ಸಿನಿಮಾ ಸುದ್ದಿ

ದುನಿಯಾ ವಿಜಯ್ ಪುತ್ರಿ ನಟನೆಯ ಲ್ಯಾಂಡ್‌ಲಾರ್ಡ್ ಚಿತ್ರದ 'ರೋಮಾಂಚಕ' ಹಾಡು ಬಿಡುಗಡೆ

ನಟ ದುನಿಯಾ ವಿಜಯ್ ಹಾಗೂ ರಚಿತಾ ರಾಮ್ ಅಭಿನಯದ 'ಲ್ಯಾಂಡ್‌ಲಾರ್ಡ್' ಚಿತ್ರದ ಎರಡನೇ ಹಾಡು ಬಿಡುಗಡೆಯಾಗಿದೆ. ಧಾರವಾಡದಲ್ಲಿ 'ರೋಮಾಂಚಕ' ಹಾಡನ್ನು ಚಿತ್ರತಂಡ ಬಿಡುಗಡೆ ಮಾಡಿದೆ.

ನಟ ದುನಿಯಾ ವಿಜಯ್ ಹಾಗೂ ರಚಿತಾ ರಾಮ್ ಅಭಿನಯದ 'ಲ್ಯಾಂಡ್‌ಲಾರ್ಡ್' ಚಿತ್ರದ ಎರಡನೇ ಹಾಡು ಬಿಡುಗಡೆಯಾಗಿದೆ. ಧಾರವಾಡದಲ್ಲಿ 'ರೋಮಾಂಚಕ' ಹಾಡನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ವಿಶೇಷ ಏನೆಂದರೆ ಈ ಸಿನಿಮಾದಲ್ಲಿ ದುನಿಯಾ ವಿಜಯ್ ಅವರ ಹಿರಿಯ ಪುತ್ರಿ ರಿತನ್ಯಾ ವಿಜಯ್‌ಕುಮಾರ್ ನಟಿಸಿದ್ದಾರೆ. ಈ ಚಿತ್ರದಲ್ಲಿ ಅವರು ದುನಿಯಾ ವಿಜಯ್‌ ಮಗಳ ಪಾತ್ರದಲ್ಲಿ ನಟಿಸಿದ್ದು 'ಭಾಗ್ಯ' ಎಂಬ ಪಾತ್ರಕ್ಕೆ ಜೀವತುಂಬಿದ್ದಾರೆ. ರಿತನ್ಯಾ ಅವರು ಹಳ್ಳಿ ಹುಡುಗಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ರಿತನ್ಯಾ ವಿಜಯ್‌ಕುಮಾರ್ ಹಾಗೂ ಶಿಶಿರ್ ಬೈಕಾಡಿ ಕಾಣಿಸಿಕೊಂಡಿರುವ ‘ರೋಮಾಂಚಕ’ ಹಾಡು ಆನಂದ್ ಆಡಿಯೊ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಯಾಗಿದೆ. ಲ್ಯಾಂಡ್‌ಲಾರ್ಡ್ ಸಿನಿಮಾದ ಮೂಲಕ ರಿತನ್ಯಾ ವಿಜಯ್‌ಕುಮಾರ್ ಚಂದನವನಕ್ಕೆ ಕಾಲಿಟ್ಟಿದ್ದಾರೆ.

ಶಿಶಿರ್ ಬೈಕಾಡಿ ಅವರು ‘ಡೇರ್ ಡೆವಿಲ್ ಮುಸ್ತಫಾ’ ಸಿನಿಮಾನಲ್ಲಿ ಮುಸ್ತಫಾನ ಪಾತ್ರದಲ್ಲಿ ನಟಿಸಿದ್ದರು. ಈಗ ಲ್ಯಾಂಡ್‌ಲಾರ್ಡ್‌ ಸಿನಿಮಾದಲ್ಲಿ ದುನಿಯಾ ವಿಜಯ್‌ ಮಗಳ ಜೊತೆಗೆ ಭರ್ಜರಿಯಾಗಿ ಡ್ಯಾನ್ಸ್ ಮಾಡಿದ್ದಾರೆ. ಇದೇ ಹಾಡು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಅಜನೀಶ್ ಲೋಕನಾಥ್ ಅವರು ಸಂಗೀತ ನೀಡಿದ ರೋಮಂಚಕ ಹಾಡನ್ನು ಸಂಜಿತ್ ಹೆಗ್ಡೆ ಹಾಡಿದ್ದಾರೆ.

ಜನವರಿ 23ರಂದು ಲ್ಯಾಂಡ್‌ಲಾರ್ಡ್ ಸಿನಿಮಾ ವಿಶ್ವಾದ್ಯಂತ ಬಿಡುಗಡೆಯಾಗುತ್ತಿದೆ. ಈ ಚಿತ್ರವನ್ನು ನಿರ್ದೇಶಕ ಜಡೇಜ ಕೆ.ಹಂಪಿ ನಿರ್ದೇಶನ ಮಾಡುತ್ತಿದ್ದು, ಕೆ.ವಿ ಸತ್ಯಪ್ರಕಾಶ್ ಹಾಗೂ ಹೇಮಂತ್ ಗೌಡ ಅವರು ನಿರ್ಮಾಣ ಮಾಡುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಂಚಿ ಪರೀಕ್ಷೆ ವಿವಾದ: ಬ್ಯಾರಿಕೇಡ್ ಮುರಿದು ವಿಧಾನಸೌಧದತ್ತ ನುಗ್ಗಿದ ವಿದ್ಯಾರ್ಥಿಗಳು! ಜಲಫಿರಂಗಿ ಬಳಸಿದ ಪೊಲೀಸರು, Video

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

ಬಿಡದಿ ಯೋಜನೆಗೆ ಭೂಸ್ವಾಧೀನ ವಿರೋಧಿಸಿ ಜೆಡಿಎಸ್ ಪಾದಯಾತ್ರೆ: ಮಾಜಿ ಪ್ರಧಾನಿ HD ದೇವೇಗೌಡ ಭಾಗಿ

Maharashtra: ಶಾಲಾ ಹಾಸ್ಟೆಲ್‌ನಲ್ಲಿ ಭೀಕರ ದುರಂತ: ಮಲಗಿದ್ದ 6 ಬಾಲಕಿಯರಿಗೆ ಹಾವು ಕಡಿತ, ಮೂವರ ಸಾವು!