ಕನ್ನಡ ಚಿತ್ರರಂಗದ ನಟಿ ಹರ್ಷಿಕಾ ಪೂಣಚ್ಚ ಹಾಗೂ ನಟ ಭುವನ್ ಪೊನ್ನಣ್ಣ ದಂಪತಿ ತಮ್ಮ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ.
ಈ ಸಂತಸದ ಸುದ್ದಿಯನ್ನು ದಂಪತಿ ಸಾಮಾಜಿಕ ಜಾಲತಾಣಗಳ ಮೂಲಕ ಹಂಚಿಕೊಂಡಿದ್ದು, ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರ ಹರಿದುಬರುತ್ತಿದೆ.
ಪ್ಯಾರಿಸ್ ಐಫಿಲ್ ಟವರ್ ಎದುರು ನಿಂತು ಹರ್ಷಿಕಾ ಹಾಗೂ ಭುವನ್ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರ ಮೊದಲ ಮಗಳು ಕೂಡ ಇದ್ದಾಳೆ.
ಈ ಸೆಪ್ಟೆಂಬರ್‌ನಲ್ಲಿ ನಮ್ಮ ತಾರಾಗಣಕ್ಕೆ ಹೊಸ ಪುಟ್ಟ ತಾರೆ ಸೇರ್ಪಡೆಯಾಗಲಿದೆ ಎಂದು ಘೋಷಿಸಲು ನಮಗೆ ತುಂಬಾ ಸಂತೋಷವಾಗಿದೆ. ನಮ್ಮ ಮನಸ್ಸು ತುಂಬಿವೆ ಮತ್ತು ಸ್ಕ್ರಿಪ್ಟ್ ಪರಿಪೂರ್ಣವಾಗಿ ಕಾಣುತ್ತದೆ. ಧನ್ಯವಾದಗಳು’ ಎಂದು ಭುವನ್ ಬರೆದುಕೊಂಡಿದ್ದಾರೆ.
ಮೊದಲ ಮಗುವಿನ ಬಳಿಕ ಇದೀಗ ಎರಡನೇ ಮಗುವನ್ನು ಸ್ವಾಗತಿಸಲು ಸಿದ್ಧರಾಗಿರುವ ಈ ಜೋಡಿ, ತಮ್ಮ ಕುಟುಂಬದಲ್ಲಿ ಹೊಸ ಸಂತಸದ ಕ್ಷಣಗಳನ್ನು ಎದುರು ನೋಡುತ್ತಿದ್ದಾರೆ.
ಹರ್ಷಿಕಾ ಮತ್ತು ಭುವನ್ ಅವರು ಹಲವು ವರ್ಷಗಳ ಸ್ನೇಹದ ಬಳಿಕ ವಿವಾಹವಾಗಿದ್ದು, ದಾಂಪತ್ಯ ಜೀವನವನ್ನು ಸಂತೋಷದಿಂದ ಸಾಗಿಸುತ್ತಿದ್ದಾರೆ. ಇವರಿಗೆ ಈಗಾಗಲೇ ಒಂದು ಮಗು ಇದ್ದು, ಇದೀಗ ಕುಟುಂಬಕ್ಕೆ ಮತ್ತೊಂದು ಹೊಸ ಸದಸ್ಯ ಸೇರುವ ನಿರೀಕ್ಷೆಯಲ್ಲಿದ್ದಾರೆ.