ಸುದೀಪ್ ಮತ್ತು ಪ್ರಿಯಾ 
ಸಿನಿಮಾ ಸುದ್ದಿ

ಪತಿ ಹುಟ್ಟುಹಬ್ಬಕ್ಕೆ ವಿನೂತನ ಗಿಫ್ಟ್: ಅಂಗ-ಅಂಗಾಂಶ ದಾನ ಮಾಡಿದ ಪ್ರಿಯಾ ಸುದೀಪ್‌

ಪ್ರತಿ ವರ್ಷ ಸುದೀಪ್‌ ಅವರ ಹುಟ್ಟುಹಬ್ಬಕ್ಕೆ, ಅಭಿಮಾನಿಗಳು ರಕ್ತದಾನ, ಅನ್ನದಾನ, ಬಡ ಮಕ್ಕಳಿಗೆ ಸಹಾಯ ಸೇರಿ ಇನ್ನಿತರ ಸಮಾಜ ಕಾರ್ಯಗಳನ್ನು ಮಾಡುತ್ತಿದ್ದರು.

ಬೆಂಗಳೂರು: ಕನ್ನಡದ ಖ್ಯಾತ ನಟ ಕಿಚ್ಚ ಸುದೀಪ್ ಅವರು ಸೆ.2ರಂದು ಅಭಿಮಾನಿಗಳೊಂದಿಗೆ 52ನೇ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಂಡಿದ್ದರು. ಈ ಸಂದರ್ಭದಲ್ಲಿ ನಟ ಸುದೀಪ್ ಅವರ ಪತ್ನಿ ಪ್ರಿಯಾ ಸುದೀಪ್‌ ಮಹತ್ತರ ಕಾರ್ಯ ಮಾಡಿದ್ದಾರೆ. ಅಂಗ-ಅಂಗಾಂಶ ದಾನ ಮಾಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.

ಕಿಚ್ಚ ಸುದೀಪ್ ಕೇರ್ ಫೌಂಡೇಶನ್‌ ಮೂಲಕ ಅಂಗ ಮತ್ತು ಅಂಗಾಂಶಗಳನ್ನು ಪ್ರಿಯಾ ದಾನ ಮಾಡಿದ್ದು, ಈ ಬಗ್ಗೆ ವಿಡಿಯೋ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಪ್ರತಿ ವರ್ಷ ಸುದೀಪ್‌ ಅವರ ಹುಟ್ಟುಹಬ್ಬಕ್ಕೆ, ಅಭಿಮಾನಿಗಳು ರಕ್ತದಾನ, ಅನ್ನದಾನ, ಬಡ ಮಕ್ಕಳಿಗೆ ಸಹಾಯ ಸೇರಿ ಇನ್ನಿತರ ಸಮಾಜ ಕಾರ್ಯಗಳನ್ನು ಮಾಡುತ್ತಿದ್ದರು. ಈ ವರ್ಷ ಅವರ ಹುಟ್ಟುಹಬ್ಬಕ್ಕೆ ನಾನು ಅಂಗ ಮತ್ತು ಅಂಗಾಶಗಳನ್ನು ದಾನ ಮಾಡಿದ್ದೇನೆ.

ಅಂಗಾಂಗ ದಾನ ಪ್ರಕ್ರಿಯೆ ಬಹಳ ಸುಲಭವಾಗಿದೆ. ನಿಮ್ಮ ಸಣ್ಣ ನಿರ್ಧಾರದಿಂದ ಒಂದು ಜೀವ ಉಳಿಯುತ್ತದೆ ಎಂದರೆ ಅದಕ್ಕಿಂತ ದೊಡ್ಡ ಕೆಲಸ ಬೇರೊಂದಿಲ್ಲ. ನಮ್ಮ ಕಿಚ್ಚ ಸುದೀಪ್‌ ಕೇರ್‌ ಫೌಂಡೇಶನ್‌ ಮೂಲಕ ನಾನು ಅಂಗಾಂಗ ದಾನಕ್ಕೆ ನೋಂದಣಿ ಮಾಡಿದ್ದೇನೆ.

ನೀವು ಮಾಡಿ ಎಂದು ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ. ಅಂಗಾಂಗ ದಾನ ಮಾಡಲು ನಮ್ಮ ಜವಾಬ್ದಾರಿ ಏನೆಂದರೆ, ಮೊದಲು ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಆಗ ಇದಕ್ಕೊಂದು ಅರ್ಥ ಬರುತ್ತದೆ ಎಂದು ಪ್ರಿಯಾ ಸುದೀಪ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಫಲಿಸಿತು ವಿಷ್ಣು ಅಭಿಮಾನಿಗಳ ಬೇಡಿಕೆ: ಸಾಹಸಸಿಂಹ ವಿಷ್ಣುವರ್ಧನ್, ಸರೋಜಾದೇವಿಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ

ABVP ಕಾರ್ಯಕ್ರಮದಲ್ಲಿ ಭಾಗಿಯಾದ ವಿಚಾರ: ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದೇನು? Video

ಬೆಂಗಳೂರು: ಮಹಿಳೆ ಮೇಲೆ ಹಲ್ಲೆ; BMTC ಡ್ರೈವರ್ ತಾತ್ಕಾಲಿಕ ವಜಾ; ಮುತ್ತಿಕ್ಕುವಂತೆ ಪೀಡಿಸಿದ ಚಾಲಕ ಆರೀಫ್‍ಗೆ ಧರ್ಮದೇಟು!

ನಿಮ್ಮ ಕಲ್ಪನೆಗೂ ಒಂದು ಮಿತಿ ಇರಲಿ: ವಿನಯ್ ಜತೆ ಸುತ್ತಾಟ ಎಂದವರಿಗೆ ರಮ್ಯಾ ತಿರುಗೇಟು

'ರಾಜಕೀಯವಾಗಿ ನನ್ನನ್ನು ಟಾರ್ಗೆಟ್ ಮಾಡಲು 'Paid campaign': ಕೇಂದ್ರ ಸಚಿವ ನಿತಿನ್ ಗಡ್ಕರಿ ಆಕ್ರೋಶ!

SCROLL FOR NEXT