ರಜನೀಕಾಂತ್-ಧನುಷ್ 
ಸಿನಿಮಾ ಸುದ್ದಿ

ರಜನಿಕಾಂತ್, ಧನುಷ್ ಮನೆಗೆ ಬಾಂಬ್ ಬೆದರಿಕೆ; ಆದ್ರೆ ನಟರು ಶೋಧ ನಿರಾಕರಿಸಿದ್ದೇಕೆ?

ತೇನಾಂಪೇಟೆ ಪೊಲೀಸರ ಪ್ರಕಾರ, ಅಕ್ಟೋಬರ್ 27 ರಂದು ಬೆಳಗ್ಗೆ 8.30 ರ ಸುಮಾರಿಗೆ ರಜನಿಕಾಂತ್ ಅವರ ಮನೆಯಲ್ಲಿ ಬಾಂಬ್ ಇಡಲಾಗಿದೆ ಎಂಬ ಬೆದರಿಕೆ ಪತ್ರ ಪೊಲೀಸರಿಗೆ ಬಂದಿದೆ.

ಚೆನ್ನೈ: ಖ್ಯಾತ ತಮಿಳು ನಟರಾದ ರಜನಿಕಾಂತ್ ಮತ್ತು ಧನುಷ್ ಅವರ ನಿವಾಸಗಳಲ್ಲಿ ಬಾಂಬ್‌ ಇಡಲಾಗಿದೆ ಎಂಬ ಬೆದರಿಕೆ ಇಮೇಲ್‌ಗಳನ್ನು ರಾಜ್ಯ ಪೊಲೀಸ್ ಮಹಾನಿರ್ದೇಶಕರು ಸ್ವೀಕರಿಸಿದ್ದಾರೆ ಎಂದು ತಮಿಳುನಾಡು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ತೇನಾಂಪೇಟೆ ಪೊಲೀಸರ ಪ್ರಕಾರ, ಅಕ್ಟೋಬರ್ 27 ರಂದು ಬೆಳಗ್ಗೆ 8.30 ರ ಸುಮಾರಿಗೆ ರಜನಿಕಾಂತ್ ಅವರ ಮನೆಯಲ್ಲಿ ಬಾಂಬ್ ಇಡಲಾಗಿದೆ ಎಂಬ ಬೆದರಿಕೆ ಪತ್ರ ಪೊಲೀಸರಿಗೆ ಬಂದಿದೆ.

"ಪೊಲೀಸರು ಬಾಂಬ್ ನಿಷ್ಕ್ರಿಯ ತಂಡದೊಂದಿಗೆ ರಜನಿಕಾಂತ್ ಅವರ ಮನೆಗೆ ತೆರಳಿದಾಗ, ಅವರು ಬಾಂಬ್ ಸ್ಕ್ವಾಡ್‌ನ ಸಹಾಯದಿಂದ ಶೋಧ ಕಾರ್ಯಾಚರಣೆಯ ಅಗತ್ಯವಿಲ್ಲ ಎಂದು ನಮಗೆ ತಿಳಿಸಿದರು" ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಅದೇ ದಿನ ಸಂಜೆ 6.30 ಕ್ಕೆ ಎರಡನೇ ಬೆದರಿಕೆ ಪತ್ರ ಬಂದಿದ್ದು, ರಜನಿಕಾಂತ್ ಅವರ ತಂಡ ಮತ್ತೆ ಭದ್ರತಾ ತಪಾಸಣೆಯನ್ನು ನಿರಾಕರಿಸಿತು.

ಅದೇ ದಿನ ನಟ ಧನುಷ್ ಅವರ ಮನೆಯಲ್ಲೂ ಬಾಂಬ್ ಇಡಲಾಗಿದೆ ಎಂಬ ಬೆದರಿಕೆ ಪತ್ರವೂ ಬಂದಿದೆ. "ಅವರು ಕೂಡ ನಮ್ಮ ಸಹಾಯವನ್ನು ನಿರಾಕರಿಸಿದರು" ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಇತ್ತೀಚಿನ ವಾರಗಳಲ್ಲಿ ಹಲವಾರು ಪ್ರಮುಖ ವ್ಯಕ್ತಿಗಳಿಗೆ ಈ ರೀತಿಯ ಬೆದರಿಕೆ ಪತ್ರಗಳು ಬರುತ್ತಿದ್ದು, ಸೈಬರ್ ಅಪರಾಧ ಪೊಲೀಸರು ಆ ಇಮೇಲ್‌ಗಳನ್ನು ಪತ್ತೆಹಚ್ಚುತ್ತಿದ್ದಾರೆ" ಎಂದು ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯ ಸರ್ಕಾರದ 'ದ್ವೇಷ ಭಾಷಣ' ಮಸೂದೆಗೆ ಅಮಿತ್ ಶಾ ಅಡ್ಡಗಾಲು; ಅಸ್ತಿತ್ವದಲ್ಲಿರುವ ಕಾನೂನೇ ಸಾಕು: ಕೇಂದ್ರ

Mekedatu row: ಕರ್ನಾಟಕದ DPR ತಿರಸ್ಕರಿಸಿ; ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ವಿಜಯ್ ಮನವಿ

IPL 2026: ನಾವೇನು ಸಿನಿಮಾ ಸ್ಟಾರ್‌ಗಳಲ್ಲ: ವಿಮಾನ ನಿಲ್ಗಾಣದಲ್ಲಿ Riyan Parag ಗರಂ, ವೈಭವ್ ಸೂರ್ಯವಂಶಿ ಶಾಕ್! Video

Video: 'ಕಾಂತಾರ' ಕೆಂಗಣ್ಣಿಗೆ ಗುರಿ, ಬಾಲಿವುಡ್​ನಿಂದ ಬ್ಯಾನ್; ಚಾಮುಂಡೇಶ್ವರಿಗೆ ತಲೆಬಾಗಿ ಕ್ಷಮೆಯಾಚಿಸಿದ ರಣವೀರ್ ಸಿಂಗ್!

IPL 2026: RCB vs GT ನಡುವಿನ ಕ್ವಾಲಿಫೈಯರ್ ಪಂದ್ಯಕ್ಕೆ ಮಳೆ ಆತಂಕ, ರಿಸರ್ವ್ ಡೇ ಕೂಡ ಇಲ್ಲ.. ಪಂದ್ಯ ರದ್ದಾದರೆ ಯಾರು ಫೈನಲ್ ಗೆ?

SCROLL FOR NEXT