ನಿತಿನ್ ಶಿವಾಂಶ್, ಸುಹಾನಾ ಸೈಯದ್ 
ಸಿನಿಮಾ ಸುದ್ದಿ

'ಮಂತ್ರ ಮಾಂಗಲ್ಯ' ವಿವಾಹ: ಹಿಂದೂ ಯುವಕನನ್ನು ವರಿಸಿದ ಗಾಯಕಿ ಸುಹಾನಾ ಸೈಯದ್!

ಖಾಸಗಿ ರೆಸಾರ್ಟ್ ನಲ್ಲಿ ಗುರು ಹಿರಿಯರ ಹಾಗೂ ಆಪ್ತರ ಸಮ್ಮುಖದಲ್ಲಿ ಕುವೆಂಪು ಅವರ ಮಂತ್ರ ಮಾಂಗಲ್ಯದ ಆಶಯದಂತೆ ಸರಳವಾಗಿ ಅಂತರ್ ಧರ್ಮೀಯ ವಿವಾಹವಾದರು.

'ZEE Kannada' ವಾಹಿನಿಯ ಜನಪ್ರಿಯ ರಿಯಾಲಿಟಿ ಶೋ ಸರಿಗಮಪದ ಮೂಲಕ ಜನಪ್ರಿಯರಾಗಿದ್ದ ಶಿವಮೊಗ್ಗದ ಸಾಗರದ ಗಾಯಕಿ ಸುಹಾನಾ ಸೈಯ್ಯದ್ ಹಾಗೂ ರಂಗಭೂಮಿ ಕಲಾವಿದ ನಿತಿನ್ ಶಿವಾಂಶ್ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

ನಗರದ ಖಾಸಗಿ ರೆಸಾರ್ಟ್ ನಲ್ಲಿ ಗುರು ಹಿರಿಯರ ಹಾಗೂ ಆಪ್ತರ ಸಮ್ಮುಖದಲ್ಲಿ ಕುವೆಂಪು ಅವರ ಮಂತ್ರ ಮಾಂಗಲ್ಯದ ಆಶಯದಂತೆ ಸರಳವಾಗಿ ಅಂತರ್ ಧರ್ಮೀಯ ವಿವಾಹವಾದರು. ಇಬ್ಬರ ಧರ್ಮ ಬೇರೆ ಬೇರೆಯಾಗಿದ್ದರೂ ಧೈರ್ಯವಾಗಿ ಪ್ರೀತಿಸಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಹಿಜಬ್ ಧರಿಸಿ ಹಿಂದೂ ಭಜನೆ ಹಾಡುವ ಸುಹಾನಾಗೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಆದರೀಗ ಎಲ್ಲಾ ಅಡೆತಡೆಗಳನ್ನ ದಾಟಿ ತಾವು ಬಹುವರ್ಷಗಳಿಂದ ಪ್ರೀತಿಸುತ್ತಿರುವ ಅಂತರ್ ಧರ್ಮದ ಹುಡುಗನ ಜೊತೆ ಮದುವೆಯಾಗಿದ್ದಾರೆ.

ಸುಹಾನಾ ಸೈಯ್ಯದ್ ಹಾಗೂ ನಿತಿನ್ ಶಿವಾಂಶ್ ಹೈಸ್ಕೂಲ್ ನಲ್ಲಿ ಓದುತ್ತಿದ್ದಾಗಿನಿಂದಲೂ ಪರಿಚಯವಂತೆ. ನಿತಿನ್ ರಂಗಭೂಮಿ ಕಲಾವಿದರಾಗಿದ್ದು, ಸುಹಾನಾ ಸೈಯ್ಯದ್‌ಗೂ ರಂಗಭೂಮಿ ಮೇಲೆ ಆಸಕ್ತಿಯಿತ್ತು. ಅಲ್ಲಿಂದ ಇಬ್ಬರ ಪರಿಚಯ ಮತ್ತಷ್ಟು ಗಾಢವಾಗಿದ್ದು, ಇಬ್ಬರ ನಡುವೆ ಪ್ರೇಮಂಕುರವಾಗಿದೆ. ಕುವೆಂಪು ಅವರ ಆಶಯದಂತೆ ಮಂತ್ರ ಮಾಂಗಲ್ಯದ ಮೂಲಕವೇ ಮದುವೆ ಆಗಬೇಕೆಂದು ಇಬ್ಬರು ನಿರ್ಧರಿಸಿದ್ದಾಗಿಯೂ ಹೇಳಿಕೊಂಡಿದ್ದಾರೆ.

"ಮದುವೆಯಾದರೆ, ಮಂತ್ರ ಮಾಂಗಲ್ಯವೇ ಆಗಬೇಕು ಎಂಬ ಕನಸು ಬಹಳ ವರ್ಷಗಳಿಂದ ಇತ್ತು. ಅದು ಈಗ ನೆರೆವೇರಿದೆ ಹಾಗಾಗಿ ಬಹಳ ಖುಷಿಯಿದೆ. ತುಂಬಾ ಕಡಿಮೆ ಸಮಯದಲ್ಲಿ ಇದೆಲ್ಲ ನೆರವೇರಿದೆ. ಇಬ್ಬರ ಗುರುಗಳು ತುಂಬಾ ಜನ ಬಂದಿದ್ದಾರೆ ಎಂದು ಸುಹಾನಾ ಸೈಯ್ಯದ್ ಹರ್ಷ ವ್ಯಕ್ತಪಡಿಸಿದ್ದಾರೆ.

ಈ ಜೋಡಿಯ ಆಮಂತ್ರಣ ಪತ್ರಿಕೆಯಲ್ಲಿ, ಪ್ರೀತಿ ವಿಶ್ವದ ಭಾಷೆ, ಹೃದಯದಿಂದ ಹೊರಹೊಮ್ಮಿದ ಈ ಪ್ರೇಮ ಕಾವ್ಯ ದೇವ ವಿರಚಿತ. ಶ್ರೀ ಕುವೆಂಪುರವರ ಮಂತ್ರ ಮಾಂಗಲ್ಯದ ಆಶಯದಂತೆ ಸುಹಾನಾ ಹಾಗೂ ನಿತಿನ್ ಮದುವೆಯಾಗುತ್ತಿದ್ದೇವೆ. ನಮ್ಮ ನಡೆ ವಿಶ್ವಮಾನವತ್ವದೆಡೆಗೆ ಎಂದು ಹೇಳಿಕೊಂಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಕ್ಷ ಕೋಟಿ ಹೂಡಿಕೆಯ Google AI ಹಬ್ ಆಂಧ್ರಕ್ಕೆ ಹೊಯ್ತು: ನಮ್ಮ ಸಚಿವರು ಜಾತಿ, ಜಾತಿ ಗಣತಿಯಲ್ಲಿ ಮಗ್ನ; ಉದ್ಯಮಿ ಪೈ ವ್ಯಂಗ್ಯ

ಲಂಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಗೆ ಶಕ್ತಿ ಯೋಜನೆ; 'ನಕಲಿ' ಪ್ರಮಾಣಪತ್ರ ಹಂಚಿಕೊಂಡ್ರಾ CM?

'ಮತಗಳ್ಳತನ': ಆಳಂದ ಮಾಜಿ ಬಿಜೆಪಿ ಶಾಸಕ ಸುಭಾಷ್ ಗುತ್ತೇದಾರ್ ಮನೆ ಮೇಲೆ SIT ದಾಳಿ; Video

ನೀನು ನೇರವಾಗಿ ನನ್ನನ್ನೇ ಕೇಳಬೇಕಿತ್ತು: BCCI ಆಯ್ಕೆ ಸಮಿತಿ ವಿರುದ್ಧ ಮೊಹಮ್ಮದ್ ಶಮಿ ಆರೋಪಕ್ಕೆ ಮೌನ ಮುರಿದ ಅಜಿತ್ ಅಗರ್ಕರ್!

ಚಾಮರಾಜನಗರ: 27 ತಿಂಗಳ ಸಂಬಳ ಬಾಕಿ; ಗ್ರಾಮ ಪಂಚಾಯಿತಿ ಕಚೇರಿ ಮುಂಭಾಗದಲ್ಲೇ 'ವಾಟರ್ ಮ್ಯಾನ್' ಆತ್ಮಹತ್ಯೆ!

SCROLL FOR NEXT