ಕೂಲಿ ಚಿತ್ರದ ಸ್ಟಿಲ್ 
ಸಿನಿಮಾ ಸುದ್ದಿ

ಬಾಕ್ಸ್ ಆಫೀಸ್‌ನಲ್ಲಿ ರಜನಿಕಾಂತ್ ನಟನೆಯ 'ಕೂಲಿ' ಅಬ್ಬರ; ₹500 ಕೋಟಿಗೂ ಅಧಿಕ ಗಳಿಕೆ

ಕೂಲಿ ಚಿತ್ರವು ನಟ ರಜನಿಕಾಂತ್ ಅವರ 171ನೇ ಚಿತ್ರವಾಗಿದ್ದು, ಲೋಕೇಶ್ ಕನಕರಾಜ್ ಆ್ಯಕ್ಷನ್ ಕಟ್ ಹೇಳಿದ್ದಾರೆ.

ನವದೆಹಲಿ: ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ 'ಕೂಲಿ' ಚಿತ್ರವು ವಿಶ್ವದಾದ್ಯಂತ ಗಲ್ಲಾಪೆಟ್ಟಿಗೆಯಲ್ಲಿ 500 ಕೋಟಿ ರೂಪಾಯಿಗೂ ಅಧಿಕ ಗಳಿಕೆ ಕಂಡಿದೆ.

ಆಗಸ್ಟ್ 14 ರಂದು ಬಿಡುಗಡೆಯಾದ ಈ ಚಿತ್ರಕ್ಕೆ ನಟ ಕಾರ್ತಿ ನಟನೆಯ 'ಕೈದಿ', ವಿಜಯ್ ನಟನೆಯ 'ಮಾಸ್ಟರ್' ಮತ್ತು 'ಲಿಯೋ' ಮತ್ತು ಕಮಲ್ ಹಾಸನ್ ಅವರ 'ವಿಕ್ರಮ್'ನಂತಹ ಚಿತ್ರಗಳನ್ನು ನಿರ್ದೇಶಿಸಿದ್ದ ಲೋಕೇಶ್ ಕನಕರಾಜ್ ಆ್ಯಕ್ಷನ್ ಕಟ್ ಹೇಳಿದ್ದಾರೆ.

ಫಿಲ್ಮ್ ಟ್ರೇಡ್ ಪೋರ್ಟಲ್ Sacnilk ಪ್ರಕಾರ, ಬಿಡುಗಡೆಯಾದ ಆರಂಭದಲ್ಲಿ 151 ಕೋಟಿ ರೂ. ಕಲೆಕ್ಷನ್ ಮಾಡಿದ್ದ ಕೂಲಿ ಚಿತ್ರ ವಿಶ್ವದಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ ಒಟ್ಟು 504 ಕೋಟಿ ರೂ. ಸಂಗ್ರಹ ಕಂಡಿದೆ. ದೇಶೀಯ ಗಲ್ಲಾ ಪೆಟ್ಟಿಗೆಯಲ್ಲಿಯೇ 327 ಕೋಟಿ ರೂ. ಗಳಿಸಿದೆ.

ಕೂಲಿ ಚಿತ್ರವು ನಟ ರಜನಿಕಾಂತ್ ಅವರ 171ನೇ ಚಿತ್ರವಾಗಿದ್ದು, ಅವರು ಕೂಲಿ ಪಾತ್ರದಲ್ಲಿ ನಟಿಸಿದ್ದಾರೆ. ಬಂದರು ಪಟ್ಟಣದಲ್ಲಿ ತಮ್ಮ ಮಾಜಿ ಸಹೋದ್ಯೋಗಿಗಳು ಎದುರಿಸುವ ಸಂಕಷ್ಟದ ವಿರುದ್ಧ ನಿಲ್ಲುತ್ತಾರೆ.

ಚಿತ್ರದಲ್ಲಿ ನಟರಾದ ಸೌಬಿನ್ ಶಾಹಿರ್, ಉಪೇಂದ್ರ, ಶ್ರುತಿ ಹಾಸನ್, ಸತ್ಯರಾಜ್, ನಾಗಾರ್ಜುನ, ನಟಿ ರಚಿತಾ ರಾಮ್ ಮತ್ತು ಬಾಲಿವುಡ್ ತಾರೆ ಅಮೀರ್ ಖಾನ್ ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ. ಸನ್ ಪಿಕ್ಚರ್ಸ್ ಬೆಂಬಲದೊಂದಿಗೆ, ಪೆನ್ ಸ್ಟುಡಿಯೋಸ್ ಈ ಚಿತ್ರವನ್ನು ವಿತರಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್ ಶಾಕ್: ಪ್ರದೋಷ್‌ ಮಾಫಿ ಸಾಕ್ಷಿಗೆ ಕೋರ್ಟ್‌ ಅಸ್ತು

ರಾಮ ಮಂದಿರ ಟ್ರಸ್ಟ್‌ CEO ಹುದ್ದೆಗೆ ಬರೋಬ್ಬರಿ 5,200 ಅರ್ಜಿ; ಸಂದರ್ಶನಕ್ಕೆ ಕೇವಲ 20 ಅಭ್ಯರ್ಥಿಗಳು ಆಯ್ಕೆ!

17 ದಿನಗಳಿಂದ ಸಂಸತ್ತಿನ ಎರಡೂ ಸದನಗಳು ಸ್ತಬ್ಧ; ನಮ್ಮ ಬೇಡಿಕೆಗಳಿಗೆ ಹೆದರಿ PM ಮೋದಿ, ಅಮಿತ್ ಶಾ ಸದನಕ್ಕೆ ಬರುತ್ತಿಲ್ಲ: ಖರ್ಗೆ

Video: ಬಿಡದಿ ಟೌನ್‌ಶಿಪ್ ಪಿಸುಮಾತು ವಿವಾದ: ಮಧು ಬಂಗಾರಪ್ಪ ಜೊತೆಗಿನ ಮಾತುಕತೆ ಬಗ್ಗೆ ಬಿ.ವೈ. ವಿಜಯೇಂದ್ರ ಸ್ಪಷ್ಟನೆ

'ಬೇಡ ಬ್ರೋ': ಬೆಂಗಳೂರು ಪೊಲೀಸರ ಭರ್ಜರಿ ಬೇಟೆ; 55.8 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ, 39 ಡ್ರಗ್ ಪೆಡ್ಲರ್‌ಗಳ ಬಂಧನ!