ರಾಮ್ ಚರಣ್ 
ಸಿನಿಮಾ ಸುದ್ದಿ

ಕೊಯಮತ್ತೂರಿನಲ್ಲಿ ನಟ ರಾಮ್ ಚರಣ್ ಗೆ ಸರ್ಜರಿ: ಮೆಗಾ ಪವರ್ ಸ್ಟಾರ್ ಗೆ ಏನಾಯ್ತು ?

ಮಗನ ಶಸ್ತ್ರಚಿಕಿತ್ಸೆಯ ಸಮಯದಲ್ಲಿ ತಂದೆ ಮೆಗಾಸ್ಟಾರ್ ಚಿರಂಜೀವಿ, ತಾಯಿ ಸುರೇಖಾ, ಪತ್ನಿ ಉಪಾಸನಾ ಹಾಗೂ ಕುಟುಂಬದ ಇತರ ಸದಸ್ಯರು ಕೊಯಮತ್ತೂರಿನ ಆಸ್ಪತ್ರೆಯಲ್ಲಿ ರಾಮ್ ಚರಣ್ ಜೊತೆಯಾಗಲಿದ್ದಾರೆ.

ಹೈದರಾಬಾದ್: ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಅವರು ತಮ್ಮ ಹಿಂದಿನ ಸಿನಿಮಾ ‘ಪೆದ್ದಿ’ ಶೂಟಿಂಗ್ ವೇಳೆ ಸಂಭವಿಸಿದ ಮಣಿಕಟ್ಟಿನ ಗಾಯಕ್ಕೆ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ .

ಚಿಕಿತ್ಸೆಗಾಗಿ ಅವರು ಹೈದರಾಬಾದ್‌ನ ಬೇಗಂಪೇಟೆ ವಿಮಾನ ನಿಲ್ದಾಣದಿಂದ ಕೊಯಮತ್ತೂರಿಗೆ ತೆರಳಿದ್ದಾರೆ. ಅಲ್ಲಿನ ಪ್ರಸಿದ್ಧ ಗಂಗಾ ಆಸ್ಪತ್ರೆಯಲ್ಲಿ ನಾಳೆ ಈ ಶಸ್ತ್ರಚಿಕಿತ್ಸೆ ನಡೆಯಲಿದ್ದು, ಕೈ ಮತ್ತು ಮಣಿಕಟ್ಟು ಶಸ್ತ್ರಚಿಕಿತ್ಸಾ ತಜ್ಞರು ಈ ಪ್ರಕ್ರಿಯೆಯನ್ನು ನಡೆಸಿಕೊಡಲಿದ್ದಾರೆ.

ಮಗನ ಶಸ್ತ್ರಚಿಕಿತ್ಸೆಯ ಸಮಯದಲ್ಲಿ ತಂದೆ ಮೆಗಾಸ್ಟಾರ್ ಚಿರಂಜೀವಿ, ತಾಯಿ ಸುರೇಖಾ, ಪತ್ನಿ ಉಪಾಸನಾ ಹಾಗೂ ಕುಟುಂಬದ ಇತರ ಸದಸ್ಯರು ಕೊಯಮತ್ತೂರಿನ ಆಸ್ಪತ್ರೆಯಲ್ಲಿ ರಾಮ್ ಚರಣ್ ಜೊತೆಯಾಗಲಿದ್ದಾರೆ.

‘ಪೆದ್ದಿ’ ಚಿತ್ರದ ಚಿತ್ರೀಕರಣದ ಅವಧಿಯಲ್ಲಿ ರಾಮ್ ಚರಣ್ ಎರಡು ಪ್ರಮುಖ ಗಾಯಗಳಿಗೆ ತುತ್ತಾಗಿದ್ದರು. ಈ ವರ್ಷದ ಆರಂಭದಲ್ಲಿ ಅವರಿಗೆ ಹಣೆ ಭಾಗಕ್ಕೆ ತೀವ್ರ ಗಾಯವಾಗಿದ್ದು, ಹೈದರಾಬಾದ್‌ನ ಅಪೋಲೋ ಆಸ್ಪತ್ರೆಯಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದರು.

ಅದರ ಬೆನ್ನಲ್ಲೇ ಶೂಟಿಂಗ್ ವೇಳೆ ಮಣಿಕಟ್ಟಿನ ತೀವ್ರವಾದ ಉಳುಕಿನ ಸಮಸ್ಯೆಯೂ ಅವರನ್ನು ಬಾಧಿಸಿತ್ತು. ಈ ಸಮಸ್ಯೆಗೆ ಶಸ್ತ್ರಚಿಕಿತ್ಸೆಯೇ ಶಾಶ್ವತ ಪರಿಹಾರ ಎಂದು ಹೈದರಾಬಾದ್ ವೈದ್ಯರು ಸಲಹೆ ನೀಡಿದ್ದರು. ಹೀಗಾಗಿ ಹಲವು ತಜ್ಞ ವೈದ್ಯರೊಂದಿಗೆ ಸಮಾಲೋಚನೆ ನಡೆಸಿದ ನಂತರ, ಕೊಯಮತ್ತೂರಿನ ಗಂಗಾ ಆಸ್ಪತ್ರೆಯಲ್ಲೇ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ನಟ ನಿರ್ಧರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMC ಹೆಸರು, ಚಿಹ್ನೆ ಮುಟ್ಟುಗೋಲು: 'Vote chori, govt chori ಆಯ್ತು, ಈಗ ಪಾರ್ಟಿ ಚೋರಿ': ಚುನಾವಣಾ ಆಯೋಗದ ವಿರುದ್ಧ ರಾಹುಲ್ ಗಾಂಧಿ ಕಿಡಿ

ದಿಗ್ಬಂಧನ ಉಲ್ಲಂಘಿಸಿದ ಟ್ಯಾಂಕರ್‌ ಮೇಲೆ Iran ಭೀಕರ ದಾಳಿ: ಸಮುದ್ರ ಮಧ್ಯದಲ್ಲೇ ಹೊತ್ತಿ ಉರಿದ ಹಡಗು, Hormuz ಜಲಸಂಧಿಯಲ್ಲಿ ಹೆಚ್ಚಿದ ಉದ್ವಿಗ್ನತೆ..!

TMC ಪಕ್ಷದ ಹೆಸರು, ಚಿಹ್ನೆ ಫ್ರೀಜ್ ಮಾಡಿದ ಚುನಾವಣಾ ಆಯೋಗ: ಉಪಚುನಾವಣೆ ಹೊತ್ತಲ್ಲೇ ದೀದಿಗೆ ಶಾಕ್‌, ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಭಾರಿ ಸಂಚಲನ..!

ಸ್ಥಳೀಯ ಚುನಾವಣೆಗಳಿಗೆ ಕಾಂಗ್ರೆಸ್‌ ರಣತಂತ್ರ: ಜಿಲ್ಲಾಧ್ಯಕ್ಷರ ಕಾರ್ಯಕ್ಷಮತೆ ಮೇಲೆ ಹೈಕಮಾಂಡ್‌ ಕಣ್ಣು, ಬೂತ್‌ನಿಂದ ಜಿಲ್ಲಾ ಮಟ್ಟದವರೆಗೆ ಸಂಘಟನೆಗೆ ಸೂಚನೆ..!

ED ದಾಳಿ ಬೆನ್ನಲ್ಲೇ ಸತೀಶ್‌ ಜಾರಕಿಹೊಳಿ ಬೆನ್ನಿಗೆ ನಿಂತ ಎಸ್‌ಟಿ ಸಮುದಾಯ: ಬೃಹತ್‌ ಸಮಾವೇಶಕ್ಕೆ ಮುಂದು, ಶಕ್ತಿ ಪ್ರದರ್ಶನಕ್ಕೆ ವೇದಿಕೆ ಸಜ್ಜು..!