ಅಂಕಿತಾ ಜಯರಾಮ್ 
ಸಿನಿಮಾ ಸುದ್ದಿ

'ಕರ್ಣ' ಧಾರಾವಾಹಿ ಖ್ಯಾತಿಯ ನಟಿ ಸಾಧನೆ: ದ್ವಿತೀಯ ಪಿಯುಸಿಯಲ್ಲಿ 579 ಅಂಕ ಪಡೆದ ಅಂಕಿತಾ ಜಯರಾಮ್!

ಭಗವಂತ, ಗುರುರಾಯರ ಆಶೀರ್ವಾದ ಹಾಗೂ ಅಭಿಮಾನಿಗಳ ಹಾರೈಕೆಯೇ ಈ ಯಶಸ್ಸಿಗೆ ಕಾರಣ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ಜಿ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ 'ಕರ್ಣ' ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅವರು 2026ರ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡಾ 97ರಷ್ಟು (97%) ಅಂಕಗಳನ್ನು ಗಳಿಸುವ ಮೂಲಕ ಡಿಸ್ಟಿಂಕ್ಷನ್‌ನಲ್ಲಿ ತೇರ್ಗಡೆಯಾಗಿದ್ದಾರೆ.

600ಕ್ಕೆ 579 ಅಂಕ ಪಡೆದ ಅಂಕಿತಾ ಜಯರಾಮ್ ಇದೀಗ 'ಕರ್ಣ' ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅವರ ಫಲಿತಾಂಶ ಇದೀಗ ಎಲ್ಲಡೆ ವೈರಲ್‌ ಆಗುತ್ತಿದೆ. ಸ್ವತಃ ಅಂಕಿತಾ ಜಯರಾಮ್ ಅವರೇ ಇನ್ಸ್‌ಸ್ಟಾಗ್ರಾಂ ಖಾತೆಯಲ್ಲಿ ತಮ್ಮ ದ್ವಿತೀಯ ಪಿಯುಸಿ ಫಲಿತಾಂಶ ವಿವರವನ್ನು ಹಂಚಿಕೊಂಡಿದ್ದಾರೆ.

ಈ ವಿಚಾರ ತಿಳಿಯುತ್ತಿದ್ದಂತೆ ಅವರಿಗೆ ಅಭಿಮಾನಿಗಳು ಹಾಗೂ ಸಂಬಂಧಿಕರಿಂದ ಸಾಮಾಜಿಕ ಜಾಲತಾಣದಲ್ಲಿ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ.

ಈ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಂಚಿಕೊಂಡಿರುವ ಅವರು, ಭಗವಂತ, ಗುರುರಾಯರ ಆಶೀರ್ವಾದ ಹಾಗೂ ಅಭಿಮಾನಿಗಳ ಹಾರೈಕೆಯೇ ಈ ಯಶಸ್ಸಿಗೆ ಕಾರಣ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!

'ನ್ಯಾಯಾಂಗ ತನಿಖೆಗೆ ಒಪ್ಪಿಸಿ, ₹1 ಕೋಟಿ ಪರಿಹಾರ ನೀಡಿ': ಹನೂರು ಶೂಟೌಟ್ ಪ್ರಕರಣದ ಮಹಿಮಾ ದಾಸ್ ಸೇರಿ ಸಂತ್ರಸ್ತರ ಆಗ್ರಹ