣವಾದ ಕೋಲ್ಡ್ರಿಫ್ ಸಿರಪ್‌: ಫಾರ್ಮಾ ಕಂಪನಿಯ ಮಾಲೀಕ ಅರೆಸ್ಟ್

ಶಾಂತಿ ಸೂತ್ರಕ್ಕೆ ಹಮಾಸ್ ಒಪ್ಪಿಗೆ: ಒತ್ತೆಯಾಳುಗಳು ಸೋಮವಾರ ವಾಪಸ್ ಎಂದ ಟ್ರಂಪ್, ಕದನ ವಿರಾಮ ಘೋಷಣೆ ಬಳಿಕವೂ ಇಸ್ರೇಲ್‌ನಿಂದ ಮುಂದುವರೆದ ದಾಳಿ..!

Ranji Trophy: ಮೈದಾನದಲ್ಲೇ ಹೈಡ್ರಾಮಾ, ಸಹ ಆಟಗಾರನತ್ತ ಬ್ಯಾಟ್ ಬೀಸಿದ ಪೃಥ್ವಿ ಶಾ, Video

Israel-Gaza ಯುದ್ಧ ಕೊನೆಗೂ ಅಂತ್ಯ: ಶಾಂತಿ ಒಪ್ಪಂದದ ಮೊದಲ ಹಂತಕ್ಕೆ ಇಸ್ರೇಲ್–ಹಮಾಸ್ ಒಪ್ಪಿಗೆ, ಶೀಘ್ರದಲ್ಲೇ ಒತ್ತೆಯಾಳುಗಳ ಬಿಡುಗಡೆ

ಕುರುಬರಿಗೆ ಎಸ್‌ಟಿ ಮೀಸಲಾತಿ: ಸಚಿವ ಸಂಪುಟ ಸಭೆಯಲ್ಲಿ ಚರ್ಚೆ?

SCROLL FOR NEXT