ಕಾರುಣ್ಯ ರಾಮ್ 
ಸಿನಿಮಾ ಸುದ್ದಿ

ತಂಗಿ ವಿರುದ್ಧವೇ CCB ಪೊಲೀಸರಿಗೆ ನಟಿ ಕಾರುಣ್ಯ ರಾಮ್ ದೂರು: ಕಾರಣ..?

ತಮ್ಮ ಸಹೋದರಿ ಸಮೃದ್ಧಿ ರಾಮ್ ವಿರುದ್ಧ ಕಾರುಣ್ಯ ರಾಮ್ ಅವರು ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಬೆಂಗಳೂರು: ಬೆಳ್ಳಿತೆರೆ ಮತ್ತು ಕಿರುತೆರೆ ಎರಡರಲ್ಲೂ ಕೆಲಸ ಮಾಡಿ ಜನಪ್ರಿಯತೆ ಗಳಿಸಿರುವ ನಟಿ ಕಾರುಣ್ಯ ರಾಮ್ ಅವರು ಇದೀಗ ಸ್ವಂತ ತಂಗಿಯ ವಿರುದ್ಧವೇ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ತಮ್ಮ ಸಹೋದರಿ ಸಮೃದ್ಧಿ ರಾಮ್ ವಿರುದ್ಧ ಕಾರುಣ್ಯ ರಾಮ್ ಅವರು ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ತಮ್ಮ ಸಹೋದರಿ, ಮನೆಯಲ್ಲಿರುವ ಹಣ, ಚಿನ್ನವನ್ನೆಲ್ಲ ದುರುಪಯೋಗ ಪಡಿಸಿಕೊಂಡು, ಮನೆ ಬಿಟ್ಟು ಹೋಗಿದ್ದಾರೆ ಎಂದು ದೂರು ನೀಡಿದ್ದಾರೆ.

ಸಮೃದ್ಧಿ ರಾಮ್ ಅವರು ಬೆಟ್ಟಿಂಗ್ ಆಡಿ ಸುಮಾರು ರೂ.25 ಲಕ್ಷ ಸಾಲ ಮಾಡಿಕೊಂಡಿದ್ದಾರೆ. ಸಾಲ ತೀರಿಸಲು ಮನೆಯಲ್ಲಿದ್ದ ಚಿನ್ನ ಹಾಗೂ ಹಣವನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ದೂರಿನಲ್ಲಿ ಕಾರುಣ್ಯ ಉಲ್ಲೇಖಿಸಿದ್ದಾರೆ.

ಈ ಹಿಂದೆಯೇ ಕಾರುಣ್ಯ ರಾಮ್ ಅವರು ಸಮೃದ್ಧಿ ವಿರುದ್ಧ ನೀಡಿದ್ದ ದೂರು ಆಧರಿಸಿ ಆರ್.ಆರ್. ನಗರ ಠಾಣೆಯಲ್ಲಿ ಎನ್‌ಸಿಆರ್ ದಾಖಲಾಗಿತ್ತು. ಇದೀಗ ವಂಚನೆ, ಬೆದರಿಕೆ ಹಾಗೂ ಸಾಮಾಜಿಕ ಜಾಲತಾಣದಲ್ಲಿ ನಿಂದನೆ ಮಾಡಿರುವುದಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರಿಗೆ ದೂರು ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜುಲೈ 20 ರಿಂದ ಆಗಸ್ಟ್ 13 ರವರೆಗೆ ಸಂಸತ್ತಿನ ಮುಂಗಾರು ಅಧಿವೇಶನ; ತಿದ್ದುಪಡಿ ಮಸೂದೆಗೆ ಅಂಗೀಕಾರ ಸಾಧ್ಯತೆ!

ವೈಭವ್ ಸೂರ್ಯವಂಶಿ ಎಡವಟ್ಟು: ಪಾದಾರ್ಪಣೆ ಪಂದ್ಯದಲ್ಲಿ 2 ಅದ್ಭುತ ಸಿಕ್ಸರ್ ಬಾರಿಸಿ, ಸ್ಟಂಪ್ ಔಟ್‌ಗೆ ಬಲಿ; video

ತುಮಕೂರು: SIR ಕರ್ತವ್ಯಕ್ಕೆ ತೆರಳುವಾಗ ಭೀಕರ ಅಪಘಾತ: ಚಿಕಿತ್ಸೆ ಫಲಿಸದೆ ಭುವನಾ ಸಾವು

ಪೈರಸಿ ವಿರುದ್ಧ ಕಠಿಣ ಕ್ರಮಕ್ಕೆ Telegramಗೆ ಕೇಂದ್ರ ಸರ್ಕಾರ ಖಡಕ್ ಸೂಚನೆ; 15 ದಿನಗಳಲ್ಲಿ ವರದಿ ಸಲ್ಲಿಕೆಗೆ ಆದೇಶ

70 ಲಕ್ಷ ಪಡೆದು ಉದ್ಯಮಿಗೆ ವಂಚನೆ; ರೇಪ್‌ ಕೇಸ್‌ ಬೆದರಿಕೆ, ಪೆನ್‌ಡ್ರೈವ್‌ ನಲ್ಲಿ ಅಶ್ಲೀಲ ವಿಡಿಯೋ ಪತ್ತೆ: ಮುಸ್ಲಿಂ ಮಹಿಳೆಯ ಬಂಧನ