ಜನ ನಾಯಗನ್ ಚಿತ್ರದ ಪೋಸ್ಟರ್ 
ಸಿನಿಮಾ ಸುದ್ದಿ

ಬಿಡುಗಡೆಗೂ ಮುನ್ನವೇ ವಿಜಯ್ ನಟನೆಯ 'ಜನ ನಾಯಗನ್' ಆನ್‌ಲೈನ್‌ನಲ್ಲಿ ಸೋರಿಕೆ: ಅಭಿಮಾನಿಗಳಿಂದ ತೀವ್ರ ಆಕ್ರೋಶ!

ವಿಜಯ್ ಅವರು ತಮ್ಮ ರಾಜಕೀಯ ಎದುರಾಳಿಗಳು ಉದ್ದೇಶಪೂರ್ವಕವಾಗಿಯೇ ಚಿತ್ರದ ಬಿಡುಗಡೆ ವಿಳಂಬಕ್ಕೆ ಕಾರಣ ಎಂದು ಪರೋಕ್ಷವಾಗಿ ಟೀಕಿಸಿದ ಸ್ವಲ್ಪ ಸಮಯದ ನಂತರವೇ ಚಿತ್ರವು ಸಂಪೂರ್ಣವಾಗಿ ಸೋರಿಕೆಯಾಗಿದೆ ಎನ್ನಲಾಗಿದೆ.

ತಮಿಳು ನಟ ವಿಜಯ್ ನಟನೆಯ ಕೊನೆಯ ಚಿತ್ರ 'ಜನ ನಾಯಗನ್'ನ ಕ್ಲಿಪ್ ಸೋರಿಕೆಯಾಗಿದೆ ಎಂದು ವರದಿಯಾದ ಕೂಡಲೇ, ಇಡೀ ಚಿತ್ರ ಸೋರಿಕೆಯಾಗಿದೆ ಎಂಬುದು ಬೆಳಕಿಗೆ ಬಂದಿದೆ. ಸೋರಿಕೆಯ ಮೂಲ ಇನ್ನೂ ತಿಳಿದುಬಂದಿಲ್ಲ. ಆದಾಗ್ಯೂ, ಈ ಬೆಳವಣಿಗೆಯು ಅಭಿಮಾನಿಗಳು ಮತ್ತು ಸಾಮಾನ್ಯ ಪ್ರೇಕ್ಷಕರನ್ನು ಕೆರಳಿಸಿದೆ.

ಚಿತ್ರ ನಿರ್ಮಾಪಕ ವೆಂಕಟ್ ಕೆ ನಾರಾಯಣ ಅವರ ಕೆವಿಎನ್ ಪ್ರೊಡಕ್ಷನ್ಸ್, ಚಿತ್ರವನ್ನು ಸೋರಿಕೆ ಮಾಡಿದ ಮತ್ತು ಹಂಚಿಕೊಂಡವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಇದೀಗ ಸೋರಿಕೆಯಾದ ಚಿತ್ರವನ್ನು ಫಾರ್ವರ್ಡ್ ಮಾಡುವವರು ಕಠಿಣ ಕಾನೂನು ಕ್ರಮ ಎದುರಿಸಬೇಕಾಗುತ್ತದೆ.

ವಿಜಯ್ ಅವರು ತಮ್ಮ ರಾಜಕೀಯ ಎದುರಾಳಿಗಳು ಉದ್ದೇಶಪೂರ್ವಕವಾಗಿಯೇ ಚಿತ್ರದ ಬಿಡುಗಡೆ ವಿಳಂಬಕ್ಕೆ ಕಾರಣ ಎಂದು ಪರೋಕ್ಷವಾಗಿ ಟೀಕಿಸಿದ ಸ್ವಲ್ಪ ಸಮಯದ ನಂತರವೇ ಚಿತ್ರವು ಸಂಪೂರ್ಣವಾಗಿ ಸೋರಿಕೆಯಾಗಿದೆ ಎನ್ನಲಾಗಿದೆ. ಜನ ನಾಯಗನ್ ಚಿತ್ರವನ್ನು ಮೂಲತಃ ಈ ವರ್ಷದ ಜನವರಿಯಲ್ಲಿ ಬಿಡುಗಡೆ ಮಾಡಲು ನಿರ್ಧರಿಸಲಾಗಿತ್ತು. ಆದರೆ, ಸೆನ್ಸಾರ್‌ ಮಂಡಳಿ ಅನುಮತಿ ಇಲ್ಲದ ಕಾರಣ ಚಿತ್ರ ಬಿಡುಗಡೆ ವಿಳಂಬವಾಗಿದೆ.

ಸೆನ್ಸಾರ್ ಮಂಡಳಿಯ ಪರಿಷ್ಕರಣಾ ಸಮಿತಿಯ ಸದಸ್ಯರೊಬ್ಬರು ಚಿತ್ರದ ಕೆಲವು ದೃಶ್ಯಗಳಿಗೆ ಆಕ್ಷೇಪ ವ್ಯಕ್ತಪಡಿಸಿದಾಗ, ನಿರ್ಮಾಪಕರು ಮಂಡಳಿಯ ವಿರುದ್ಧ ಮೊಕದ್ದಮೆ ಹೂಡಿದರು.

ಬಳಿಕ ನಿರ್ಮಾಪಕರು ಮಂಡಳಿ ವಿರುದ್ಧದ ಪ್ರಕರಣವನ್ನು ಹಿಂತೆಗೆದುಕೊಂಡರು ಮತ್ತು ಅಗತ್ಯ ಬದಲಾವಣೆಗಳನ್ನು ಮಾಡಿದ ನಂತರ ಚಿತ್ರವನ್ನು ಮತ್ತೆ ಸಮಿತಿಗೆ ಸಲ್ಲಿಸಿದರು. ಚಿತ್ರವು ಇನ್ನೂ ಮರುಪರಿಶೀಲನಾ ಪ್ರಕ್ರಿಯೆಯಲ್ಲಿದ್ದು, ಇತ್ತೀಚಿನ ವರದಿಗಳ ಪ್ರಕಾರ ತಮಿಳುನಾಡು ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಚಿತ್ರ ಬಿಡುಗಡೆಯಾಗುವುದಿಲ್ಲ ಎನ್ನಲಾಗಿದೆ.

ಜನ ನಾಯಗನ್ ಚಿತ್ರವನ್ನು ನಿರ್ದೇಶಕ ಅನಿಲ್ ರವಿಪುಡಿ ಅವರ 2023ರ ರಾಷ್ಟ್ರ ಪ್ರಶಸ್ತಿ ವಿಜೇತ ಚಿತ್ರ ಭಗವಂತ ಕೇಸರಿ ಚಿತ್ರದ ರಿಮೇಕ್ ಎಂದು ಪರಿಗಣಿಸಲಾಗಿದೆ. ಚಿತ್ರದಲ್ಲಿ ನಂದಮೂರಿ ಬಾಲಕೃಷ್ಣ ಮತ್ತು ಶ್ರೀಲೀಲಾ ನಟಿಸಿದ್ದಾರೆ. ವಿಜಯ್ ಅಭಿನಯದ ಚಿತ್ರದ ಟ್ರೇಲರ್ ಬಿಡುಗಡೆಗೂ ಮೊದಲೇ ಎರಡೂ ಚಿತ್ರಗಳ ನಿರ್ಮಾಪಕರು ಇದು ರಿಮೇಕ್ ಎಂಬ ಮಾತುಗಳನ್ನು ನಿರಾಕರಿಸಿದರು.

ಈ ಚಿತ್ರದಲ್ಲಿ ಮಮಿತಾ ಬೈಜು, ಪೂಜಾ ಹೆಗ್ಡೆ, ಬಾಬಿ ಡಿಯೋಲ್, ಗೌತಮ್ ವಾಸುದೇವ್ ಮೆನನ್, ಪ್ರಕಾಶ್ ರಾಜ್, ಪ್ರಿಯಾಮಣಿ ಮತ್ತು ನರೇನ್ ಮುಂತಾದವರು ನಟಿಸಿದ್ದಾರೆ. ಚಿತ್ರದ ಸೋರಿಕೆಯ ಬಗ್ಗೆ ನಿರ್ಮಾಪಕರು ಇನ್ನೂ ಯಾವುದೇ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Ebola ಭೀತಿ: ಏರ್ ಲೈನ್ ಗಳಿಗೆ ಡಿಜಿಸಿಎ SOP ಬಿಡುಗಡೆ

ಭಾರತ ಇರಾನ್ ನ IRGC ಯನ್ನು ಉಗ್ರ ಸಂಘಟನೆಯೆಂದು ಘೋಷಿಸಲಿ: ಇಸ್ರೇಲ್ ಒತ್ತಾಯ

ಟ್ರಂಪ್ ಭಾರತವನ್ನ ನರಕದ ಕೂಪ ಅಂದಿದ್ರಲ್ಲಾ ಆ ಬಗ್ಗೆ ಏನ್ ಹೇಳ್ತಿರಾ?; ಪತ್ರಕರ್ತನ ಪ್ರಶ್ನೆಗೆ ರುಬಿಯೊ ಗಲಿಬಿಲಿ!

CM ಬದಲಾವಣೆ ಚರ್ಚೆ ಮಧ್ಯೆ ಸಿದ್ದರಾಮಯ್ಯ ಸಂಪುಟದಲ್ಲಿ ಮಹತ್ವದ ಬದಲಾವಣೆ

ಗುಲ್ಮಾರ್ಗ್: ಕೈಕೊಟ್ಟ ವಿಶ್ವದ 2ನೇ ಅತಿ ಎತ್ತರದ ಕೇಬಲ್ ಕಾರ್; ಆಕಾಶದಲ್ಲೇ ಸಿಲುಕಿದ 300 ಪ್ರವಾಸಿಗರು! Video ನೋಡಿ

SCROLL FOR NEXT