ಮಹಾವತಾರ ನರಸಿಂಹ ಚಿತ್ರದ ಪೋಸ್ಟರ್ 
ಸಿನಿಮಾ ಸುದ್ದಿ

ಅನಿಮೇಷನ್ ಬ್ಲಾಕ್‌ಬಸ್ಟರ್ 'ಮಹಾವತಾರ ನರಸಿಂಹ' ಒಟಿಟಿಯಲ್ಲಿ ಬಿಡುಗಡೆ

ಜುಲೈ 25 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ಈ ಚಿತ್ರವು, ಆರಂಭಿಕ ವಾರಾಂತ್ಯದಿಂದಲೇ ಗಲ್ಲಾಪೆಟ್ಟಿಗೆಯಲ್ಲಿ ಭರ್ಜರಿ ಕಲೆಕ್ಷನ್ ಮಾಡುವ ಮೂಲಕ ಎಲ್ಲರನ್ನೂ ಅಚ್ಚರಿಗೊಳಿಸಿತು.

ಇತ್ತೀಚಿನ ಅನಿಮೇಷನ್ ಬ್ಲಾಕ್‌ಬಸ್ಟರ್ ಮಹಾವತಾರ ನರಸಿಂಹ ಚಿತ್ರವು ಒಟಿಟಿಯಲ್ಲಿ ಬಿಡುಗಡೆಯಾಗಿದೆ. ಸೆಪ್ಟೆಂಬರ್ 19ರ ಶುಕ್ರವಾರ ಮಧ್ಯಾಹ್ನ 12.30 ಚಿತ್ರವು ನೆಟ್‌ಫ್ಲಿಕ್ಸ್‌ನಲ್ಲಿ ಸ್ಟ್ರೀಮಿಂಗ್ ಆಗುತ್ತಿದೆ.

ಅಶ್ವಿನ್ ಕುಮಾರ್ ನಿರ್ದೇಶನದ ಮಹಾವತಾರ ನರಸಿಂಹ, ವಿಷ್ಣುವಿನ ಕಟ್ಟಾ ಭಕ್ತ ಮತ್ತು ಅವನ ತಂದೆ ಹಿರಣ್ಯಕಶಿಪುಂ- ಒಬ್ಬ ಪರಾಕ್ರಮಿ ರಾಜ ಮತ್ತು ಕಟ್ಟಾ ನಾಸ್ತಿಕನ ನಡುವಿನ ಕಥೆಯಾಗಿದೆ. ವಿಷ್ಣುವಿನ ಇರುವಿಕೆ ಬಗ್ಗೆ ತನ್ನ ಮಗನ ಅಚಲ ನಂಬಿಕೆಯಿಂದ ಕೋಪಗೊಂಡ ತಂದೆಯ ಕಥೆಯನ್ನು ಒಳಗೊಂಡಿದೆ.

ಜುಲೈ 25 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ಈ ಚಿತ್ರವು, ಆರಂಭಿಕ ವಾರಾಂತ್ಯದಿಂದಲೇ ಗಲ್ಲಾಪೆಟ್ಟಿಗೆಯಲ್ಲಿ ಭರ್ಜರಿ ಕಲೆಕ್ಷನ್ ಮಾಡುವ ಮೂಲಕ ಎಲ್ಲರನ್ನೂ ಅಚ್ಚರಿಗೊಳಿಸಿತು. ದೇಶೀಯ ಬಾಕ್ಸ್ ಆಫೀಸ್‌ನಲ್ಲಿ ಅದ್ಭುತ ಯಶಸ್ಸಿನ ನಂತರ, ಈ ಚಿತ್ರವು ನಂತರ ವಿದೇಶಗಳಲ್ಲಿಯೂ ಬಿಡುಗಡೆಯಾಯಿತು. ಆಗಸ್ಟ್‌ನಲ್ಲಿ, ಈ ಚಿತ್ರವು ವಿಶ್ವದಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ 300 ಕೋಟಿ ರೂ.ಗೂ ಅಧಿಕ ಗಳಿಕೆ ಕಂಡಿತು. ಅನಿಮೇಷನ್ ಚಿತ್ರವೊಂದು ಅಧಿಕ ಗಳಿಕೆ ಕಂಡ ಚಿತ್ರವಾಯಿತು.

ಈ ಚಿತ್ರವನ್ನು ಹೊಂಬಾಳೆ ಫಿಲ್ಮ್ಸ್ ಪ್ರಸ್ತುತಪಡಿಸಿದ್ದು, ಕ್ಲೀಮ್ ಪ್ರೊಡಕ್ಷನ್ಸ್ ಬೆಂಬಲದೊಂದಿಗೆ ಶಿಲ್ಪಾ ಧವನ್, ಕುಶಾಲ್ ದೇಸಾಯಿ ಮತ್ತು ಚೈತನ್ಯ ದೇಸಾಯಿ ನಿರ್ಮಿಸಿದ್ದಾರೆ. ಈ ಚಿತ್ರವು ಸ್ಯಾಮ್ ಸಿಎಸ್ ಅವರ ಸಂಗೀತ ಸಂಯೋಜನೆ ಹೊಂದಿದ್ದು, ಚಿತ್ರಕಥೆಯನ್ನು ಜಯಪೂರ್ಣ ದಾಸ್ ಮತ್ತು ರುದ್ರ ಪ್ರತಾಪ್ ಘೋಷ್ ಬರೆದಿದ್ದಾರೆ.

ಹೊಂಬಾಳೆ ಫಿಲ್ಮ್ಸ್ ತನ್ನ ಮಹತ್ವಾಕಾಂಕ್ಷೆಯ ಮಹಾವತಾರ್ ಸಿನಿಮ್ಯಾಟಿಕ್ ಯೂನಿವರ್ಸ್ ಎಂಬ ಪ್ರಮುಖ ಯೋಜನೆಯನ್ನು ಪ್ರಾರಂಭಿಸಿದ್ದು, ಇದು ಹಿಂದೂ ಪುರಾಣದ ಭಗವಾನ್ ವಿಷ್ಣುವಿನ ಹತ್ತು ಅವತಾರಗಳನ್ನು ಆಧರಿಸಿದ ಅನಿಮೇಟೆಡ್ ಚಲನಚಿತ್ರಗಳನ್ನು ಒಳಗೊಂಡಿರುತ್ತದೆ. ಈ ಸರಣಿಯ ಮೊದಲ ಚಿತ್ರ ಇದೀಗ ಬಿಡುಗಡೆಯಾಗಿದ್ದು, ಉಳಿದ ಚಿತ್ರಗಳು 2025 ಮತ್ತು 2037ರ ನಡುವೆ ಬಿಡುಗಡೆ ಮಾಡಲು ಯೋಜಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಅನಕ್ಷರಸ್ಥ' ಪ್ರಧಾನಿಯಿಂದಾಗಿ ಪೆಟ್ರೋಲ್-ಡೀಸೆಲ್ ಮತ್ತು ಅನಿಲ ಬೆಲೆಗಳು ಹೆಚ್ಚಳವಾಗಿದೆ: ಸಿಎಂ ಸಿದ್ದರಾಮಯ್ಯ

IPL Valuation Chart: 1.63 ಲಕ್ಷ ಕೋಟಿಗೇರಿದ ಐಪಿಎಲ್ ಮೌಲ್ಯ, CSK ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ KKR, 'ಕಿಂಗ್' ವಿರಾಟ್ ಕೊಹ್ಲಿ ಗಳಿಸಿದ್ದೆಷ್ಟು ಗೊತ್ತಾ?

ಮಾರ್ತಾಂಡ ಆನೆ ಕೊಂದ ಕಂಜನ್ ದಸರಾದಿಂದ ಶಾಶ್ವತ ನಿಷೇಧ: ಸಚಿವ ಈಶ್ವರ್ ಖಂಡ್ರೆ ಆದೇಶ

ಬೋಗಸ್ ದಾಖಲೆ ಸೃಷ್ಟಿಸಿ 23 ಕೋಟಿ ರೂ ಲೂಟಿ; ಬೆಳಗಾವಿ ಕೊಳಚೆ ನಿರ್ಮೂಲನಾ ಮಂಡಳಿಗೆ ಸೇರಿದ 8 ಕಡೆ ಲೋಕಾಯುಕ್ತ ದಾಳಿ!

ವಚನಾನಂದಶ್ರೀ ವಿರುದ್ಧದ Pocso ಪ್ರಕರಣ: ತನಿಖಾಧಿಕಾರಿ PSI ಮಂಜುಳಾ ದಿಢೀರ್ ವರ್ಗಾವಣೆ!

SCROLL FOR NEXT