ಸ್ಯಾಂಡಲ್ ವುಡ್ ಗೆ ಎಂಟ್ರಿಯಾದ ಧ್ಯಾನ್  
ಸಿನಿಮಾ ಸುದ್ದಿ

ಸಿ ಪಿ ಯೋಗೇಶ್ವರ್ ಪುತ್ರ ಧ್ಯಾನ್ ಹೀರೋ ಆಗಿ ಸ್ಯಾಂಡಲ್ ವುಡ್ ಎಂಟ್ರಿ: ಚಿತ್ರಕ್ಕೆ ಕ್ಲಾಪ್ ಮಾಡಿದ CM ಡಿ ಕೆ ಶಿವಕುಮಾರ್

ಈ ಎರಡೂ ಬಹುನಿರೀಕ್ಷಿತ ಚಿತ್ರಗಳ ಜಂಟಿ ಮುಹೂರ್ತ ಸಮಾರಂಭವು ಇಂದು ಭಾನುವಾರ ಅತ್ಯಂತ ಅದ್ದೂರಿಯಾಗಿ ನೆರವೇರಿತು.

ಚನ್ನಪಟ್ಟಣ ಕ್ಷೇತ್ರದ ಶಾಸಕ ಸಿ ಪಿ ಯೋಗೇಶ್ವರ್‌ ಪುತ್ರ ಧ್ಯಾನ್ ಸ್ಯಾಂಡಲ್‌ವುಡ್‌ ಗೆ ಹೊಸ ಹೀರೋ ಆಗಿ ಎಂಟ್ರಿಯಾಗಿದ್ದಾರೆ. ಧ್ಯಾನ್ ಅವರ ಚೊಚ್ಚಲ ಪ್ರವೇಶದಲ್ಲಿಯೇ ಒಟ್ಟೊಟ್ಟಿಗೆ ಎರಡು ಅದ್ದೂರಿ ಸಿನಿಮಾಗಳು ಘೋಷಣೆಯಾಗಿದ್ದು, ಎರಡೂ ಚಿತ್ರಗಳಲ್ಲಿ ತಂದೆ-ಮಗ ಒಟ್ಟಿಗೆ ಸ್ಕ್ರೀನ್ ಶೇರ್ ಮಾಡಲಿರುವುದು ವಿಶೇಷ.

ಸಿಎಂ ಡಿ ಕೆ ಶಿವಕುಮಾರ್ ಚಾಲನೆ

ಈ ಎರಡೂ ಬಹುನಿರೀಕ್ಷಿತ ಚಿತ್ರಗಳ ಜಂಟಿ ಮುಹೂರ್ತ ಸಮಾರಂಭವು ಇಂದು ಭಾನುವಾರ ಅತ್ಯಂತ ಅದ್ದೂರಿಯಾಗಿ ನೆರವೇರಿತು. ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಆಗಮಿಸಿ ಚಿತ್ರದ ಮುುಹೂರ್ತಕ್ಕೆ ಚಾಲನೆ ನೀಡಿ ಹೀರೋ ಧ್ಯಾನ್ ಗೆ ಶುಭ ಹಾರೈಸಿದರು. ಕೇಂದ್ರ ಸಚಿವರಾದ ವಿ. ಸೋಮಣ್ಣ ಸೇರಿದಂತೆ ರಾಜಕೀಯ ಹಾಗೂ ಚಿತ್ರರಂಗದ ಹಲವು ಗಣ್ಯರು, ಹಿತೈಷಿಗಳು ಮುಖ್ಯ ಅತಿಥಿಗಳಾಗಿ ಆಗಮಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದರು.

ಸಿನಿಮಾ ಮುಹೂರ್ತ

ಧ್ಯಾನ್‌ ಸಿನಿಮಾಗೆ ನಾಗಣ್ಣ ನಿರ್ದೇಶನ

ಪಿ.ಎಂ.ಜಿ ಫಿಲಂ ಪ್ರೊಡಕ್ಷನ್ ಪ್ರೈ. ಲಿ. ಸಂಸ್ಥೆಯ ಬ್ಯಾನರ್ ಅಡಿಯಲ್ಲಿ ಧ್ಯಾನ್ ಯೋಗೇಶ್ವರ್ ಅವರನ್ನು ನಾಯಕನನ್ನಾಗಿ ಪರಿಚಯಿಸಲಾಗುತ್ತಿದೆ. ಹಿರಿಯ ನಿರ್ದೇಶಕ ನಾಗಣ್ಣ ಆ್ಯಕ್ಷನ್ ಕಟ್ ಹೇಳಲಿರುವ ಈ ಚಿತ್ರಕ್ಕೆ 'ಕರ್ಣಾಟಬಲಂ ಅಜೇಯಂ' ಎಂದು ಹೆಸರಿಡಲಾಗಿದೆ. ಈ ಚಿತ್ರದ ಮೂಲಕ ಸಿ. ಪಿ. ಯೋಗೇಶ್ವರ್ ಅವರು ಸುಮಾರು 25 ವರ್ಷಗಳ ಸುದೀರ್ಘ ಬಿಡುವಿನ ಬಳಿಕ ಮತ್ತೆ ಬಣ್ಣದ ಪ್ರಪಂಚಕ್ಕೆ ಮರಳುತ್ತಿರುವುದು ವಿಶೇಷ. ಚಿತ್ರದಲ್ಲಿ ಧ್ಯಾನ್ ಜೊತೆಗೆ ಯೋಗೇಶ್ವರ್ ಕೂಡ ಪ್ರಮುಖ ಪಾತ್ರದಲ್ಲಿದ್ದು, ಮಿಸ್ ಯೂನಿವರ್ಸ್ ಇಂಡಿಯಾ ಮಣಿಕ ವಿಶ್ವಕರ್ಮ, ಮಿಸ್ ಯೂನಿವರ್ಸ್ ಇಂಡಿಯಾ ರನ್ನರ್ ಅಪ್ ರೇಖಾ ಪಾಂಡೆ ಹಾಗೂ ದಕ್ಷಿಣ ಭಾರತದ ಖ್ಯಾತ ನಟ ಜಗಪತಿ ಬಾಬು ಪ್ರಮುಖ ತಾರಾಗಣದಲ್ಲಿದ್ದಾರೆ.

‘ಸೈನಿಕ’ ಸೀಕ್ವೆಲ್

ಸಿ. ಪಿ. ಯೋಗೇಶ್ವರ್ ಅವರ ಹೋಮ್ ಬ್ಯಾನರ್ 'ರಾಜಯೋಗಿ ಫಿಲಂಸ್' ಮೂಲಕ 25 ವರ್ಷಗಳ ಹಿಂದೆ ತೆರೆಕಂಡು ಸೂಪರ್ ಹಿಟ್ ಆಗಿದ್ದ 'ಸೈನಿಕ' ಚಿತ್ರದ ಮುಂದುವರಿದ ಭಾಗ 'ಸೈನಿಕ 2' ಚಿತ್ರವನ್ನೂ ಘೋಷಣೆ ಮಾಡಲಾಗಿದೆ. ಈ ಚಿತ್ರವನ್ನು ಪುನೀತ್ ರುದ್ರನಾಗ್ ನಿರ್ದೇಶಿಸಲಿದ್ದು, ಸಿ. ಪಿ. ಯೋಗೇಶ್ವರ್ ಹಾಗೂ ಪುತ್ರ ಧ್ಯಾನ್ ಇಬ್ಬರೂ ಪ್ರಮುಖ ಪಾತ್ರಗಳಲ್ಲಿ ಬಣ್ಣ ಹಚ್ಚಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಶ್ನೆಪತ್ರಿಕೆ ಸೋರಿಕೆ,'ಚಂದಾ ಚೋರಿ' ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ; 'ವಂದೇ ಮಾತರಂ'ನ ಎರಡು ಪ್ಯಾರಾ ಮಾತ್ರ ಹಾಡಲು ನಿರ್ಣಯ!

illegal gold mine: ಮಧ್ಯ ಆಫ್ರಿಕಾದಲ್ಲಿ ಭಯಾನಕ ದುರಂತ, ಚಿನ್ನದ ಗಣಿಯಲ್ಲಿ ಕುಸಿತ,100 ಮಂದಿ ದುರ್ಮರಣ! Video

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ರೋಚಕ ಪಂದ್ಯದಲ್ಲಿ ಭಾರತ 5-3 ಗೋಲುಗಳಿಂದ ಪಾಕಿಸ್ತಾನವನ್ನು ಸೋಲಿಸಿ ವಿಶ್ವಕಪ್‌ನಿಂದ ಹೊರದೂಡಿದೆ!

ಬಾಲಿವುಡ್ ನಟ ಗೋವಿಂದಾ ದಾಂಪತ್ಯ ಕಿತ್ತಾಟದಲ್ಲಿ ಸ್ಫೋಟಕ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ಪತ್ನಿ ಸುನೀತಾ ಅಹುಜಾ!