ನಟ ರಣವೀರ್ ಸಿಂಗ್ ವಿರುದ್ಧ ಪೊಲೀಸ್ ದೂರು 
ಸಿನಿಮಾ ಸುದ್ದಿ

ಎಫ್‌ಐಆರ್ ರದ್ದು ಕೋರಿ ಕರ್ನಾಟಕ ಹೈಕೋರ್ಟ್‌ ಮೆಟ್ಟಿಲೇರಿದ ನಟ ರಣವೀರ್ ಸಿಂಗ್

ಈ ಸಂಬಂಧ ವಕೀಲ ಪ್ರಶಾಂತ್ ಸಲ್ಲಿಸಿದ ದೂರಿನ ಆಧಾರದ ಮೇಲೆ, ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಬಾಲಿವುಡ್ ನಟನ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಬೆಂಗಳೂರು: ಬಾಲಿವುಡ್ ನಟ ರಣವೀರ್ ಸಿಂಗ್ ಅವರು, 'ಕಾಂತಾರ ಚಾಪ್ಟರ್ 1' ಚಿತ್ರದ ದೈವವನ್ನು ದೆವ್ವ ಎಂದು ಅವಮಾನ ಮಾಡಿದ ಆರೋಪದ ಮೇಲೆ ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ಅನ್ನು ರದ್ದುಗೊಳಿಸುವಂತೆ ಕೋರಿ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಗೋವಾದಲ್ಲಿ ನಡೆದ ಫಿಲ್ಮ್‌ಫೇರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನಟ ರಣವೀರ್ ಸಿಂಗ್ ಅವರು, 'ಕಾಂತಾರ' ಚಿತ್ರದ ಬಗ್ಗೆ ಮಾತನಾಡುತ್ತಾ, ರಿಷಬ್ ಶೆಟ್ಟಿ ನಟನೆಯನ್ನು ತಮಾಷೆಯಾಗಿ ಅನುಕರಣೆ ಮಾಡಿ ವಿವಾದಕ್ಕೀಡಾಗಿದ್ದರು.

ಈ ಸಂಬಂಧ ವಕೀಲ ಪ್ರಶಾಂತ್ ಸಲ್ಲಿಸಿದ ದೂರಿನ ಆಧಾರದ ಮೇಲೆ, ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಬಾಲಿವುಡ್ ನಟನ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸಿಂಗ್‌ಗೆ ಈ ಹಿಂದೆ ನೋಟಿಸ್ ಸಹ ಜಾರಿ ಮಾಡಿದ್ದರು.

ನಟನಿಂದ ಯಾವುದೇ ಪ್ರತಿಕ್ರಿಯೆ ಬಾರದ ಕಾರಣ, ಹೈಗ್ರೌಂಡ್ಸ್ ಪೊಲೀಸರು ಇತ್ತೀಚೆಗೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲು ಕ್ರಮಗಳನ್ನು ಪ್ರಾರಂಭಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇದೀಗ ಪ್ರಕರಣ ರದ್ದು ಕೋರಿ ರಣವೀರ್ ಸಿಂಗ್ ಸಲ್ಲಿಸಿರುವ ಅರ್ಜಿಯನ್ನು ಫೆಬ್ರವರಿ 24 ರಂದು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಪೀಠದ ಮುಂದೆ ವಿಚಾರಣೆಗೆ ಪಟ್ಟಿ ಮಾಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

5 ದಶಕಗಳ ಬಳಿಕ ದಾಖಲೆ ನಿರ್ಮಿಸಿದ ಚಂದ್ರಯಾನ: ಯಶಸ್ವಿಯಾಗಿ ಭೂಮಿಗೆ ಮರಳಿದ Artemis II ಗಗನ ಯಾತ್ರಿಗಳು-Video

ಲೋಕಭವನ -ಸರ್ಕಾರದ ನಡುವೆ ಮತ್ತೊಂದು ಸುತ್ತಿನ ಸಂಘರ್ಷ: ಮತ ಪತ್ರ ಬಳಕೆ ಮಸೂದೆಗೆ ರಾಜ್ಯಪಾಲರ ತಡೆ

ನಮ್ಮ ನೌಕೆಗಳನ್ನು ಅತ್ಯುತ್ತಮ ಶಸ್ತ್ರಾಸ್ತ್ರಗಳಿಂದ ತುಂಬುತ್ತಿದ್ದೇವೆ; ಇರಾನ್ ಬಗ್ಗದೇ ಹೋದಲ್ಲಿ ಸರ್ವನಾಶ- ಮಾತುಕತೆಗೂ ಮುನ್ನ ಟ್ರಂಪ್ ಬೆದರಿಕೆ!

ಲೆಬನಾನ್‌ನಲ್ಲಿ ನಾಗರಿಕರ ಸಾವಿನ ಘಟನೆಗಳ ಬಗ್ಗೆ ಭಾರತ ಕಳವಳ; ಇಸ್ರೇಲ್ ಗೆ ತೀವ್ರ ಹಿನ್ನಡೆ!

Hormuz ಮೇಲೆ ಹಾರುತ್ತಿದ್ದ 200 ಮಿಲಿಯನ್ ಡಾಲರ್ ಮೌಲ್ಯದ ಅಮೆರಿಕ ಡ್ರೋನ್ ದಿಢೀರ್ ನಾಪತ್ತೆ; ಯುದ್ಧಕ್ಕೆ ಪ್ರತಿ ದಿನದ US ಖರ್ಚು 3,040 ಕೋಟಿ ರೂ!

SCROLL FOR NEXT