ಮಾ ಇಂಟಿ ಬಂಗಾರಂ ಚಿತ್ರದಲ್ಲಿ ನಟಿ ಸಮಂತಾ 
ಸಿನಿಮಾ ಸುದ್ದಿ

ಒಟಿಟಿಗೆ ಬರಲು ಸಮಂತಾ ರುತ್ ಪ್ರಭು ನಟನೆಯ 'ಮಾ ಇಂಟಿ ಬಂಗಾರಂ' ಸಿದ್ಧ; ಜುಲೈ 17 ರಂದು ಪ್ರೀಮಿಯರ್!

ಈ ಚಿತ್ರದಲ್ಲಿ ಗೌತಮಿ, ಮಂಜುಷಾ ಮತ್ತು ದಿಗಂತ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಕಥೆಯನ್ನು ರಾಜ್ ನಿಡಿಮೋರು ಬರೆದಿದ್ದರೆ, ಸಂತೋಷ್ ನಾರಾಯಣನ್ ಸಂಗೀತ ಸಂಯೋಜಿಸಿದ್ದಾರೆ.

ಚೆನ್ನೈ: ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ಸುಮಾರು ಒಂದು ತಿಂಗಳ ನಂತರ ನಟಿ ಸಮಂತಾ ರುತ್ ಪ್ರಭು ನಟನೆಯ ಆ್ಯಕ್ಷನ್ ಡ್ರಾಮಾ 'ಮಾ ಇಂಟಿ ಬಂಗಾರಂ' ಚಿತ್ರ ಒಟಿಟಿ ವೇದಿಕೆಗೆ ಬರಲು ಸಿದ್ಧವಾಗಿದ್ದು, ಜುಲೈ 17 ರಂದು ಜಿಯೋ ಹಾಟ್‌ಸ್ಟಾರ್‌ನಲ್ಲಿ ಬಿಡುಗಡೆಯಾಗಲಿದೆ.

ಬಿವಿ ನಂದಿನಿ ರೆಡ್ಡಿ ನಿರ್ದೇಶನದ ಈ ಚಿತ್ರವು ಜೂನ್ 19 ರಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ತೆರೆಕಂಡಿತು. ತಮಿಳಿನಲ್ಲಿ 'ಎಂಗಲ್ ತಂಗಂ' ಎಂಬ ಹೆಸರಿನಲ್ಲಿ ಬಿಡುಗಡೆಯಾಯಿತು. ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ ಸಮಂತಾ, ತಮ್ಮ ನಿರ್ಮಾಣ ಬ್ಯಾನರ್ ಅಡಿಯಲ್ಲಿಯೇ ಚಿತ್ರ ನಿರ್ಮಿಸಿದರು.

ಈ ಚಿತ್ರದಲ್ಲಿ ಗೌತಮಿ, ಮಂಜುಷಾ ಮತ್ತು ದಿಗಂತ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಕಥೆಯನ್ನು ರಾಜ್ ನಿಡಿಮೋರು ಬರೆದಿದ್ದರೆ, ಸಂತೋಷ್ ನಾರಾಯಣನ್ ಸಂಗೀತ ಸಂಯೋಜಿಸಿದ್ದಾರೆ.

ಮಯೋಸಿಟಿಸ್ ರೋಗದಿಂದಾಗಿ ನಟನೆಯಿಂದ ಬ್ರೇಕ್ ತೆಗೆದುಕೊಂಡಿದ್ದ ಸಮಂತಾ ಅವರು 'ಮಾ ಇಂಟಿ ಬಂಗಾರಂ' ಚಿತ್ರದ ಮೂಲಕ ಬೆಳ್ಳಿಪರದೆಯಲ್ಲಿ ಕಾಣಿಸಿಕೊಂಡರು.

ಚಿತ್ರದ ಬಗ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಸಮಂತಾ ಅವರ ನಟನೆಯನ್ನು ಪ್ರೇಕ್ಷಕರು ಮೆಚ್ಚಿಕೊಂಡರು.

ನಿರ್ಮಾಪಕರ ಪ್ರಕಾರ, ಈ ಚಿತ್ರ ಬಿಡುಗಡೆಯಾದ 22 ದಿನಗಳಲ್ಲಿ ವಿಶ್ವದಾದ್ಯಂತ ₹100 ಕೋಟಿಗಳಿಗೂ ಹೆಚ್ಚು ಗಳಿಸಿದೆ. ಬಿಡುಗಡೆಯಾದ ಮೊದಲ ದಿನವೇ ಸುಮಾರು ₹13 ಕೋಟಿ ಗಳಿಕೆ ಕಂಡಿತ್ತು.

ಈ ಚಿತ್ರವು ಇಲ್ಲಿಯವರೆಗೆ ಅತಿ ಹೆಚ್ಚು ಗಳಿಕೆ ಮಾಡಿದ ಮಹಿಳಾ ಪ್ರಧಾನ ತೆಲುಗು ಚಿತ್ರವಾಗಿ ಹೊರಹೊಮ್ಮಿದೆ ಮತ್ತು OTT ವೇದಿಕೆಯಲ್ಲಿ ತನ್ನ ಬಲವಾದ ಓಟವನ್ನು ಮುಂದುವರಿಸುವ ನಿರೀಕ್ಷೆಯಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!

Nepal floods: ನೇಪಾಳ ಪ್ರವಾಹದ ಭೀಕರತೆ, 150 ಕಿ.ಮೀ ದೂರದ ಉತ್ತರ ಪ್ರದೇಶಕ್ಕೆ ಕೊಚ್ಚಿಕೊಂಡು ಬಂದ ಶವಗಳು!

Nepal Floods: ‘ಸಾವಿನ ಸಂಖ್ಯೆ ಊಹೆಗೂ ನಿಲುಕದಷ್ಟು ಏರಬಹುದು’; ಚೀನಾ ನಡೆ ಕುರಿತು ನೇಪಾಳ ಮಾಜಿ ಸಚಿವರ ಅನುಮಾನ!

RSS ಪಥಸಂಚಲನದಲ್ಲಿ ಭಾಗಿ: ಯಾದಗಿರಿಯ ಇಬ್ಬರು ಸರ್ಕಾರಿ ಶಿಕ್ಷಕರ ಅಮಾನತು

ಮಣಿಪುರದಲ್ಲಿ ಉಗ್ರರ ಅಟ್ಟಹಾಸ: ನಾಲ್ವರ ಸಾವು, ಒಬ್ಬ ನಾಪತ್ತೆ