ಟಾಕ್ಸಿಕ್ ಚಿತ್ರದಲ್ಲಿ ನಟ ಯಶ್ 
ಸಿನಿಮಾ ಸುದ್ದಿ

ಯಶ್ ನಟನೆಯ 'ಟಾಕ್ಸಿಕ್' ಚಿತ್ರಕ್ಕೆ ಮತ್ತೊಂದು ಸಂಕಷ್ಟ; ಕ್ರಿಶ್ಚಿಯನ್ ಸಮುದಾಯದ ಭಾವನೆಗಳಿಗೆ ನೋವುಂಟು ಮಾಡಿದ ಆರೋಪ

ಚಿತ್ರದಿಂದ ಆಕ್ಷೇಪಾರ್ಹ ದೃಶ್ಯಗಳನ್ನು ತೆಗೆದುಹಾಕುವಂತೆ ಒಕ್ಕೂಟದ ಅಧ್ಯಕ್ಷ ಪ್ರದೀಪ್ ಕುಮಾರ್ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

ಯಶ್ ನಟನೆಯ 'ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್' ಚಿತ್ರ ಬಿಡುಗಡೆಗೂ ಮುನ್ನವೇ ಒಂದಿಲ್ಲೊಂದು ವಿಚಾರಗಳಿಗೆ ಭಾರಿ ಸುದ್ದಿಯಾಗುತ್ತಿದೆ. ನಮ್ಮ ಧಾರ್ಮಿಕ ನಂಬಿಕೆಗಳನ್ನು ಅಗೌರವಿಸುವ ದೃಶ್ಯಗಳನ್ನು ಚಿತ್ರವು ಒಳಗೊಂಡಿದೆ ಎಂದು ಕ್ರಿಶ್ಚಿಯನ್ ಸಂಘಟನೆಗಳು ಆರೋಪಿಸಿವೆ.

ಟಾಕ್ಸಿಕ್ ಚಿತ್ರದ ಕೆಲವು ದೃಶ್ಯಗಳು ಕ್ರಿಶ್ಚಿಯನ್ ಧರ್ಮದ ಕೇಂದ್ರ ಪ್ರಧಾನ ದೇವದೂತ ಸಂತ ಮೈಕೆಲ್ ಪ್ರತಿಮೆ ಮುಂದೆ ಆಕ್ಷೇಪಾರ್ಹ ರೀತಿಯ ದೃಶ್ಯಗಳನ್ನು ಚಿತ್ರಿಸಲಾಗಿದೆೆ ಎಂದು ಆರೋಪಿಸಿ ರಾಷ್ಟ್ರೀಯ ಕ್ರಿಶ್ಚಿಯನ್ ಫೆಡರೇಶನ್ ದೂರು ಸಲ್ಲಿಸಿದೆ. ಇದು ಕ್ರಿಶ್ಚಿಯನ್ ಸಮುದಾಯದ ಭಾವನೆಗಳಿಗೆ ನೋವುಂಟು ಮಾಡುತ್ತದೆ ಎಂದು ಸಂಸ್ಥೆ ಹೇಳಿಕೊಂಡಿದೆ.

ಚಿತ್ರದ ಆಕ್ಷೇಪಾರ್ಹ ದೃಶ್ಯಗಳನ್ನು ತೆಗೆದುಹಾಕುವಂತೆ ಒಕ್ಕೂಟದ ಅಧ್ಯಕ್ಷ ಪ್ರದೀಪ್ ಕುಮಾರ್ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ. ವಿವಾದಿತ ದೃಶ್ಯಗಳನ್ನು ಒಳಗೊಂಡ ಪ್ರಚಾರದ ವಿಷಯ ಮತ್ತು ಆನ್‌ಲೈನ್ ವಿಡಿಯೋಗಳನ್ನು ತೆಗೆದುಹಾಕಬೇಕೆಂದು ಗುಂಪು ಒತ್ತಾಯಿಸಿದೆ. ಚಿತ್ರತಂಡ ಕ್ರಿಶ್ಚಿಯನ್ ಸಮುದಾಯಕ್ಕೆ ಕ್ಷಮೆಯಾಚಿಸಬೇಕು ಮತ್ತು ಇದನ್ನು ನಿರ್ಲಕ್ಷಿಸಿದರೆ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದೆ.

ಇತ್ತೀಚಿನ ವಾರಗಳಲ್ಲಿ ಮಹಿಳಾ ಸಂಘಟನೆಗಳು ಈ ಚಿತ್ರದ ಟೀಸರ್‌ನ ಕೆಲವು ಭಾಗಗಳಿಗೆ ಆಕ್ಷೇಪಣೆ ವ್ಯಕ್ತಪಡಿಸಿದ ನಂತರ ಈ ಚಿತ್ರವು ಗಮನ ಸೆಳೆದಿತ್ತು. ಕೆಲವು ದೃಶ್ಯಗಳು ಸಾರ್ವಜನಿಕರ ಮೇಲೆ ವಿಶೇಷವಾಗಿ ಮಹಿಳೆಯರು ಮತ್ತು ಮಕ್ಕಳ ಮೇಲೆ ಋಣಾತ್ಮಕ ಪರಿಣಾಮ ಬೀರುತ್ತವೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ಮಹಿಳಾ ಆಯೋಗಕ್ಕೆ ದೂರುಗಳನ್ನು ಸಲ್ಲಿಸಲಾಯಿತು.

ಕೆಜಿಎಫ್ ನಂತರ ಯಶ್ ಟಾಕ್ಸಿಕ್ ಮೂಲಕ ತೆರೆಮೇಲೆ ಬರಲು ಸಿದ್ಧರಾಗಿದ್ದಾರೆ. ಚಿತ್ರಕ್ಕೆ ಗೀತು ಮೋಹನದಾಸ್ ಆ್ಯಕ್ಷನ್ ಕಟ್ ಹೇಳಿದ್ದು, ಚಿತ್ರದಲ್ಲಿ ನಯನತಾರಾ, ರುಕ್ಮಿಣಿ ವಸಂತ್, ಹುಮಾ ಖುರೇಷಿ, ಕಿಯಾರಾ ಅಡ್ವಾಣಿ ಮತ್ತು ತಾರಾ ಸುತಾರಿಯಾ ಸೇರಿದಂತೆ ದೊಡ್ಡ ತಾರಾಗಣದೊಂದಿಗೆ, ಚಿತ್ರವು ಮಾರ್ಚ್ 19 ರಂದು ಬಿಡುಗಡೆಯಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

SIR: ‘ಜ್ಞಾನೇಶ್ ಕುಮಾರ್ ಬಿಜೆಪಿಯ ಅಸ್ತ್ರ, SIR ರದ್ದುಪಡಿಸಿ': ಬ್ಯಾಲೆಟ್ ಪೇಪರ್‌ನಲ್ಲಿ ಚುನಾವಣೆಗೆ ಠಾಕ್ರೆ ಸೋದರ ಸಂಬಂಧಿಗಳ ಆಗ್ರಹ!

ಉಕ್ರೇನ್ ನಲ್ಲಿ ರಷ್ಯಾ ಡ್ರೋನ್ ದಾಳಿ: ಭಾರತೀಯರ ಒಡೆತನದ ಔಷಧ ಘಟಕ ಧ್ವಂಸ, ಓರ್ವ ಸಾವು, ಹಲವರಿಗೆ ಗಾಯ! Video

ಪ್ರಿಯತಮೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಗಂಡ; ಪ್ರಶ್ನಿಸಿದ್ದಕ್ಕೆ ಕಾರಿನ ಬಾನೆಟ್ ಮೇಲೆ ಪತ್ನಿಯನ್ನೇ ಎಳೆದೊಯ್ದ!-Video

‘ನಿವೃತ್ತಿಗೂ ಮುನ್ನ ಈ ದಾಖಲೆ ಬೇಕು’: 92 ರನ್ ಗೆ ಔಟಾದ ರೋಹಿತ್ ಶರ್ಮಾಗೆ ಗವಾಸ್ಕರ್ ಟಾರ್ಗೆಟ್!

2006ರ KSTP ಯೋಜನೆ ಪ್ರಕರಣ: CEC ಜ್ಞಾನೇಶ್ ಕುಮಾರ್ ವಿರುದ್ಧ ವಿಜಿಲೆನ್ಸ್ ತನಿಖೆಗೆ ಕೇರಳಂ ಗೃಹ ಸಚಿವ ಆದೇಶ