ದುಬಾರಿ ಸಿನಿಮಾ ಟಿಕೆಟ್ ದರಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಸರ್ಕಾರ ಏಕರೂಪ ಟಿಕೆಟ್ ದರ ಜಾರಿಗೆ ತರುವುದಾಗಿ ಹೇಳಿದೆ. ಇಂದು ಸೆಪ್ಟೆಂಬರ್ 12ರಿಂದ ಈ ನಿಯಮ ಜಾರಿಗೆ ಬರುವಂತೆ ಆದೇಶ ಹೊರಡಿಸಿದೆ.
ಹೊಸ ಆದೇಶವು ಇಂದಿನಿಂದಲೇ ಅನ್ವಯ ಆಗಲಿದೆ. ಇದರ ಪ್ರಕಾರ ಏಕಪರದೆ ಹಾಗೂ ಮಲ್ಟಿಪ್ಲೆಕ್ಸ್ನಲ್ಲಿ ಟಿಕೆಟ್ನ ಮೂಲ ಬೆಲೆ 200 ರೂಪಾಯಿ ದಾಟುವಂತಿಲ್ಲ. ಶೇ.18 ತೆರಿಗೆಯೂ ಸೇರಿದರೆ ಸಿನಿಮಾದ ಟಿಕೆಟ್ ದರ 236 ರೂಪಾಯಿ ಆಗಲಿದೆ. ಸಿನಿಮಾ ಪ್ರಿಯರಿಗೆ ಇದರಿಂದ ಕೊಂಚ ಸಮಾಧಾನವಾಗಿದೆ.
ಇನ್ನು ಕೆಲವು ಷರತ್ತುಗಳನ್ನು ಕೂಡ ಸರ್ಕಾರ ಹೇರಿದೆ. ಅನೇಕ ಮಲ್ಟಿಪ್ಲೆಕ್ಸ್ಗಳಲ್ಲಿ ಗೋಲ್ಡ್ ಕ್ಲಾಸ್ ವ್ಯವಸ್ಥೆ ಇರುತ್ತವೆ. ಇವುಗಳಿಗೆ 200 ರೂಪಾಯಿ ಟಿಕೆಟ್ ದರದ ಮಿತಿ ಇಲ್ಲ. ಆ ಆಸನಗಳಿಗೆ ಮಲ್ಟಿಪ್ಲೆಕ್ಸ್ಗಳು ತಮ್ಮಿಷ್ಟದ ದರ ನಿಗದಿ ಮಾಡಬಹುದು.
ಬಹುತೇಕ ಮಲ್ಟಿಪ್ಲೆಕ್ಸ್ಗಳಲ್ಲಿ ರಿಕ್ಲೈನ್ ಸೀಟ್ಗಳು ಇರುತ್ತವೆ. ಅವುಗಳಿಗೂ 200 ರೂಪಾಯಿ ಟಿಕೆಟ್ ದರ ಅನ್ವಯ ಆಗುತ್ತದೆ ಎನ್ನಲಾಗಿದೆ. ಸದ್ಯ ಟಿಕೆಟ್ ಮಂದಿರಗಳಿಗೆ ಆದೇಶ ಪ್ರತಿ ತಲುಪಿಲ್ಲ.