ದುಷ್ಯಂತ್-ರಚನಾ ನಿಶ್ಚಿತಾರ್ಥ 
ಸಿನಿಮಾ ಸುದ್ದಿ

ಮಾಜಿ ಸಂಸದ ಮುದ್ದಹನುಮೇಗೌಡ ಪುತ್ರಿಯೊಂದಿಗೆ ಶಾಸಕ ಎಸ್‌.ಆರ್ ಶ್ರೀನಿವಾಸ್ ಪುತ್ರ, ನಟ ದುಷ್ಯಂತ್ ಎಂಗೇಜ್ಮೆಂಟ್!

ಫೆಬ್ರುವರಿ 26 ರಂದು ಬೆಂಗಳೂರಿನ ಚಾಮರ ವಜ್ರದಲ್ಲಿ ವಿವಾಹ ಸಮಾರಂಭ ನಡೆಯಲಿದೆ. ಮಾರ್ಚ್ 1 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆರತಕ್ಷತೆ ಮತ್ತು ಬೀಗರ ಊಟವನ್ನು ಆಯೋಜಿಸಲಾಗಿದೆ.

ಸಿಂಪಲ್ ಸುನಿ ನಿರ್ದೇಶನದ 'ಗತ ವೈಭವ' ಚಿತ್ರದ ಮೂಲಕ ನಾಯಕನಾಗಿ ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ ಮಾಡಿದ್ದ ನಟ ದುಷ್ಯಂತ್, ಇದೀಗ ತಮ್ಮ ವೈಯಕ್ತಿಕ ಜೀವನದಲ್ಲಿ ಹೊಸ ಇನಿಂಗ್ಸ್ ಆರಂಭಿಸಿದ್ದಾರೆ. ನಟ ಇತ್ತೀಚೆಗೆ ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ತುಮಕೂರು ಜಿಲ್ಲೆಯ ಗುಬ್ಬಿ ವಿಧಾನಸಭೆ ಕ್ಷೇತ್ರದ ಶಾಸಕ ಎಸ್‌ಆರ್ ಶ್ರೀನಿವಾಸ್ ಅವರ ಪುತ್ರ ದುಷ್ಯಂತ್ ಮಾಜಿ ಸಂಸದ ಮುದ್ದಹನುಮೇಗೌಡ ಅವರ ಪುತ್ರಿ ರಚನಾರನ್ನು ವಿವಾಹವಾಗಲಿದ್ದಾರೆ. ಈ ಮೂಲಕ ಜಿಲ್ಲೆಯ ಎರಡು ಪ್ರಮುಖ ರಾಜಕೀಯ ಕುಟುಂಬಗಳನ್ನು ಒಂದುಗೂಡಿಸಿದೆ.

ಫೆಬ್ರುವರಿ 26 ರಂದು ಬೆಂಗಳೂರಿನ ಚಾಮರ ವಜ್ರದಲ್ಲಿ ವಿವಾಹ ಸಮಾರಂಭ ನಡೆಯಲಿದೆ. ಮಾರ್ಚ್ 1 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆರತಕ್ಷತೆ ಮತ್ತು ಬೀಗರ ಊಟವನ್ನು ಆಯೋಜಿಸಲಾಗಿದ್ದು, ರಾಜಕೀಯ ಮತ್ತು ಸಾಂಸ್ಕೃತಿಕ ವಲಯದ ಹಲವಾರು ನಾಯಕರು ಭಾಗವಹಿಸುವ ನಿರೀಕ್ಷೆಯಿದೆ.

ಈ ಕುರಿತು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಚಿತ್ರಗಳನ್ನು ಹಂಚಿಕೊಂಡಿರುವ ದುಷ್ಯಂತ್, ರಚನಾ ಮುದ್ದಹನುಮೇಗೌಡ ಅವರೊಂದಿಗಿನ ನನ್ನ ವಿವಾಹ ಕಾರ್ಯಕ್ರಮವು ಫೆಬ್ರುವರಿ 26ರ ಗುರುವಾರ ಮಧ್ಯಾಹ್ನ ‘ಚಾಮರ ವಜ್ರ’ದಲ್ಲಿ (ಬೆಂಗಳೂರು ಅರಮನೆ ಮೈದಾನ) ನಡೆಯಲಿದ್ದು, ಮಾರ್ಚ್ 1ರ ಭಾನುವಾರ ಬೀಗರ ಊಟ ಆರತಕ್ಷತೆಯು ಬೆಂಗಳೂರಿನ ಮುಖ್ಯ ಅರಮನೆಯಲ್ಲಿ ನಡೆಯಲಿದೆ. ನಿಮ್ಮ ಹಾರೈಕೆ, ಆಶೀರ್ವಾದ ಇರಲಿ ಎಂದು ಬರೆದುಕೊಂಡಿದ್ದಾರೆ.

ದುಷ್ಯಂತ್ ಅವರ ನಿಶ್ಚಿತಾರ್ಥದ ಸಂದರ್ಭದಲ್ಲಿ, ಸ್ನೇಹಿತರು, ಅಭಿಮಾನಿಗಳು ಮತ್ತು ಹಿತೈಷಿಗಳು ಭಾಗವಹಿಸಿದ್ದು, ಅವರಿಗೆ ಶುಭಾಶಯಗಳ ಮಹಾಪೂರವೇ ಹರಿದುಬಂದಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್