ಧ್ರುವ ಸರ್ಜಾ ಅಭಿನಯದ KD ಚಿತ್ರದ ಟ್ರೈಲರ್ 
ಸಿನಿಮಾ ಸುದ್ದಿ

ರೆಟ್ರೋ ಲುಕ್, ಮಂಡ್ಯ ಸ್ಲ್ಯಾಂಗ್.. ಕೈಯಲ್ಲಿ ಲಾಂಗು, ಮೈ ತುಂಬ ನೆತ್ತರು..: ಕುತೂಹಲ ಕೆರಳಿಸಿದ KD ಚಿತ್ರದ ಟ್ರೈಲರ್!

ಬೆಂಗಳೂರಿನಲ್ಲಿ ಅದ್ದೂರಿ ಕಾರ್ಯಕ್ರಮದ ಮೂಲಕ ಟ್ರೇಲರ್ ರಿಲೀಸ್ ಮಾಡಲಾಗಿದ್ದು, ಹಲವು ಅಡೆತಡೆಗಳ ಹೊರತಾಗಿಯೂ ಚಿತ್ರ ಬಿಡುಗಡೆಗೆ ಸಿದ್ಧವಾಗಿ ನಿಂತಿದೆ.

ಬೆಂಗಳೂರು: ಜೋಗಿ ಪ್ರೇಮ್ ನಿರ್ದೇಶನದ, ಧ್ರುವ ಸರ್ಜಾ ನಟನೆಯ ‘ಕೆಡಿ’ ದಿ ಡೆವಿಲ್ ಚಿತ್ರ ಕೊನೆಗೂ ಬಿಡುಗಡೆಗೆ ಸಿದ್ಧವಾಗಿದ್ದು, ಚಿತ್ರ ತಂಡ ಇಂದು ಅಧಿಕೃತ ಟ್ರೈಲರ್ ಬಿಡುಗಡೆ ಮಾಡಿದೆ.

ಬೆಂಗಳೂರಿನಲ್ಲಿ ಅದ್ದೂರಿ ಕಾರ್ಯಕ್ರಮದ ಮೂಲಕ ಟ್ರೇಲರ್ ರಿಲೀಸ್ ಮಾಡಲಾಗಿದ್ದು, ಹಲವು ಅಡೆತಡೆಗಳ ಹೊರತಾಗಿಯೂ ಚಿತ್ರ ಬಿಡುಗಡೆಗೆ ಸಿದ್ಧವಾಗಿ ನಿಂತಿದೆ.

ಇನ್ನು ಈ ಸಿನಿಮಾದಲ್ಲಿ ದೊಡ್ಡ ತಾರಾಗಣವೇ ಇದ್ದು, ಧ್ರುವ ಸರ್ಜಾ (Dhruva Sarja) ಜೊತೆ ರೀಷ್ಮಾ ನಾಣಯ್ಯ, ಶಿಲ್ಪಾ ಶೆಟ್ಟಿ, ಸಂಜಯ್ ದತ್, ರಮೇಶ್ ಅರವಿಂದ್, ರವಿಚಂದ್ರನ್, ಪಿ. ರವಿಶಂಕರ್ ಸೇರಿದಂತೆ ಹಲವು ಘಟಾನುಘಟಿ ಕಲಾವಿದರು ಅಭಿನಯಿಸಿದ್ದಾರೆ.

ಈ ಬಹು ನಿರೀಕ್ಷಿತ ಚಿತ್ರವನ್ನು ‘ಕೆವಿಎನ್ ಪ್ರೊಡಕ್ಷನ್ಸ್’ ನಿರ್ಮಾಣ ಮಾಡಿದ್ದು, ಚಿತ್ರ ಅದ್ದೂರಿಯಾಗಿ ಮೂಡಿಬಂದಿದೆ. ಕನ್ನಡ ಮಾತ್ರವಲ್ಲದೇ ಹಿಂದಿ, ತಮಿಳು, ತೆಲುಗು ಮುಂತಾದ ಭಾಷೆಗಳಲ್ಲಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಏಪ್ರಿಲ್ 30ರಂದು ಈ ಸಿನಿಮಾ ಏಕಕಾಲದಲ್ಲಿ ತೆರೆಕಾಣುತ್ತಿದೆ.

ವಿವಾದ

ಬಿಡುಗಡೆಗೂ ಮುನ್ನವೇ ಹಲವು ಕಾರಣಗಳಿಂದ ‘ಕೆಡಿ’ ಸಿನಿಮಾ ಸಖತ್ ಸುದ್ದಿ ಆಗಿತ್ತು. ಚಿತ್ರದ ‘ಸರ್ಸೆ ನಿನ್ನ ಸೆರಗ’ ಹಾಡಿನಿಂದಾಗಿ ದೇಶಾದ್ಯಂತ ಈ ಸಿನಿಮಾ ಬಗ್ಗೆ ಚರ್ಚೆ ಆಗಿತ್ತು. ಇದೀಗ ಇದು ಮುಗಿದ ಅಧ್ಯಾಯವಾಗಿದ್ದು, ಇತ್ತೀಚೆಗೆ ಈ ಚಿತ್ರದ ಸೆನ್ಸಾರ್ ಪ್ರಕ್ರಿಯೆ ಬಗ್ಗೆಯೂ ಚಿತ್ರತಂಡದಿಂದ ಅಸಮಾಧಾನ ವ್ಯಕ್ತವಾಗಿತ್ತು. ಈ ಎಲ್ಲ ಕಾರಣಗಳಿಂದ ಸಿನಿಮಾ ಬಗ್ಗೆ ಸಹಜವಾಗಿಯೇ ಕುತೂಹಲ ಸೃಷ್ಟಿ ಆಗಿದೆ. ‘ಆನಂದ್ ಆಡಿಯೋ’ ಮೂಲಕ ‘ಕೆಡಿ’ ಟ್ರೇಲರ್ ಅನಾವರಣ ಮಾಡಲಾಗಿದೆ.

ಮಂಡ್ಯ ಸ್ಲ್ಯಾಂಗ್, ರೆಟ್ರೋ ಅಂಡರ್ ವರ್ಲ್ಡ್ ಕಥೆ

ಈ ಸಿನಿಮಾದಲ್ಲಿ ಭರ್ಜರಿ ಆ್ಯಕ್ಷನ್ ಇರಲಿದೆ ಎಂಬುದು ಟ್ರೇಲರ್ ಮೂಲಕ ಗೊತ್ತಾಗಿದೆ. ರೆಟ್ರೋ ಕಾಲದ ಕಥೆಯನ್ನು ಈ ಚಿತ್ರದಲ್ಲಿ ಹೇಳಲಾಗುತ್ತಿದೆ. ಆ ಕಾಲಘಟ್ಟಕ್ಕೆ ತಕ್ಕಂತೆ ಸೆಟ್ ನಿರ್ಮಾಣ ಮಾಡಿ ಬಹುತೇಕ ಚಿತ್ರೀಕರಣ ಮಾಡಲಾಗಿದೆ. ಅದ್ದೂರಿಯಾಗಿ ಸಿನಿಮಾ ಮೂಡಿಬಂದಿದೆ.

ಅಂದಹಾಗೆ ವೆಂಕಟ್ ಕೆ. ನಾರಾಯಣ್ ಅವರು ನಿರ್ಮಾಣ ಮಾಡಿರುವ ‘ಕೆಡಿ’ ಸಿನಿಮಾಗೆ ಅರ್ಜುನ್ ಜನ್ಯ ಅವರು ಸಂಗೀತ ನೀಡಿದ್ದಾರೆ. ಈಗಾಗಲೇ ಹಾಡುಗಳು ಸೂಪರ್ ಹಿಟ್ ಆಗಿವೆ. ವಿಲಿಯಂ ಡೇವಿಡ್ ಅವರು ಛಾಯಾಗ್ರಹಣ ಮಾಡಿದ್ದಾರೆ. ಮೋಹನ್ ಬಿ. ಕೆರೆ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.

ಇದು ಫ್ಯಾಮಿಲಿ ಎಂಟರ್​ಟೇನರ್ ಸಿನಿಮಾ

ಇನ್ನು ಟ್ರೇಲರ್ ಬಿಡುಗಡೆ ವೇಳೆ ಧ್ರುವ ಸರ್ಜಾ ಮಾತನಾಡಿದ್ದು, ‘ನೀವೆಲ್ಲರೂ ನಮಗೆ 2 ಗಂಟೆ 20 ನಿಮಿಷ ಸಮಯ ಕೊಡಿ. ಇದು ಫ್ಯಾಮಿಲಿ ಎಂಟರ್​ಟೇನರ್ ಸಿನಿಮಾ. ಆದರೆ ಸ್ವಲ್ಪ ಕ್ರೌರ್ಯ ಇದೆ. ಏಪ್ರಿಲ್ 30ರಂದು ನಿಮ್ಮನ್ನು ನಂಬಿಕೊಂಡೇ ನಿಮ್ಮ ಮುಂದೆ ಬರುತ್ತಿದ್ದೇವೆ. ಈ ಚಿತ್ರದ ಹೀರೋ ನಾನಲ್ಲ, ನಮ್ಮ ನಿರ್ದೇಶಕರು. ಅವರು ಈ ಚಿತ್ರಕ್ಕೆ ಎಷ್ಟು ಕಷ್ಟಪಟ್ಟಿದ್ದಾರೆ ಎಂಬುದು ಸಿನಿಮಾ ನೋಡಿದರೆ ನಿಮಗೆ ತಿಳಿಯುತ್ತದೆ’ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoorನಲ್ಲಿ ಧ್ವಂಸವಾಗಿದ್ದ ಜೈಶ್ ನೆಲೆ ಮರುನಿರ್ಮಾಣ! ಪಾಕ್‌ ಸರ್ಕಾರದಿಂದ 25 ಕೋಟಿ ನೆರವು!

Onion Price: ದಿಢೀರ್ ಈರುಳ್ಳಿ ಬೆಲೆ ಏರಿಕೆ; ಸೆಪ್ಟೆಂಬರ್-ಅಕ್ಟೋಬರ್‌ನಲ್ಲಿ ಮತ್ತಷ್ಟು ದುಬಾರಿ ಸಾಧ್ಯತೆ, ದರ ಏರಿಕೆಗೆ ಕಾರಣವೇನು?

ಮಹಿಳಾ ಮೀಸಲಾತಿ ಮಸೂದೆ ಬೆಂಬಲಿಸಿ, ಕಾಂಗ್ರೆಸ್ ಕಚೇರಿಯಲ್ಲಿ ವಂದೇ ಪೂರ್ತಿಯಾಗಿ ಹಾಡಿ ತೋರಿಸಿ: ರಾಹುಲ್ ಗಾಂಧಿಗೆ ಸ್ಮೃತಿ ಇರಾನಿ ಸವಾಲು

ಮದ್ಯ ಸಾಗಣೆ ಹಗರಣ: ಆಂಧ್ರಪ್ರದೇಶದ ಮಾಜಿ ಸಚಿವರ ಬಂಧಿಸಿದ ED

'3 ರಾಷ್ಟ್ರಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದೇನೆ': SIR ಪಟ್ಟಿಯಲ್ಲಿ ಹೆಸರು ನಾಪತ್ತೆ ಬಗ್ಗೆ ಮಾಜಿ ರಾಯಭಾರಿ ಅಸಮಾಧಾನ!