ರಚನಾ ಮತ್ತು ದುಷ್ಯಂತ್ 
ಸಿನಿಮಾ ಸುದ್ದಿ

ಮಾಜಿ ಸಂಸದ ಮುದ್ದಹನುಮೇಗೌಡ ಪುತ್ರಿ ರಚನಾ ಜೊತೆ ನಟ ದುಷ್ಯಂತ್ ಶ್ರೀನಿವಾಸ್ ಅದ್ಧೂರಿ ವಿವಾಹ

ಇಂದು( ಫೆಬ್ರುವರಿ 26) ಬೆಂಗಳೂರಿನ ಚಾಮರ ವಜ್ರದಲ್ಲಿ ನಡೆದ ಅದ್ಧೂರಿ ಕಲ್ಯಾಣೋತ್ಸವದಲ್ಲಿ ರಚನಾ- ದುಷ್ಯಂತ್ ಸಪ್ತಪದಿ ತುಳಿದಿದ್ದಾರೆ.

'ಗತವೈಭವ' ಸಿನಿಮಾ ನಟ ದುಷ್ಯಂತ್‌ ಮಾಜಿ ಸಂಸದ ಮುದ್ದ ಹನುಮೇಗೌಡರ ಪುತ್ರಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.ಇತ್ತೀಚೆಗೆ ಎಂಗೇಜ್‌ಮೆಂಟ್‌ ಕೂಡ ನಡೆದಿತ್ತು.

ಇಂದು( ಫೆಬ್ರುವರಿ 26) ಬೆಂಗಳೂರಿನ ಚಾಮರ ವಜ್ರದಲ್ಲಿ ನಡೆದ ಅದ್ಧೂರಿ ಕಲ್ಯಾಣೋತ್ಸವದಲ್ಲಿ ರಚನಾ- ದುಷ್ಯಂತ್ ಸಪ್ತಪದಿ ತುಳಿದಿದ್ದಾರೆ. ವಿವಾಹ ಸಮಾರಂಭಕ್ಕೆ ರಾಜಕೀಯ ಮತ್ತು ಸಿನಿಮಾ ರಂಗದ ಹಲವು ಗಣ್ಯರು ಭಾಗವಹಿಸಿದ್ದರು. ಮಾರ್ಚ್ 1 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆರತಕ್ಷತೆ ಮತ್ತು ಬೀಗರ ಊಟ ಆಯೋಜಿಸಿದ್ದಾರೆ.

ಸಿಂಪಲ್‌ ಸುನಿ ನಿರ್ದೇಶನದ ʻಗತವೈಭವʼ ಸಿನಿಮಾ ಮೂಲಕ ನಾಯಕನಾಗಿ ಪಾದಾರ್ಪಣೆ ಮಾಡಿದ ದುಷ್ಯಂತ್‌, ತುಮಕೂರು ಜಿಲ್ಲೆಯ ಗುಬ್ಬಿ ಕ್ಷೇತ್ರದ ಶಾಸಕ ಎಸ್‌ಆರ್‌ ಶ್ರೀನಿವಾಸ್‌ ಅವರ ಪುತ್ರರಾಗಿದ್ದಾರೆ. ಇನ್ನೂ, ದುಷ್ಯಂತ್‌ ಭಾವಿ ಪತ್ನಿ ರಚನಾ ಅವರು ಮಾಜಿ ಸಂಸದ ಮುದ್ದಹನುಮೇಗೌಡ ಅವರ ಪುತ್ರಿಯಾಗಿದ್ದು, ಈ ಮದುವೆಯ ಮೂಲಕ ಎರಡು ಪ್ರಭಾವಿ ರಾಜಕೀಯ ಕುಟುಂಬಗಳು ಸಂಬಂಧ ಬೆಳೆಸುತ್ತಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜ್ಞಾನೇಶ್ ಕುಮಾರ್ ವಿರುದ್ಧ ದೆಹಲಿ, ಮುಂಬೈನಲ್ಲಿ ಬೃಹತ್ ಪ್ರತಿಭಟನೆ; 700 ಮಂದಿ ವಶಕ್ಕೆ

FlyDubai ಘಟನೆ ಹಿಂದೆ ಯಾವುದೇ ಶಕ್ತಿಯ ಕೈವಾಡವಿದ್ದರೂ ಡೋಂಟ್ ಕೇರ್; 'ಭಾರಿ ಬೆಲೆ' ತೆರಬೇಕಾಗುತ್ತೆ- ಇಸ್ರೇಲ್ ಪ್ರಧಾನಿ ನೆತನ್ಯಾಹು ಎಚ್ಚರಿಕೆ

ಬಿಹಾರ ಪ್ರವಾಹ: ವಾಯುಪಡೆಯ ಹೆಲಿಕಾಪ್ಟರ್‌ನಿಂದ ಪರಿಹಾರ ಸಾಮಗ್ರಿಯ ಪ್ಯಾಕೆಟ್ ಬಿದ್ದು ವೃದ್ಧ ಸಾವು!

Asian Games 2026: 44 ವರ್ಷಗಳ ಬರ ನೀಗಿಸಿದ ಮಹಿಳಾ ಪಡೆ; ಚೀನಾ ಮಣಿಸಿ ಚಿನ್ನ ಗೆದ್ದ ಭಾರತ!

CJP ಪ್ರತಿಭಟನೆಗೆ ಕೈಜೋಡಿಸಿದ ನಸೀರುದ್ದೀನ್ ಶಾ; ನಟನನ್ನು ಅಪ್ಪಿಕೊಂಡು ಕಣ್ಣೀರಿಟ್ಟ ಅಭಿಜೀತ್ ದೀಪ್ಕೆ; Video!