ಟೀಸರ್ ಬಿಡುಗಡೆ ಸಮಾರಂಭದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಶಾಸಕಿ ಮೋಟಮ್ಮ ಮತ್ತಿತರರು ಉಪಸ್ಥಿತಿ 
ಸಿನಿಮಾ ಸುದ್ದಿ

'ಅಣ್ಣ from Mexico' ಚಿತ್ರದ ಟೀಸರ್ ಬಿಡುಗಡೆ: ಕನ್ನಡ ಚಿತ್ರರಂಗ ಶ್ರೀಮಂತ ಪರಂಪರೆ ಹೊಂದಿದೆ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಕನ್ನಡ ಚಲನ ಚಿತ್ರರಂಗ ಶ್ರೀಮಂತ ಪರಂಪರೆಯನ್ನು ಹೊಂದಿದೆ. ನಾನು ಕನ್ನಡ ಸಿನಿಮಾಗಳನ್ನು ಪ್ರೀತಿಸುವೆ. ಮುಂದಿನ ‌ದಿನಗಳಲ್ಲಿ ಇನ್ನೂ ದೊಡ್ಡ ದೊಡ್ಡ ಸಿನಿಮಾಗಳನ್ನು ನಿರ್ಮಿಸುವ ಆಸೆ ಇದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

ಬೆಂಗಳೂರು: ಐರಾ ಫಿಲ್ಮ್ ವತಿಯಿಂದ ನಿರ್ಮಿಸಲಾಗಿರುವ ಚೊಚ್ಚಲ ಚಿತ್ರ 'ಅಣ್ಣ from Mexico' ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಸಮಾರಂಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್, ಟೀಸರ್ ಬಿಡುಗಡೆಗೊಳಿಸಿ ಚಿತ್ರಕ್ಕೆ ಶುಭ ಹಾರೈಸಿದರು.

ಬಳಿಕ ಮಾತನಾಡಿದ ಲಕ್ಷ್ಮೀ ಹೆಬ್ಬಾಳಕರ್, ಕನ್ನಡ ಚಲನ ಚಿತ್ರರಂಗ ಶ್ರೀಮಂತ ಪರಂಪರೆಯನ್ನು ಹೊಂದಿದೆ. ನಾನು ಕನ್ನಡ ಸಿನಿಮಾಗಳನ್ನು ಪ್ರೀತಿಸುವೆ. ಮುಂದಿನ ‌ದಿನಗಳಲ್ಲಿ ಇನ್ನೂ ದೊಡ್ಡ ದೊಡ್ಡ ಸಿನಿಮಾಗಳನ್ನು ನಿರ್ಮಿಸುವ ಆಸೆ ಇದೆ ಎಂದು ಹೇಳಿದರು.

ಸಿನಿಮಾ ಹೊಸತನದಿಂದ‌ ಕೂಡಿದ್ದು, ಕನ್ನಡ ಚಲನಚಿತ್ರ ರಂಗಕ್ಕೆ ಏನಾದರೂ ಕೊಡುಗೆ ನೀಡಬೇಕು ಎಂಬ ಉದ್ದೇಶದಿಂದ ಸಿನಿಮಾ ನಿರ್ಮಾಣ ಮಾಡಲಾಗಿದೆ. ಕನ್ನಡ ಚಲನಚಿತ್ರಗಳನ್ನು ನೋಡಿಕೊಂಡು ಬೆಳೆದಿದ್ದೇವೆ. ಕನ್ನಡ ಚಿತ್ರರಂಗ ಸಾಕಷ್ಟು ಶ್ರೀಮಂತವಾಗಿದೆ. ಮುಂದಿನ ದಿನಗಳಲ್ಲಿ ಸದಭಿರುಚಿ, ಸಾಮಾಜಿಕ, ‌ಕೌಟುಂಬಿಕ ಹಿನ್ನೆಲೆ ಹೊಂದಿರುವ ಚಿತ್ರಗಳನ್ನು ‌ನಿರ್ಮಿಸುವ ಆಸೆ ಇದೆ ಎಂದರು.

ಕನ್ನಡ ಸಿನಿಮಾ ಶ್ರೀಮಂತ ಪರಂಪರೆ‌ ಹೊಂದಿದೆ, ಸೆನ್ಸಾರ್ ಸಮಸ್ಯೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಮಾತಾಡುವೆ, ಕನ್ನಡ ಚಲನ ಚಿತ್ರರಂಗ ಇನ್ನು ಚೆನ್ನಾಗಿ ಬೆಳೆಯಬೇಕು ಎಂಬುದೇ ನನ್ನ ಆಸೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ‌

ಈ ವೇಳೆ ಸಹೋದರ ಹಾಗೂ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ್ ಹಟ್ಟಿಹೊಳಿ, ಮೂಡಿಗೆರೆ ಕ್ಷೇತ್ರದ ಶಾಸಕಿ ನಯನಾ ಮೋಟಮ್ಮ, ಚಿತ್ರದ ನಾಯಕ ನಟ ಡಾಲಿ ಧನಂಜಯ್, ನಟಿ ರೀಷ್ಮಾ ನಾಣಯ್ಯ, ಚಿತ್ರದ ನಿರ್ದೇಶಕರಾದ ಶಂಕರ್‌ ಗುರು, ಸಹ ನಿರ್ಮಾಪಕರಾದ ಸತ್ಯ ರಾಯಲ್, Z studiosನ ದಿವ್ಯಾ, ಆನಂದ್ ಆಡಿಯೋದ ಶ್ಯಾಮ್, ಸಂಗೀತ ನಿರ್ದೇಶಕ ವಾಸುಕಿ ವೈಭವ್, ನಟ ನಾಗಭೂಷಣ್ ಸೇರಿದಂತೆ ಚಿತ್ರತಂಡದ ಸದಸ್ಯರು ಉಪಸ್ಥಿತರಿದ್ದರು. ‌

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಅಸಮಾಧಾನಿತ ಶಾಸಕರ ಸಮಸ್ಯೆ ಆಲಿಸಿದ್ದೇವೆ, ನಾವೆಲ್ಲಾ ಒಂದು ಕುಟುಂಬ- ಸುರ್ಜೆವಾಲ; ಸಚಿವ ಸ್ಥಾನ ಹೊರತಾಗಿ ಬೇರೆ ಏನು ಕೊಟ್ಟರೂ ಒಪ್ಪಲ್ಲ- ಎಂ ಕೃಷ್ಣಪ್ಪ

Sheikh Hasina: ವಾಪಸ್ ಬಾಂಗ್ಲಾದೇಶಕ್ಕೆ ಹೋಗಲು ನಿರ್ಧರಿಸಿದ್ದೇನೆ; ನನ್ನನ್ನು ಕೊಲ್ಲಲಿ, ಜೈಲಿಗೆ ಹಾಕಲಿ - ಶೇಖ್ ಹಸೀನಾ

ಸಚಿವ ಸ್ಥಾನ ಕೋಟಿ ಕೋಟಿಗೆ ಹರಾಜು: BJPಯಿಂದ ಆಡಿಯೋ ಬಿಡುಗಡೆ; ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ

E20 ಪೆಟ್ರೋಲ್ ನಲ್ಲಿ ಹೆಚ್ಚು ಕ್ಲೋರೈಡ್ ಮಟ್ಟ ತೋರಿಸಿದ್ದ SIAM; ಸಚಿವಾಲಯಕ್ಕೆ ಕಳುಹಿಸಿದ್ದ ಪತ್ರ ವಾಪಸ್

"ಜನ ನಾಯಗನ್ ಬಜೆಟ್': ಮಹಿಳೆಯರು, ಯುವಜನತೆಗೆ ದಳಪತಿ ವಿಜಯ್ ಬಂಪರ್ ಗಿಫ್ಟ್; ಶಾಲಾ ಶಿಕ್ಷಣಕ್ಕೆ ಅತಿ ಹೆಚ್ಚು ಅನುದಾನ