ಜನನಾಯಗನ್ ಚಿತ್ರದ ದೃಶ್ಯ online desk
ಸಿನಿಮಾ ಸುದ್ದಿ

ತಮಿಳುನಾಡು ಸಿಎಂ ವಿಜಯ್ ಅಭಿನಯದ ಕೊನೆಯ ಸಿನಿಮಾ 'ಜನನಾಯಗನ್' ಬಿಡುಗಡೆಗೆ ಕೊನೆಗೂ‌ ಮುಹೂರ್ತ ಫಿಕ್ಸ್!

ಚಿತ್ರದ ನಿರ್ಮಾಪಕರಾದ ಕೆವಿಎನ್ ಪ್ರೊಡಕ್ಷನ್ಸ್ ಬುಧವಾರ 'ಎಕ್ಸ್' ನಲ್ಲಿ 'ಜನನಾಯಗನ್' ಬಿಡುಗಡೆ ದಿನಾಂಕವನ್ನು ಅಧಿಕೃತವಾಗಿ ಘೋಷಿಸಿದೆ.

ಚೆನ್ನೈ: ತಿಂಗಳುಗಳ ಕಾಲ ಕಾನೂನು ಹೋರಾಟ, ಆನ್‌ಲೈನ್ ನಲ್ಲಿ ಸೋರಿಕೆ ಮತ್ತು ಸೆನ್ಸಾರ್ ಮಂಡಳಿಯೊಂದಿಗಿನ ಭಾರಿ ತಿಕ್ಕಾಟದ ನಂತರ, ತಮಿಳುನಾಡು ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್ ಅಭಿನಯದ ಕೊನೆಯ ಸಿನಿಮಾ 'ಜನ ನಾಯಗನ್' ಬಿಡುಗಡೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದ್ದು, ಜುಲೈ 23 ರಂದು ವಿಶ್ವದಾದ್ಯಂತ ಗ್ರ್ಯಾಂಡ್‌ ರಿಲೀಸ್ ಆಗಲಿದೆ.

ಚಿತ್ರದ ನಿರ್ಮಾಪಕರಾದ ಕೆವಿಎನ್ ಪ್ರೊಡಕ್ಷನ್ಸ್ ಬುಧವಾರ 'ಎಕ್ಸ್' ನಲ್ಲಿ 'ಜನನಾಯಗನ್' ಬಿಡುಗಡೆ ದಿನಾಂಕವನ್ನು ಅಧಿಕೃತವಾಗಿ ಘೋಷಿಸಿದೆ. ಈ ಮೂಲಕ ಅಭಿಮಾನಿಗಳ ತಿಂಗಳುಗಳ ಕಾಯುವಿಕೆಗೆ ಚಿತ್ರತಂಡ ಅಧಿಕೃತವಾಗಿ ತೆರೆ ಎಳೆದಿದೆ.

"ಬೆಂಕಿಯಿಂದ ಪರೀಕ್ಷಿಸಲ್ಪಟ್ಟಿದೆ. ಕಾಲದಿಂದ ರೂಪಿಸಲ್ಪಟ್ಟಿದೆ. ಇತಿಹಾಸಕ್ಕಾಗಿ ನಿರ್ಮಿಸಲಾಗಿದೆ. ಯುದ್ಧ ಕಠಿಣವಾದಷ್ಟೂ ಗೆಲುವು ಜೋರಾಗಿರುತ್ತದೆ. #JanaNayaganFromJuly23, #JanaNayakuduFromJuly23 ಮತ್ತು #JanNetaFromJuly23" ಎಂದು ಕೆವಿಎನ್ ಪ್ರೊಡಕ್ಷನ್ಸ್ ಪೋಸ್ಟ್ ಮಾಡಿದೆ.

ದಳಪತಿ ವಿಜಯ್ ನಟಿಸಿರುವ 'ಜನ ನಾಯಗನ್' ಚಿತ್ರದ ನಿರ್ಮಾಪಕರು, ಈ ಚಿತ್ರವು ಈ ತಿಂಗಳು 23 ರಂದು ವಿಶ್ವಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ಅಧಿಕೃತವಾಗಿ ಘೋಷಿಸಿದ್ದಾರೆ.

ಬೆಂಗಳೂರು ಮೂಲದ ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಿಸಿದ 'ಜನ ನಾಯಗನ್' ಚಿತ್ರಕ್ಕೆ ಇತ್ತೀಚೆಗೆ "ಎ" ಪ್ರಮಾಣಪತ್ರ ನೀಡಲಾಗಿತ್ತು.

ಈ ಚಿತ್ರವನ್ನು ಚಿತ್ರವನ್ನು ಖ್ಯಾತ ನಿರ್ದೇಶಕ ಎಚ್.ವಿನೋತ್ ನಿರ್ದೇಶಿಸಿದ್ದು, ಆ್ಯಕ್ಷನ್, ಭಾವನಾತ್ಮಕ ಕಥಾಹಂದರ ಹಾಗೂ ಸಾಮಾಜಿಕ ಸಂದೇಶದೊಂದಿಗೆ ಸಿನಿಮಾ ಮೂಡಿಬಂದಿದೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಪೋಸ್ಟರ್, ಟೀಸರ್ ಮತ್ತು ಹಾಡುಗಳು ಸಿನಿಪ್ರಿಯರ ಗಮನ ಸೆಳೆದಿವೆ.

ರಾಜಕೀಯ ಪ್ರವೇಶದ ಬಳಿಕ ವಿಜಯ್ ಅವರ ಕೊನೆಯ ಸಿನಿಮಾ ಎಂಬ ಕಾರಣಕ್ಕೆ ‘ಜನನಾಯಗನ್’ ಚಿತ್ರದ ಮೇಲಿನ ನಿರೀಕ್ಷೆ ಮತ್ತಷ್ಟು ಹೆಚ್ಚಿದೆ. ಚಿತ್ರದಲ್ಲಿ ವಿಜಯ್‌ಗೆ ನಾಯಕಿಯಾಗಿ ಪೂಜಾ ಹೆಗ್ಡೆ ನಟಿಸಿದ್ದು, ಬಾಲಿವುಡ್ ನಟ ಬಾಬಿ ಡಿಯೋಲ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಜೊತೆಗೆ ಗೌತಮ್ ವಾಸುದೇವ್ ಮೆನನ್, ಪ್ರಕಾಶ್ ರಾಜ್, ಮಮಿತಾ ಬೈಜು ಸೇರಿದಂತೆ ಹಲವು ಖ್ಯಾತ ಕಲಾವಿದರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳದಲ್ಲಿ ಭೀಕರ ಪ್ರವಾಹ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇಶಿಯರು ಸೇರಿ 4,000ಕ್ಕೂ ಹೆಚ್ಚು ಮಂದಿ ಇನ್ನೂ ನಾಪತ್ತೆ!

ನೆರೆ ಸಂತ್ರಸ್ತರಿಗೆ ನೆರವು ಹೊತ್ತು ಹೋದವರಿಗೆ ಶಾಕ್: 'ಇಲ್ಲೇ ಖರೀದಿಸಿ' ಎಂದ ನೇಪಾಳ ಅಧಿಕಾರಿಗಳು! ಆಗಿದ್ದೇನು?

Hit And Run: ಪಾದಚಾರಿಗೂ ಬದುಕಿ ರಸ್ತೆ ದಾಟುವ ಹಕ್ಕಿದೆ: ದೆಹಲಿ ಕೋರ್ಟ್

ರಾಹುಲ್ ಗಾಂಧಿಯನ್ನು ಪ್ರಧಾನಿ ಅಭ್ಯರ್ಥಿಯಾಗಿ ಒಪ್ಪದಿದ್ದರೆ TVK ಸಂಪುಟದಿಂದ ಕಾಂಗ್ರೆಸ್ ಹೊರಬರಲಿದೆ: ಸಚಿವ

ಇಸ್ಲಾಂ ಧರ್ಮವೇ ಶ್ರೇಷ್ಠ: ಸಿಎಂ ಡಿಕೆಶಿಯ 6ನೇ ಗ್ಯಾರಂಟಿ- ಹಿಂದೂಗಳಿಗೆ ‘ಸುನ್ನತ್ ಗ್ಯಾರಂಟಿ' ರಾಯರೆಡ್ಡಿ ಕ್ಷಮೆಯಾಚನೆಗೆ ಬಿಜೆಪಿ ಒತ್ತಾಯ!