ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ 'ಕಾಂತಾರ- 1' ಸಿನಿಮಾ ಟ್ರೈಲರ್ ಆರ್ಭಟ ಜೋರಾಗಿದೆ. ಎಲ್ಲಾ ಭಾಷೆಗಳಲ್ಲಿ ಸೇರಿ ಟ್ರೈಲರ್ 5.5 ಕೋಟಿಗೂ ಅಧಿಕ ವೀವ್ಸ್ ಕಂಡಿದೆ.
'ಕಾಂತಾರ- 1' ಬಿಡುಗಡೆ ಹೊಸ್ತಿಲಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್‌ವೊಂದು ಸದ್ದು ಮಾಡ್ತಿದೆ. ಈ ಬಗ್ಗೆ ಸಾಕಷ್ಟು ಪರ ವಿರೋಧ ಚರ್ಚೆ ನಡೀತಿದೆ. ಟೀಕೆಗೆ ಗುರಿಯಾಗುತ್ತಿದ್ದಂತೆ ಅದನ್ನು ಪೋಸ್ಟ್ ಮಾಡಿದವರು ಕ್ಷಮೆ ಕೇಳಿದ್ದು ಆಯಿತು. ಆದರೂ ಚರ್ಚೆ ಮಾತ್ರ ನಿಲ್ಲುತ್ತಿಲ್ಲ. ಇದೀಗ ಅಂತಿಮವಾಗಿ ಚಿತ್ರತಂಡವೇ ಸ್ಪಷ್ಟನೆ ನೀಡಿದೆ. ಆ ಪೋಸ್ಟ್‌ಗೂ ನಮಗೂ ಯಾವುದೇ ಸಂಬಂಧ ಇಲ್ಲ ಎಂದು ರಿಷಬ್ ಶೆಟ್ಟಿ ಹೇಳಿದ್ದಾರೆ.
'ಕಾಂತಾರ ಪರ್ವ' ಹೆಸರು ಟ್ವಿಟ್ಟರ್ ಪೇಜ್‌ನಲ್ಲಿ 4 ದಿನಗಳ ಹಿಂದೆ ಒಂದು ಪೋಸ್ಟ್ ಮಾಡಲಾಗಿತ್ತು. 'ಮದ್ಯಪಾನ, ಧೂಮಪಾನ ಮಾಡಬಾರದು ಹಾಗೂ ಮಾಂಸಾಹಾರ ಸೇವಿಸದೇ ಬಂದು 'ಕಾಂತಾರ- 1' ಸಿನಿಮಾ ನೋಡುವ ಸಂಕಲ್ಪ ಮಾಡಿಕೊಳ್ಳೋಣ' ಎಂದು ಅದರಲ್ಲಿ ಬರೆಯಲಾಗಿತ್ತು. ತಪ್ಪಿನ ಅರಿವಾಗುತ್ತಿದ್ದಂತೆ ಅದಕ್ಕೆ ಕ್ಷಮೆ ಕೇಳಿ ಅದೇ ಪೇಜ್‌ನಲ್ಲಿ ಸ್ಪಷ್ಟನೆ ನೀಡಿದ್ದರು.
ಇನ್ನೂ ಈ ಬಗ್ಗೆ ನಟ, ನಿರ್ದೇಶಕ ರಿಷಬ್ ಶೆಟ್ಟಿ ಪ್ರತಿಕ್ರಿಯಿಸಿ "ಊಟೋಪಚಾರ ಹಾಗೂ ಅವರವರ ಅಭ್ಯಾಸಗಳನ್ನು ಯಾರು ಪ್ರಶ್ನೆ ಮಾಡಲು ಸಾಧ್ಯವಿಲ್ಲ. ಎಲ್ಲವೂ ಅವರವರ ಸ್ವಂತ ವಿವೇಚನೆಗೆ ಬಿಟ್ಟ ವಿಚಾರ. ಯಾರೋ ಫೇಕ್ ಪೋಸ್ಟ್ ಹಾಕಿರುವುದು ಅದು. ನಮ್ಮ ಗಮನಕ್ಕೂ ಬಂತು. ಆದರೆ ಅದನ್ನು ನಮ್ಮ ತಂಡಕ್ಕೂ ಯಾವುದೇ ಸಂಬಂಧ ಇಲ್ಲ" ಎಂದು ಹೇಳಿದ್ದಾರೆ.
'ಕಾಂತಾರ ಚಾಪ್ಟರ್ 1' ಇಡೀ ದೇಶವೇ ಎದುರು ನೋಡುತ್ತಿರುವ ಸಿನಿಮಾ. ಹೀಗಾಗಿ ಕಳೆದ ಮೂರು ತಿಂಗಳಿನಿಂದ ಇಡೀ ತಂಡ ಕೇವಲ ಎರಡು-ಮೂರು ಗಂಟೆ ಕೆಲಸ ಮಾಡಿದೆ. ನಾಲ್ಕೈದು ಬಾರಿ ಸತ್ತು ಹೋಗಿ ಬಿಡಬೇಕಿತ್ತು. ಆದರೆ ಬದುಕಿ ಬಂದಿದ್ದೇನೆ. ಅದಕ್ಕೆ ದೈವ ನನ್ನ ಹಿಂದೆ ನಿಂತಿದೆ ಅನ್ನೋದೇ ಸಾಕ್ಷಿ ಎಂದು ರಿಷಬ್ ಶೆಟ್ಟಿ ವೇದಿಕೆ ಮೇಲೆ ಹೇಳಿದ್ದಾರೆ.
ಕಾಂತಾರ ಸಿನಿಮಾ 5 ವರ್ಷದ ದೊಡ್ಡ ಜರ್ನಿ. ಈ ಸಿನಿಮಾ ಕಂಪ್ಲೀಟ್ ಮಾಡೋಕೆ ಆಗ್ತಿರಲಿಲ್ಲ, ಅಷ್ಟು ಅಡೆತಡೆಗಳು ಎದುರಿಸಿದ್ದೀನಿ. ನನ್ನ ಹೆಂಡ್ತಿ ಅದೆಷ್ಟು ಹರಕೆ ಹೊತ್ತಿದ್ದಾಳೋ.. ನಾನು ಶೂಟಿಂಗ್ ಹೋಗ್ತಿದ್ರೆ ದೇವರ ಮುಂದೆ ಪ್ರಾರ್ಥನೆ ಮಾಡ್ತಿದ್ಲು. ಇನ್ನೊಂದು ಸಲ ಹೇಗಿದ್ದೀರ ಅಂತ ಕೇಳಿದ್ರೆ ಅತ್ತೆ ಬಿಡ್ತೀನಿ, ಅಷ್ಟೊಂದು ಎಮೋಷನಲ್ ಜರ್ನಿ ಇದು ಎಂದು ಹೇಳಿದರು.
ಹೃತಿಕ್ ರೋಷನ್, ಶಿವಕಾರ್ತಿಕೇಯನ್, ಪೃಥ್ವಿರಾಜ್ ಸುಕುಮಾರನ್, ಪ್ರಭಾಸ್ ಅವರಿಂದ, ವಿಶ್ವವೇ ಎದುರು ನೋಡುತ್ತಿರುವ ಕಾಂತಾರ ಚಾಪ್ಟರ್-1 ಚಿತ್ರದ ಕನ್ನಡ, ಹಿಂದಿ, ತಮಿಳು, ಮಲಯಾಳಂ ಹಾಗೂ ತೆಲುಗು ಭಾಷೆಯ ಟ್ರೇಲರ್ ಬಿಡುಗಡೆ ಆಗಿದೆ. ಇಡೀ ಟ್ರೈಲರ್‌ನುದ್ದಕ್ಕೂ ದೃಶ್ಯ ವೈಭವ ಕಾಣಬಹುದು. ರಾಜ ಮತ್ತು ಕಾಡಿನ ಜನರ ನಡುವಿನ ಕಥೆ ಹಾಗೂ ಕಾಂತಾರ ನೆಲದ ಮಣ್ಣಿಗೆ ಕಥೆಯನ್ನು ಈ ಸಿನಿಮಾದಲ್ಲಿ ಹೇಳಲು ಹೊರಟಿರುವುದು ಪ್ರಮುಖ ಅಂಶ.