ದಿ ಕೇರಳ ಕೇರಳ ಸ್ಟೋರಿ-2 
ಸಿನಿಮಾ ಸುದ್ದಿ

'ದಿ ಕೇರಳ ಸ್ಟೋರಿ-2': ಬಿಡುಗಡೆಗೆ ತಡೆ ಆದೇಶ ತೆರವುಗೊಳಿಸಿದ ಹೈಕೋರ್ಟ್ ವಿಭಾಗೀಯ ಪೀಠ!

ಗುರುವಾರ ಸಂಜೆ ವಿಚಾರಣೆ ಆರಂಭಿಸಿದ ವಿಭಾಗೀಯ ಪೀಠ ಸುಮಾರು 2 ಗಂಟೆ ವಿಸ್ತೃತ ವಿಚಾರಣೆ ನಡೆಸಿ, ಇಂದಿಗೆ ತೀರ್ಪು ಕಾಯ್ದಿರಿಸಿತ್ತು.

ತಿರುವನಂತಪುರ: ದಿ ಕೇರಳ ಸ್ಟೋರಿ-2 ಚಿತ್ರ ಬಿಡುಗಡೆಗೆ 15 ದಿನಗಳ ತಡೆ ನೀಡಿದ್ದ ಏಕ ಸದಸ್ಯ ಪೀಠ ನೀಡಿದ್ದ ಆದೇಶಕ್ಕೆ ಕೇರಳ ಹೈಕೋರ್ಟ್ ಶುಕ್ರವಾರ ತೆರವುಗೊಳಿಸಿತು.

ನ್ಯಾಯಮೂರ್ತಿಗಳಾದ ಎಸ್.ಎ. ಧರ್ಮಾಧಿಕಾರಿ ಹಾಗೂ ಪಿ.ವಿ. ಬಾಲಕೃಷ್ಣನ್ ಅವರಿದ್ದ ವಿಭಾಗೀಯ ಪೀಠ, ನ್ಯಾಯಮೂರ್ತಿ ಬೇಚು ಕುರಿಯನ್ ಥೋಮಸ್ ಅವರು ನೀಡಿದ್ದ ಆದೇಶಕ್ಕೆ ತಡೆ ನೀಡಿತು.

ವಿಭಾಗೀಯ ಪೀಠ ನೀಡಿದ್ದ ಆದೇಶದ ವಿರುದ್ಧ ಚಿತ್ರ ನಿರ್ಮಾಪಕ ವಿಪುಲ್ ಅಮೃತಲ್ ಶಾ ಗುರುವಾರ ಮೇಲ್ಮನವಿ ಸಲ್ಲಿಸಿದ್ದರು. ಫೆ.27 ರಂದು ಸಿನಿಮಾ ಬಿಡುಗಡೆ ಇರುವುದರಿಂದ ತ್ವರಿತಗತಿಯಲ್ಲಿ ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಿದ್ದರು.

ಗುರುವಾರ ಸಂಜೆ ವಿಚಾರಣೆ ಆರಂಭಿಸಿದ ವಿಭಾಗೀಯ ಪೀಠ ಸುಮಾರು 2 ಗಂಟೆ ವಿಸ್ತೃತ ವಿಚಾರಣೆ ನಡೆಸಿ, ಇಂದಿಗೆ ತೀರ್ಪು ಕಾಯ್ದಿರಿಸಿತ್ತು.

ಈ ಚಿತ್ರವು ಕೇರಳ ರಾಜ್ಯಕ್ಕೆ ಅಥವಾ ಯಾವುದೇ ಸಮುದಾಯಕ್ಕೆ ಹಾನಿ ಮಾಡುವುದಿಲ್ಲ ಅಥವಾ ಅವಹೇಳನ ಮಾಡುವುದಿಲ್ಲ ಎಂದು ಶಾ ತಮ್ಮ ಮನವಿಯಲ್ಲಿ ಹೇಳಿದ್ದರು.

ಸಾಮಾಜಿಕ ಅನಿಷ್ಟವನ್ನು ಮಾತ್ರ ಚಿತ್ರಿಸಲಾಗಿದೆ. ಬಿಡುಗಡೆಗೆ ವಿಳಂಬವಾದಲ್ಲಿ ತೀವ್ರ ಆರ್ಥಿಕ ನಷ್ಟ ಉಂಟಾಗುತ್ತದೆ. ಭಾರತದಾದ್ಯಂತ 1,500 ಮತ್ತು ವಿದೇಶಗಳಲ್ಲಿ 300 ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಚಿತ್ರ ಪ್ರದರ್ಶನಗೊಳ್ಳಲಿದೆ. ಒಂದು ತಡೆಯು ನಿರ್ಮಾಪಕರನ್ನು "ಆರ್ಥಿಕವಾಗಿ ಮುಗಿಸುತ್ತದೆ" ಎಂದು ಶಾ ಪರ ವಕೀಲರು ನ್ಯಾಯಾಲಯಕ್ಕೆ ಸಲ್ಲಿಸಿರುವ ಅರ್ಜಿಯಲ್ಲಿ ಉಲ್ಲೇಖಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್