‘ಸರ್ಸೆ ನಿನ್ನ ಸೆರಗಾ ಸರ್ಸೆ ಹಾಡಿನಲ್ಲಿ ಸಂಜಯ್ ದತ್ ಮತ್ತು ನೋರಾ ಫತೇಹಿ  
ಸಿನಿಮಾ ಸುದ್ದಿ

KD Movie 'ಸರ್ಸೆ ನಿನ್ನ ಸೆರಗ ಸರ್ಸೆ'​ ವಿವಾದ: ಕ್ಷಮೆಯಾಚಿಸಿದ ಸಂಜಯ್ ದತ್; 50 ಬಾಲಕಿಯರ ಶಿಕ್ಷಣಕ್ಕೆ ನೆರವು ಘೋಷಣೆ; Video

ಇದೀಗ "ಸರ್ಕೆ ಚುನರ್ ತೇರಿ ಸರ್ಕೆ" ಹಾಡಿನ ವಿವಾದಕ್ಕೆ ಸಂಬಂಧಿಸಿದಂತೆ ನಟ ಸಂಜಯ್ ದತ್ ಸೋಮವಾರ ರಾಷ್ಟ್ರೀಯ ಮಹಿಳಾ ಆಯೋಗದ (NCW) ಮುಂದೆ ಹಾಜರಾಗಿ ಲಿಖಿತವಾಗಿ ಕ್ಷಮೆಯಾಚಿಸಿದ್ದಾರೆ.

ನವದೆಹಲಿ: ಪ್ರೇಮ್​ ನಿರ್ದೇಶನದ ಬಹುನಿರೀಕ್ಷಿತ 'ಕೆಡಿ' ಸಿನಿಮಾದ ಹಾಡು 'ಸರ್ಸೆ ನಿನ್ನ ಸೆರಗ ಸರ್ಸೆ'ಯ ಸಾಹಿತ್ಯ ಮತ್ತು ದೃಶ್ಯಗಳ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾದ ನಂತರ, ಕೇಂದ್ರ ಸರ್ಕಾರ ಹಿಂದಿ ಆವೃತ್ತಿ 'ಸರ್ಕೆ ಚುನರ್ ತೇರಿ ಸರ್ಕೆ'​ಯನ್ನು ಬ್ಯಾನ್​ ಮಾಡಿದೆ.

ಇದೀಗ "ಸರ್ಕೆ ಚುನರ್ ತೇರಿ ಸರ್ಕೆ" ಹಾಡಿನ ವಿವಾದಕ್ಕೆ ಸಂಬಂಧಿಸಿದಂತೆ ನಟ ಸಂಜಯ್ ದತ್ ಸೋಮವಾರ ರಾಷ್ಟ್ರೀಯ ಮಹಿಳಾ ಆಯೋಗದ (NCW) ಮುಂದೆ ಹಾಜರಾಗಿ ಲಿಖಿತವಾಗಿ ಕ್ಷಮೆಯಾಚಿಸಿದ್ದು, ಇದರಿಂದ ಸಮಾಜಕ್ಕೆ "ಉದ್ದೇಶಪೂರ್ವಕವಲ್ಲದ" ಹಾನಿ ಉಂಟಾಗಿದ್ದರೆ ವಿಷಾದ ವ್ಯಕ್ತಪಡಿಸುವುದಾಗಿ ಹೇಳಿದ್ದಾರೆ.

NCW ಅಧ್ಯಕ್ಷೆ ವಿಜಯ ರಹತ್ಕರ್ ನೇತೃತ್ವದಲ್ಲಿ ನಡೆದ ವಿಚಾರಣೆಯ ಸಮಯದಲ್ಲಿ, ಹಾಡಿನಲ್ಲಿ ಮಹಿಳೆಯರ ಬಗ್ಗೆ ಅಸಭ್ಯತೆ ಮತ್ತು ಅಶ್ಲೀಲ ಪ್ರಾತಿನಿಧ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದೆ.

ಸರಿಪಡಿಸುವ ಕ್ರಮವಾಗಿ, ಸಾಮಾಜಿಕ ಕಲ್ಯಾಣ ಮತ್ತು ಮಹಿಳಾ ಸಬಲೀಕರಣದ ಪ್ರಯತ್ನಗಳ ಭಾಗವಾಗಿ 50 ಬುಡಕಟ್ಟು ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಸ್ಪಾನ್ಸರ್ ಮಾಡಲು ಸಂಜಯ್ ದತ್ ಬದ್ಧರಾಗಿದ್ದಾರೆ ಎಂದು NCW ಪ್ರಕಟಣೆಯಲ್ಲಿ ತಿಳಿಸಿದೆ.

ಅವರ ಮುಂದಿನ ಚಲನಚಿತ್ರಗಳು ಮತ್ತು ಸಂಬಂಧಿತ ಸೃಜನಶೀಲ ಯೋಜನೆಗಳಲ್ಲಿ ಮಹಿಳೆಯರು ಮತ್ತು ಮಕ್ಕಳ ಗೌರವಕ್ಕೆ ಧಕ್ಕೆಯಾಗದಂತೆ ಮತ್ತು ಸೂಕ್ತ ಪ್ರಾತಿನಿಧ್ಯವನ್ನು ಖಚಿತಪಡಿಸಿಕೊಳ್ಳುವುದಾಗಿ ಆಯೋಗಕ್ಕೆ ಭರವಸೆ ನೀಡಿದ್ದಾರೆ.

ಈ ವಿವಾದಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ನೋರಾ ಫತೇಹಿ ಅವರಿಗೂ ಸಮನ್ಸ್ ನೀಡಲಾಗಿದೆ. ಆದರೆ ಅವರು ವಿದೇಶದಲ್ಲಿ ಇರುವುದರಿಂದ ಹಾಜರಾಗಲು ಸಾಧ್ಯವಾಗಲಿಲ್ಲ ಮತ್ತು ವಿಚಾರಣೆಗೆ ಹೊಸ ದಿನಾಂಕವನ್ನು ಕೋರಿದ್ದಾರೆ.

ನೋರಾ ಫತೇಹಿ ಮತ್ತು ಸಂಜಯ್ ದತ್ ಡ್ಯಾನ್ಸ್​ ಮಾಡಿರುವ ಈ ಸಾಂಗ್ ಬಿಡುಗಡೆಯಾದ ಕೂಡಲೇ ವಿವಾದ ಭುಗಿಲೆದ್ದಿತು. ಹಾಡಿನಲ್ಲಿ ಮಹಿಳೆಯರಿಗೆ ಸಂಬಂಧಿಸಿದಂತೆ ಅಶ್ಲೀಲ ಸಾಹಿತ್ಯ ಮತ್ತು ದೃಶ್ಯಗಳಿವೆ ಎಂದು ಅನೇಕರು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮಧ್ಯಪ್ರಾಚ್ಯ ರಾಷ್ಟ್ರಗಳ ಮನವಿಗೆ ಮಣಿದ Trump: ಕೊನೆ ಕ್ಷಣದಲ್ಲಿ Iran ಮೇಲಿನ ದಾಳಿಗೆ ಬ್ರೇಕ್‌; ಒಪ್ಪಂದವಾದರೆ ಯುದ್ಧ ಅಂತ್ಯ, ಇಲ್ಲದಿದ್ದರೆ ಭಾರೀ ದಾಳಿ ಎಚ್ಚರಿಕೆ..!

'ನೀರು-ರಕ್ತ ಒಟ್ಟಿಗೆ ಹರಿಯಲು ಸಾಧ್ಯವಿಲ್ಲ'; ನಿಮ್ಮ ದುರ್ವರ್ತನೆಯಿಂದಲೇ ಸಿಂಧು ಜಲ ಒಪ್ಪಂದ ಅಮಾನತು: ಪಾಕಿಸ್ತಾನಕ್ಕೆ ಭಾರತ ತಿರುಗೇಟು

ಭಾರತ-ಚೀನಾ ಗಡಿ ವ್ಯಾಪಾರಕ್ಕೆ ಮರುಜೀವ: 6 ವರ್ಷಗಳ ಬಳಿಕ ನಾಥೂ ಲಾ ಗಡಿಯಲ್ಲಿ ವ್ಯಾಪಾರ ಚಟುವಟಿಕೆ ಪುನರಾರಂಭ..!

ಸಕಲೇಶಪುರ: ರೈಲ್ವೆ ಹಳಿ ಮೇಲೆ ಗುಡ್ಡ ಕುಸಿತ; ರೈಲು ಸಂಚಾರ ಸಂಪೂರ್ಣ ಸ್ಥಗಿತ; ಕಾನ್ಸ್ಟೇಬಲ್ ಪರೀಕ್ಷಾರ್ಥಿಗಳ ಪರದಾಟ

ಬೆದರಿಕೆಗಳಿಗೆ ಹೆದರಲ್ಲ, ಮತ್ತೆ ದಾಳಿ ನಡೆದರೆ ತಕ್ಕ ಪ್ರತಿಕ್ರಿಯೆ: ಅಮೆರಿಕಾಗೆ ಇರಾನ್ ತಿರುಗೇಟು, ನೆರೆಹೊರೆಯ ರಾಷ್ಟ್ರಗಳೊಂದಿಗೆ ತುರ್ತು ಮಾತುಕತೆ..!