ದುನಿಯಾ ವಿಜಯ್ 
ಸಿನಿಮಾ ಸುದ್ದಿ

SIIMA 2025: ಕನ್ನಡ ಅಷ್ಟೊಂದು ಕೆಳಮಟ್ಟಕ್ಕೆ ಇಳಿದಿಲ್ಲ; ವೇದಿಕೆಯಲ್ಲೇ ಆಯೋಜಕರಿಗೆ ದುನಿಯಾ ವಿಜಯ್ ಎಚ್ಚರಿಕೆ, Video!

2024ರ ಸಾಲಿನ ಸೈಮಾ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಮತ್ತೆ ಕನ್ನಡಿಗರಿಗೆ ಅವಮಾನ ಮಾಡಲಾಗಿದೆ ಎಂದು ದುನಿಯಾ ವಿಜಯ್‌ ಆಕ್ರೋಶ ಹೊರಹಾಕಿದ್ದಾರೆ.

2024ರ ಸಾಲಿನ ಸೈಮಾ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಮತ್ತೆ ಕನ್ನಡಿಗರಿಗೆ ಅವಮಾನ ಮಾಡಲಾಗಿದೆ ಎಂದು ದುನಿಯಾ ವಿಜಯ್‌ ಆಕ್ರೋಶ ಹೊರಹಾಕಿದ್ದಾರೆ. ದುಬೈನಲ್ಲಿ ನಡೆದ ಸಮಾರಂಭದಲ್ಲಿ ಬೇಕು ಅಂತಲೇ ಕನ್ನಡಿಗರಿಗೆ ಕೊನೆಯಲ್ಲಿ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ ಎಂದು ವಿಜಿ ಸಿಟ್ಟು ಕೋಪಗೊಂಡಿದ್ದಾರೆ. ಈ ಕಾರ್ಯಕ್ರಮದಲ್ಲಿ ದಕ್ಷಿಣ ಭಾರತದ ಕಲಾವಿದರು, ತಂತ್ರಜ್ಞರು ಭಾಗಿಯಾಗಿ ಹಲವು ವಿಭಾಗಗಳಲ್ಲಿ ಪ್ರಶಸ್ತಿ ಸ್ವೀಕರಿಸಿದರು. ಭೀಮಾ ಚಿತ್ರಕ್ಕಾಗಿ ಪ್ರಶಸ್ತಿ ಸ್ವೀಕರಿಸಿದ ನಟ ದುನಿಯಾ ವಿಜಯ್ ವೇದಿಕೆಯಲ್ಲೇ ಆಯೋಜಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಎಲ್ಲಾ ಭಾಷೆಯ ಸಿನಿಮಾ ನಟ, ನಟಿಯರಿಗೆ ಹಾಗೂ ತಂತ್ರಜ್ಞರಿಗೆ ಪ್ರಶಸ್ತಿ ನೀಡಿ ಕೊನೆಗೆ ಕನ್ನಡ ಚಿತ್ರರಂಗದವರಿಗೆ ಪ್ರಶಸ್ತಿ ನೀಡಲಾಗುತ್ತದೆ. ಪ್ರತಿಬಾರಿಯೂ ಈ ರೀತಿಯಾಗಿಯೇ ನಡೆದುಕೊಂಡು ಬಂದಿದೆ. ಕೊನೆಗೆ ಪ್ರಶಸ್ತಿ ನೀಡುವಾಗ ಎಲ್ಲರೂ ಎದ್ದು ಹೋಗಿರುತ್ತಾರೆ. ಎಲ್ಲರೂ ಇದ್ದಾಗಲೇ ಕನ್ನಡಿಗರಿಗೂ ಕರೆದು ಅವಾರ್ಡ್ ಕೊಡಿ ಎಂದು ವೇದಿಕೆಯ ಮೇಲೆಯೇ ನಟ ದುನಿಯಾ ವಿಜಯ್ ಗರಂ ಆಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಯುದ್ಧದ ಕುರಿತು ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ಜೊತೆ ಮೋದಿ ಮಹತ್ವದ ಮಾತುಕತೆ

ಗುಜರಾತ್: ರಾಹುಲ್ ಗಾಂಧಿ ಪರ ವಕಾಲತ್ತು ವಹಿಸಿದ್ದ ವಕೀಲ ಫಿರೋಜ್ ಪಠಾಣ್ ಮೃತದೇಹ ತಾಪಿ ನದಿಯ ದಡದಲ್ಲಿ ಪತ್ತೆ!

ಧರ್ಮಸ್ಥಳ ಬುರುಡೆ ರಹಸ್ಯ ಬಹಿರಂಗ: ಮುಸುಕುಧಾರಿಗೆ 'ಬುರುಡೆ' ಕೊಟ್ಟಿದ್ದು ಸೌಜನ್ಯ ಮಾವ!

ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ; ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತ ಅನುಷ್ಠಾನ

ಬೀಡಿಗಳಿಗೆ ಬಿಹಾರದ ಹೋಲಿಕೆ: ಕೇರಳ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಮುಖ್ಯಸ್ಥನ ತಲೆದಂಡ

SCROLL FOR NEXT