ಹಿರಿಯ ರಂಗಭೂಮಿ ಕಲಾವಿದ ಮತ್ತು ಹಾಸ್ಯ ಚಿತ್ರನಟ ರಾಜು ತಾಳಿಕೋಟೆ (Raju Talikote) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ವಿಜಯಪುರದ ಸಿಂದಗಿ ತಾಲ್ಲೂಕಿನ ಚಿಕ್ಕಸಿಂದಗಿ ಗ್ರಾಮದ ಮೂಲದ ರಾಜು ತಾಳಿಕೋಟೆ ಅವರು, ಕುಡುಕನ ಪಾತ್ರಗಳ ಮೂಲಕ ಮನೆಮಾತಾಗಿದ್ದರು. ಉಡುಪಿಯಲ್ಲಿ ಸಿನಿಮಾವೊಂದರ ಚಿತ್ರೀಕರಣದ ಹಾರ್ಟ್ ಅಟ್ಯಾಕ್ ಆಗಿದೆ. ಕೂಡಲೇ ಅವರನ್ನು ಉಡುಪಿಯ ಮಣಿಪಾಲ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅವರನ್ನು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದರು.
ವೃತ್ತಿ ರಂಗಭೂಮಿ ಮೂಲಕ ಸಿನಿಮಾ ರಂಗಕ್ಕೆ ರಾಜು ತಾಳಿಕೋಟೆ ಎಂಟ್ರಿ ಕೊಟ್ಟಿದ್ದರು. ರಾಜು ತಾಳಿಕೋಟೆ ಅವರು ಮನಸಾರೆ, ಪಂಚರಂಗಿ, ಮತ್ತೊಂದು ಮದುವೆನಾ, ಮೈನಾ ಸಿನಿಮಾಗಳಲ್ಲಿ ನಟಿಸಿದ್ದಾರೆ. ಉತ್ತರ ಕರ್ನಾಟಕದ ರಂಗಭೂಮಿಯಲ್ಲಿ 'ಖಾಸ್ಗತೇಶ್ವರ' ನಾಟಕ ಮಂಡಳಿಯ ಮಾಲೀಕರಾಗಿ, ಕುಡುಕನ ಪಾತ್ರಗಳ ಮೂಲಕ ಮನೆಮಾತಾಗಿದ್ದರು. ಅವರ ನಿಧನದ ಸುದ್ದಿ ತಿಳಿದು ಚಿತ್ರರಂಗದ ಗಣ್ಯರು ಮತ್ತು ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಸಂತಾಪ ಸೂಚಿಸುತ್ತಿದ್ದಾರೆ.