ನಟಿ ಉಮಾಶ್ರೀ  
ಸಿನಿಮಾ ಸುದ್ದಿ

ಹಿರಿಯ ನಟಿ ಉಮಾಶ್ರೀ ಗೆ 2019 ನೇ ಸಾಲಿನ ಡಾ. ರಾಜ್ ಕುಮಾರ್ ಪ್ರಶಸ್ತಿ: ಪುಟ್ಟಣ್ಣ ಕಣಗಾಲ್, ಡಾ. ವಿಷ್ಣುವರ್ಧನ್ ಪ್ರಶಸ್ತಿ ಪ್ರಕಟ

ಪುಟ್ಟಣ್ಣ ಕಣಗಾಲ್ ಪ್ರಶಸ್ತಿಗೆ ನಿರ್ದೇಶಕ ಎನ್​​ಆರ್ ನಂಜುಂಡೇಗೌಡ ಅವರನ್ನು ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಗಳು ಐದು ಲಕ್ಷ ರೂಪಾಯಿ ನಗದು ಬಹುಮಾನದ ಜೊತೆಗೆ ಚಿನ್ನ ಲೇಪಿತ ಪದಕ ಒಳಗೊಂಡಿರಲಿವೆ.

ಬೆಂಗಳೂರು: 2019ನೇ ಸಾಲಿನ ಡಾ. ರಾಜ್ ಕುಮಾರ್, ಪುಟ್ಟಣ್ಣ ಕಣಗಾಲ್ , ಡಾ. ವಿಷ್ಣುವರ್ಧನ್ ಪ್ರಶಸ್ತಿ ಪ್ರಕಟಗೊಂಡಿದೆ. ನಟಿ ಉಮಾಶ್ರೀಗೆ 2019ನೇ ಸಾಲಿನ ಡಾ. ರಾಜ್ ಕುಮಾರ್ ಪ್ರಶಸ್ತಿ ಲಭಿಸಿದೆ.ಉಮಾಶ್ರೀ ಅವರು ಚಿತ್ರರಂಗಕ್ಕೆ ಸಲ್ಲಿಸಿರುವ ಸೇವೆ, ಅವರ ಅತ್ಯುತ್ತಮ ನಟನೆಯನ್ನು ಗುರುತಿಸಿ ರಾಜ್​ಕುಮಾರ್ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ವಿಷ್ಣುವರ್ಧನ್ ಪ್ರಶಸ್ತಿಗೆ ಹಿರಿಯ ನಟ ರಿಚರ್ಡ್ ಕ್ಯಾಸ್ಟಲಿನೋ ಅವರನ್ನು ಆಯ್ಕೆ ಮಾಡಲಾಗಿದೆ. ರಿಚರ್ಡ್ ಕ್ಯಾಸ್ಟಲಿನೋ ಅವರು ಕನ್ನಡ, ತುಳು, ಕೊಂಕಣಿ ಸಿನಿಮಾಗಳಲ್ಲಿ ವರ್ಷಗಳ ಕಾಲ ನಟಿಸಿದ್ದಾರೆ.

ಪುಟ್ಟಣ್ಣ ಕಣಗಾಲ್ ಪ್ರಶಸ್ತಿಗೆ ನಿರ್ದೇಶಕ ಎನ್​​ಆರ್ ನಂಜುಂಡೇಗೌಡ ಅವರನ್ನು ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಗಳು ಐದು ಲಕ್ಷ ರೂಪಾಯಿ ನಗದು ಬಹುಮಾನದ ಜೊತೆಗೆ ಚಿನ್ನ ಲೇಪಿತ ಪದಕ ಒಳಗೊಂಡಿರಲಿವೆ.

ಪ್ರಶಸ್ತಿಗಳ ಜೊತೆಗೆ ಬೆಳ್ಳಿ ತೊರೆಗೆ ಉತ್ತಮ ಸಿನಿಮಾ ಪ್ರಬಂಧ ಮತ್ತು ‘ಗುಳೆ’ ಸಿನಿಮಾಕ್ಕೆ ಉತ್ತಮ ಕಿರುಚಿತ್ರ ಪ್ರಶಸ್ತಿಗಳನ್ನು ಸಹ ಸರ್ಕಾರ ಘೋಷಿಸಿದೆ. ಈ ಪ್ರಶಸ್ತಿಗಳು 25 ಸಾವಿರ ರೂಪಾಯಿ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ಹಾಗೂ ಬೆಳ್ಳಿ ಪದಕಗಳನ್ನು ಒಳಗೊಂಡಿರಲಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ