ಪುರಿ ಜಗನ್ನಾಥ್–ವಿಜಯ್ ಸೇತುಪತಿ ಒಟ್ಟಾಗಿ ಸಿನಿಮಾ ಮಾಡುತ್ತಿದ್ದಾರೆ. ಇತ್ತೀಚೆಗಷ್ಟೇ ಚಿತ್ರದ ಚಿತ್ರೀಕರಣ ಕೂಡ ಪೂರ್ಣಗೊಂಡಿದ್ದು, ಚಿತ್ರಕ್ಕೆ ‘ಸ್ಲಂ ಡಾಗ್’ ಎಂದು ಹೆಸರಿಡಲಾಗಿದೆ. ಚಿತ್ರತಂಡ ಶೀರ್ಷಿಕೆ ಜತೆಗೆ ಫಸ್ಟ್‌ಲುಕ್ ಪೋಸ್ಟರ್ ಬಿಡುಗಡೆಗೊಳಿಸಿದೆ.
ವಿಜಯ್ ಸೇತುಪತಿ ಮತ್ತು ಟಬು ನಟಿಸಿರುವ ಪುರಿ ಜಗನ್ನಾಥ್ ಅವರ ಮುಂಬರುವ ಚಿತ್ರ ಸ್ಲಮ್ ಡಾಗ್‌ನಲ್ಲಿ ನಟ ವಿಜಯ್ ಕುಮಾರ್ ಖಳನಾಯಕನಾಗಿ ಅಭಿನಯಿಸಿದ್ದಾರೆ.
ಪುರಿ ಕನೆಕ್ಟ್ಸ್ ಅಡಿಯಲ್ಲಿ ಪುರಿ ಜಗನ್ನಾಥ್ ಮತ್ತು ಚಾರ್ಮಿ ಕೌರ್, ಜೆಬಿ ಮೋಷನ್ ಪಿಕ್ಚರ್ಸ್‌ನ ಜೆಬಿ ನಾರಾಯಣ್ ರಾವ್ ಕೊಂಡ್ರೊಲ್ಲಾ ಅವರೊಂದಿಗೆ ನಿರ್ಮಿಸಿರುವ ಈ ಚಿತ್ರವು ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದು ಪೋಸ್ಟ್-ಪ್ರೊಡಕ್ಷನ್‌ನಲ್ಲಿದೆ.
ವಿಜಯ್ ಕುಮಾರ್ ಅವರ ಹುಟ್ಟುಹಬ್ಬದಂದು ಅಧಿಕೃತವಾಗಿ ಘೋಷಿಸಲಾಯಿತು, ಜೊತೆಗೆ ವಿಜಯ್ ಸೇತುಪತಿ ಅವರೊಂದಿಗಿನ ಘರ್ಷಣೆಯ ಸುಳಿವು ನೀಡುವ ಪೋಸ್ಟರ್ ಸಹ ರಿಲೀಸ್ ಮಾಡಲಾಗಿದೆ. ಕೈಯಲ್ಲಿ ರಕ್ತಸಿಕ್ತ ಮಚ್ಚು ಹಿಡಿದ ವಿಜಯ್ ಸೇತುಪತಿ ಉಗ್ರ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಮಾಸ್ ಆ್ಯಕ್ಷನ್ ಕಥಾಹಂದರ ಹೊಂದಿರುವ ಸಿನಿಮಾದಲ್ಲಿ ದೊಡ್ಡ ತಾರಾಬಳಗವಿದೆ. ಸಂಯುಕ್ತ ನಾಯಕಿಯಾಗಿ ನಟಿಸುತ್ತಿದ್ದು, ಬ್ರಹ್ಮಾನಂದ ಹಾಗೂ ವಿಟಿವಿ ಗಣೇಶ್ ಕೂಡ ತಾರಾಬಳಗದಲ್ಲಿದ್ದಾರೆ.
ಜಡೇಶಾ ಕೆ ಹಂಪಿ ನಿರ್ದೇಶನದ ವಿಜಯ್ ಕುಮಾರ್ ನಟನೆಯ ಲ್ಯಾಂಡ್‌ಲಾರ್ಡ್ ಚಿತ್ರ ಜನವರಿ 23 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುವ ಮೊದಲು ಈ ಘೋಷಣೆ ಮಾಡಲಾಗಿದೆ. ಈ ಸಿನಿಮಾದಲ್ಲಿ ರಾಜ್ ಬಿ ಶೆಟ್ಟಿ ಕೂಡ ನೆಗೆಟಿವ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ವೀರ ಸಿಂಹ ರೆಡ್ಡಿ (2023) ಚಿತ್ರದ ಮೂಲಕ ತೆಲುಗು ಚಿತ್ರಕ್ಕೆ ಪಾದಾರ್ಪಣೆ ಮಾಡಿದ ನಂತರ, ವಿಜಯ್ ಕುಮಾರ್ ತಮ್ಮ ತಮಿಳು ಚೊಚ್ಚಲ ಚಿತ್ರ ಮೂಕುತಿ ಅಮ್ಮನ್ 2 ಚಿತ್ರೀಕರಣವನ್ನು ಸಹ ಪೂರ್ಣಗೊಳಿಸಿದ್ದಾರೆ. ನಯನತಾರಾ ಜೊತೆ ವಿಜಯ್ ಕುಮಾರ್ ಅಭಿನಯಿಸಿದ್ದಾರೆ.
ಸ್ಲಮ್ ಡಾಗ್ ತೆಲುಗು, ತಮಿಳು, ಕನ್ನಡ, ಮಲಯಾಳಂ ಮತ್ತು ಹಿಂದಿಯಲ್ಲಿ ಬಿಡುಗಡೆಯಾಗಲಿದ್ದು, ಈ ಚಿತ್ರದ ಮೂಲಕ, ವಿಜಯ್ ಕುಮಾರ್ ಪ್ಯಾನ್-ಇಂಡಿಯಾ ಸಿನಿಮಾಗೆ ಕಾಲಿಡುತ್ತಿದ್ದಾರೆ. ಅರ್ಜುನ್ ರೆಡ್ಡಿ ಮತ್ತು ಅನಿಮಲ್ ಚಿತ್ರಗಳ ಸಂಗೀತಕ್ಕೆ ಹೆಸರುವಾಸಿಯಾದ ರಾಷ್ಟ್ರೀಯ ಪ್ರಶಸ್ತಿ ವಿಜೇತ ಹರ್ಷವರ್ಧನ್ ರಾಮೇಶ್ವರ್ ಸಂಗೀತ ಸಂಯೋಜಿಸಿದ್ದಾರೆ.