ಧನ್ವೀರ್ 
ಸಿನಿಮಾ ಸುದ್ದಿ

ವದಂತಿಗಳಿಗೆ ತೆರೆ: ಜೈಲಲ್ಲಿ ನಟ ದರ್ಶನ್ ಭೇಟಿಯಾದ ಧನ್ವೀರ್

ದರ್ಶನ್ ಅವರನ್ನು ಭೇಟಿಯಾಗಲು ಧನ್ವೀರ್ ಗೌಡ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿದ್ದು, ಈ ಮೂಲಕ ಇಬ್ಬರ ನಡುವಿನ ಸಂಬಂಧದಲ್ಲಿ ಯಾವುದೇ ವೈಮನಸ್ಸಿಲ್ಲ ಎಂಬ ಸಂದೇಶವನ್ನು ಪರೋಕ್ಷವಾಗಿ ರವಾನಿಸಿದಂತಾಗಿದೆ.

ಬೆಂಗಳೂರು: ನಟ ದರ್ಶನ್ ಮತ್ತು ನಟ ಧನ್ವೀರ್ ಗೌಡ ನಡುವಿನ ಸ್ನೇಹದಲ್ಲಿ ಬಿರುಕು ಮೂಡಿದೆ ಎಂಬ ವದಂತಿಗಳಿಗೆ ಇದೀಗ ತೆರೆ ಬಿದ್ದಿದೆ. ಇತ್ತೀಚಿನ ದಿನಗಳಲ್ಲಿ ಇಬ್ಬರ ನಡುವೆ ಭಿನ್ನಾಭಿಪ್ರಾಯ ಉಂಟಾಗಿದೆ ಎಂಬ ಸುದ್ದಿ ಗಾಂಧಿನಗರದಲ್ಲಿ ಹರಿದಾಡುತ್ತಿದ್ದೂ, ಮಂಗಳವಾರ (ಜು. 28) ನಡೆದ ಬೆಳವಣಿಗೆ ಆ ಎಲ್ಲ ಊಹಾಪೋಹಗಳಿಗೆ ಹೊಸ ತಿರುವು ನೀಡಿದೆ.

ದರ್ಶನ್ ಅವರನ್ನು ಭೇಟಿಯಾಗಲು ಧನ್ವೀರ್ ಗೌಡ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿದ್ದು, ಈ ಮೂಲಕ ಇಬ್ಬರ ನಡುವಿನ ಸಂಬಂಧದಲ್ಲಿ ಯಾವುದೇ ವೈಮನಸ್ಸಿಲ್ಲ ಎಂಬ ಸಂದೇಶವನ್ನು ಪರೋಕ್ಷವಾಗಿ ರವಾನಿಸಿದಂತಾಗಿದೆ.

ದರ್ಶನ್ ಅವರ ಕಷ್ಟದ ಸಮಯದಲ್ಲೂ ಧನ್ವೀರ್ ಬೆಂಬಲವಾಗಿ ನಿಂತಿದ್ದರು. ಆದರೆ ಇತ್ತೀಚೆಗೆ ಇಬ್ಬರ ನಡುವೆ ಅಂತರ ಉಂಟಾಗಿದೆ ಎಂಬ ಮಾತುಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಧನ್ವೀರ್ ಅವರ ಭೇಟಿಗೆ ಅಭಿಮಾನಿಗಳ ವಲಯದಲ್ಲಿ ಹೆಚ್ಚಿನ ಮಹತ್ವ ಸಿಕ್ಕಿದೆ.

ಧನ್ವೀರ್ ಪರಪ್ಪನ ಅಗ್ರಹಾರಕ್ಕೆ ಆಗಮಿಸಿ ದರ್ಶನ್ ಅವರನ್ನು ಭೇಟಿಯಾದ ದೃಶ್ಯಗಳ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಈ ಬೆಳವಣಿಗೆಯನ್ನು ಸ್ವಾಗತಿಸಿರುವ ಅಭಿಮಾನಿಗಳು, ದರ್ಶನ್ ಮತ್ತು ಧನ್ವೀರ್ ನಡುವಿನ ಸ್ನೇಹ ಹಾಗೆಯೇ ಮುಂದುವರಿದಿದೆ ಎಂದು ಸಂತಸ ವ್ಯಕ್ತಪಡಿಸುತ್ತಿದ್ದಾರೆ.

ಇಬ್ಬರು ನಟರು ಈ ಕುರಿತು ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ಹೀಗಾಗಿ, ಇವರ ನಡುವಿನ ಸಂಬಂಧದ ಬಗ್ಗೆ ಹರಿದಾಡಿದ್ದ ವದಂತಿಗಳಿಗೆ ಈ ಭೇಟಿ ಹೊಸ ಚರ್ಚೆಗೆ ಕಾರಣವಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಜೈಲು ಪಾಲಾದ ನಂತರ, ಅವರ ಕುಟುಂಬದ ಜೊತೆ ಸದಾ ಓಡಾಡಿಕೊಂಡಿದ್ದರು ಧನ್ವೀರ್. ಒಂದು ಅರ್ಥದಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರಿಗೆ ಕಾವಲಾಗಿದ್ದರು. ಧನ್ವೀರ್ ಹೊರತಾಗಿ ವಿಜಯಲಕ್ಷ್ಮಿ ಎಲ್ಲಿಯೂ ಹೋಗುತ್ತಿರಲಿಲ್ಲ. ಜೈಲಿಗೆ ಬರಲಿ, ದೇವಸ್ಥಾನಕ್ಕೆ ಹೋಗಲಿ ವಿಜಯಲಕ್ಷ್ಮಿ ಜೊತೆ ಧನ್ವೀರ್ ಇರುತ್ತಿದ್ದರು. ಆದರೆ ಇತ್ತೀಚೆಗೆ ಒಂಟಿಯಾಗಿಯೇ ವಿಜಯಲಕ್ಷ್ಮಿ ಓಡಾಡುತ್ತಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇರಾಕ್‌ನಲ್ಲಿ ಅಮೆರಿಕ-ಸೌದಿ ಜಂಟಿ ವಾಯುದಾಳಿ: ಇರಾನ್ ಬೆಂಬಲಿತ ಉಗ್ರ ನೆಲೆಗಳು ಧ್ವಂಸ, ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ..!

ರಾಜ್ಯ ಸಚಿವ ಸಂಪುಟ ವಿಸ್ತರಣೆ: ಇಂದೇ ರಾಹುಲ್ ಗಾಂಧಿ ಒಪ್ಪಿಗೆ ಸಾಧ್ಯತೆ, ನಾಳೆ ಸಂಜೆ ನೂತನ ಸಚಿವರ ಪಟ್ಟಾಭಿಷೇಕ..?

ಪಾದಚಾರಿ ಮಾರ್ಗದಲ್ಲಿ Bescom ಅಟಾಟೋಪಕ್ಕೆ ಬ್ರೇಕ್; ಸಚಿವ ಕೃಷ್ಣ ಬೈರೇಗೌಡ ಖಡಕ್ ವಾರ್ನಿಂಗ್..!

ಕರಾವಳಿಯಲ್ಲಿ ವಿಷ ಬಿತ್ತಿದರೆ ಪರಿಣಾಮ ನೆಟ್ಟಗಿರಲ್ಲ, ಅರಬ್ಬಿ ಸಮುದ್ರದ ಮೀನುಗಳಿಗೆ ಆಹಾರವಾಗ್ತೀರಿ: ಪ್ರಕಾಶ್ ರಾಜ್‌ಗೆ ಉಡುಪಿ BJP ಶಾಸಕ ಎಚ್ಚರಿಕೆ..!

ಸುಪ್ರೀಂನ ಮಧ್ಯಂತರ ಆದೇಶ ವಿದ್ಯಾರ್ಥಿಗಳ ವಿರುದ್ಧ ದುರ್ಬಳಕೆಯಾಗುವ ಸಾಧ್ಯತೆ: 'ಕಿರುಕುಳ' ಮುಂದುವರಿದರೆ ಸರಿ ಇರಲ್ಲ- ದೀಪ್ಕೆ ವಾರ್ನಿಂಗ್!