ಮಾರುತ ಚಿತ್ರದಲ್ಲಿ ದುನಿಯಾ ವಿಜಯ್ 
ಸಿನಿಮಾ ಸುದ್ದಿ

ಥಿಯೇಟರ್ ಬಿಕ್ಕಟ್ಟು; ದುನಿಯಾ ವಿಜಯ್, ಶ್ರೇಯಸ್ ಮಂಜು ನಟನೆಯ 'ಮಾರುತ' ಬಿಡುಗಡೆ ದಿನಾಂಕ ಮುಂದಕ್ಕೆ!

ಈಶಾ ಪ್ರೊಡಕ್ಷನ್ಸ್ ಅಡಿಯಲ್ಲಿ ಕೆ ಮಂಜು ಮತ್ತು ರಮೇಶ್ ಯಾದವ್ ನಿರ್ಮಿಸಿರುವ ಈ ಚಿತ್ರಕ್ಕೆ ವ್ಯಾಪಕ ನಿರೀಕ್ಷೆ ವ್ಯಕ್ತವಾಗಿದೆ.

ಕರ್ನಾಟಕದಾದ್ಯಂತ ಚಿತ್ರಮಂದಿರಗಳ ಕೊರತೆಯಿಂದಾಗಿ ದುನಿಯಾ ವಿಜಯ್ ಮತ್ತು ಶ್ರೇಯಸ್ ಮಂಜು ಅಭಿನಯದ 'ಮಾರುತ' ಚಿತ್ರದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ. ಆರಂಭದಲ್ಲಿ ಅಕ್ಟೋಬರ್ 31 ರಂದು ಬಿಡುಗಡೆಯಾಗಬೇಕಿದ್ದ ಈ ಚಿತ್ರವು ಈಗ ನವೆಂಬರ್ 21 ರಂದು ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ.

ಈಶಾ ಪ್ರೊಡಕ್ಷನ್ಸ್ ಅಡಿಯಲ್ಲಿ ಕೆ ಮಂಜು ಮತ್ತು ರಮೇಶ್ ಯಾದವ್ ನಿರ್ಮಿಸಿರುವ ಈ ಚಿತ್ರಕ್ಕೆ ವ್ಯಾಪಕ ನಿರೀಕ್ಷೆ ವ್ಯಕ್ತವಾಗಿದೆ. ಚಿತ್ರ ಬಿಡುಗಡೆಗೆ ತಯಾರಿ ನಡೆಸುತ್ತಿದ್ದು, ಪ್ರೇಕ್ಷಕರ ನಿರಂತರ ಬೆಂಬಲ ಮತ್ತು ತಾಳ್ಮೆಗೆ ಧನ್ಯವಾದಗಳನ್ನು ಅರ್ಪಿಸಿರುವ ಚಿತ್ರತಂಡ, ಅಧಿಕೃತ ಹೇಳಿಕೆಯ ಮೂಲಕ ಹೊಸ ದಿನಾಂಕವನ್ನು ಘೋಷಿಸಿದ್ದಾರೆ.

ಹೈ ಬಜೆಟ್ ಚಿತ್ರಕ್ಕೆ ಕಲಾ ಸಾಮ್ರಾಟ್ ಎಸ್ ನಾರಾಯಣ್ ಚಿತ್ರಕಥೆ, ಸಂಭಾಷಣೆ, ಹಾಡುಗಳನ್ನು ಬರೆದಿದ್ದು, ನಿರ್ದೇಶನವನ್ನೂ ಮಾಡಿದ್ದಾರೆ. ಚಿತ್ರದಲ್ಲಿ ಪಿಕೆಹೆಚ್ ದಾಸ್ ಛಾಯಾಗ್ರಾಹಕರಾಗಿ, ಶಿವಪ್ರಸಾದ್ ಯಾದವ್ ಸಂಕಲನಕಾರರಾಗಿ, ವಿನೋದ್ ಮತ್ತು ಅರ್ಜುನ್ ಸಾಹಸ ದೃಶ್ಯ ನಿರ್ದೇಶನ ಮಾಡುತ್ತಿದ್ದಾರೆ ಮತ್ತು ಮೋಹನ್ ಕುಮಾರ್ ಮತ್ತು ಸಂತು ನೃತ್ಯ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಚಿತ್ರಕ್ಕೆ ಎಸ್ ನಾರಾಯಣ್ ಮತ್ತು ಜಸ್ಸಿ ಗಿಫ್ಟ್ ಸಂಗೀತ ಸಂಯೋಜಿಸಿದ್ದಾರೆ.

ಶ್ರೇಯಸ್ ಮಂಜುಗೆ ಬೃಂದಾ ಆಚಾರ್ಯ ಜೋಡಿಯಾಗಿದ್ದು, ಸಾಧು ಕೋಕಿಲ, ನಿಶ್ವಿಕಾ ನಾಯ್ಡು, ರಂಗಾಯಣ ರಘು, ತಾರಾ ಅನುರಾಧ, ಶರತ್ ಲೋಹಿತಾಶ್ವ, ಪ್ರಮೋದ್ ಶೆಟ್ಟಿ, ಮಂಜು ಪಾವಗಡ, ಚಿತ್ರಾ ಶೆಣೈ ಮತ್ತು ಸುಜಯ್ ಶಾಸ್ತ್ರಿ ಸೇರಿದಂತೆ ಇತರರು ನಟಿಸಿದ್ದಾರೆ. ಚಿತ್ರದಲ್ಲಿ ಕ್ರೇಜಿ ಸ್ಟಾರ್ ರವಿಚಂದ್ರನ್ ಅವರು ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣ ಬಳಕೆ ಕುರಿತು ಜಾಗೃತಿ ಮೂಡಿಸುವ ಕಮರ್ಷಿಯಲ್ ಸಿನಿಮಾ ಇದಾಗಿದೆ. ಪೋಷಕರು ಯುವಜನತೆಯ ಮೇಲೆ ಹೆಚ್ಚು ಗಮನ ನೀಡಬೇಕು ಎಂಬ ಸಂದೇಶವಿದೆ ಎನ್ನುತ್ತಾರೆ ನಿರ್ದೇಶಕ ಎಸ್ ನಾರಾಯಣ್.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬೆಂಗಳೂರು ಬಿಸಿನೆಸ್ ಕಾರಿಡಾರ್ ಗೆ ಸಂಪುಟ ಅನುಮೋದನೆ; ಎರಡು ವರ್ಷದಲ್ಲಿ ಪೂರ್ಣ

ರಷ್ಯಾ ತೈಲ ಖರೀದಿ ವಿಷಯವಾಗಿ ಮೋದಿ ಟ್ರಂಪ್ ಜೊತೆ ಮಾತಾಡೇ ಇಲ್ಲ- EAM

Gujarat: ಒಂದು ಕಾಲದ ಬಿಜೆಪಿ ವಿರೋಧಿಗಳಿಗೆ ಒಲಿದ ಸಚಿವ ಸ್ಥಾನ?: ನೂತನ ಸಂಪುಟದಲ್ಲಿ ಅಲ್ಪೇಶ್ ಠಾಕೂರ್, ಹಾರ್ದಿಕ್ ಪಟೇಲ್!

ಅಕ್ರಮ ಗಣಿಗಾರಿಕೆ ವಿರೋಧಿಸಿದ್ದಕ್ಕೆ ದಲಿತ ವ್ಯಕ್ತಿ ಮೇಲೆ ಹಲ್ಲೆ, ಮೂತ್ರ ವಿಸರ್ಜನೆ!

KPCC ಯಲ್ಲಿ ಕೆಲಸದಲ್ಲಿರುವುದಾಗಿ ನಂಬಿಸಿ ಮಹಿಳೆಯರ ಜೊತೆ ರಾಸಲೀಲೆ: ಗಂಡನ S**X ವಿಡಿಯೋ ನೋಡಿ ದಂಗಾದ ಪತ್ನಿ!

SCROLL FOR NEXT