ಕ್ರಿಸ್‌ಮಸ್ ಹಬ್ಬಕ್ಕೆ ಅಣ್ಣ ಫ್ರಮ್ ಮೆಕ್ಸಿಕೋ Online Desk
ಸಿನಿಮಾ ಸುದ್ದಿ

ಕ್ರಿಸ್‌ಮಸ್‌ಗೆ ಡಾಲಿ ನಟನೆಯ ಅಣ್ಣ ಫ್ರಮ್‌ ಮೆಕ್ಸಿಕೋ; ವರ್ಷಾಂತ್ಯಕ್ಕೆ ಬ್ಯಾಕ್ ಟು ಬ್ಯಾಕ್ ಅಬ್ಬರಿಸಲು ರೆಡಿಯಾದ ನಟರಾಕ್ಷಸ

ಬಡವ ರಾಸ್ಕಲ್ ಯಶಸ್ಸಿನ ನಂತರ ನಟ ಧನಂಜಯ್ ಹಾಗೂ ನಿರ್ದೇಶಕ ಶಂಕರ್ ಗುರು ಒಂದಾಗಿರುವ ಅಣ್ಣ ಫ್ರಮ್ ಮೆಕ್ಸಿಕೋ ಸಿನಿಮಾ ಇದೇ ವರ್ಷ ಡಿಸೆಂಬರ್ 24ರಂದು ಕ್ರಿಸ್‌ಮಸ್ ಹಬ್ಬದ ಪ್ರಯುಕ್ತ ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ಬೆಂಗಳೂರು: ಒಂದೊಂದ ಮೇಲೆ ಒಂದರಂತೆ ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ನಟರಾಕ್ಷಸ ಡಾಲಿ ಧನಂಜಯ್, ಮದರ್ ಪ್ರಾಮಿಸ್ ಯಶಸ್ಸಿನ ಬೆನ್ನಲೇ ತಮ್ಮ ಮುಂದಿನ ಸಿನಿಮಾ ಅಣ್ಣ ಫ್ರಮ್ ಮೆಕ್ಸಿಕೋ ಚಿತ್ರದ ಬಿಡುಗಡೆ ದಿನಾಂಕ ಘೋಷಣೆ ಮಾಡಿದ್ದಾರೆ. ಈ ಮೂಲಕ ಮದುವೆಯ ನಂತರದ ಸುದೀರ್ಘ ಬ್ರೇಕ್ ತರುವಾಯು ಒಂದೇ ವರ್ಷದಲ್ಲಿ ಬ್ಯಾಕ್ ಟು ಬ್ಯಾಕ್ ಸಿನಿಮಾಗಳ ಮೂಲಕ ಅಬ್ಬರಿಸಲು ಮುಂದಾಗಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ಕ್ರಿಸ್‌ಮಸ್ ಹಬ್ಬಕ್ಕೆ ಅಣ್ಣ ಫ್ರಮ್ ಮೆಕ್ಸಿಕೋ

ಬಡವ ರಾಸ್ಕಲ್ ಯಶಸ್ಸಿನ ನಂತರ ನಟ ಧನಂಜಯ್ ಹಾಗೂ ನಿರ್ದೇಶಕ ಶಂಕರ್ ಗುರು ಒಂದಾಗಿರುವ ಅಣ್ಣ ಫ್ರಮ್ ಮೆಕ್ಸಿಕೋ ಸಿನಿಮಾ ಇದೇ ವರ್ಷ ಡಿಸೆಂಬರ್ 24ರಂದು ಕ್ರಿಸ್‌ಮಸ್ ಹಬ್ಬದ ಪ್ರಯುಕ್ತ ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಆರಂಭದಲ್ಲಿ ಈ ಸಿನಿಮಾವನ್ನ ಕೇವಲ ಆಕ್ಷನ್ ಸಿನಿಮಾ ಎಂದು ಯೋಜಿಸಲಾಗಿದ್ದರೂ, ನಂತರ ಇದನ್ನು ಕಾಮಿಡಿ ಮತ್ತು ಎಮೋಷನ್ ಒಳಗೊಂಡ ಫ್ಯಾಮಿಲಿ ಎಂಟರ್‌ಟೈನರ್ ಚಿತ್ರವಾಗಿ ಮರುರೂಪಿಸಲಾಗಿದೆ.

ಮುಂದುವರೆದು, ಚಿತ್ರದಲ್ಲಿ ಧನಂಜಯ್ ಜೊತೆಗೆ ನಾಯಕಿಯಾಗಿ ರೇಷ್ಮಾ ನಾಣಯ್ಯ ನಟಿಸುತ್ತಿದ್ದು, ಪ್ರಮುಖ ಪಾತ್ರದಲ್ಲಿ ಲೂಸ್ ಮಾದ ಯೋಗಿ ಕಾಣಿಸಿಕೊಂಡಿದ್ದಾರೆ. ಜೊತೆಗೆ ತಾರಾಗಣದಲ್ಲಿ ರಂಗಾಯಣ ರಘು, ಉಮಾಶ್ರೀ, ಸಾಧು ಕೋಕಿಲ, ನಾಗಭೂಷಣ್ ಮತ್ತು ಪೂರ್ಣಚಂದ್ರ ಮೈಸೂರು ಇದ್ದಾರೆ. ಇನ್ನು, ವಾಸುಕಿ ವೈಭವ್ ಸಂಗೀತದ ಈ ಚಿತ್ರವನ್ನ ರಾಯಲ ಸ್ಟುಡಿಯೋಸ್ ಹಾಗು ಐರಾ ಫಿಲ್ಮ್ಸ್ ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ.

ಡಿಸೆಂಬರ್‌ಗೆ ಡಾಲಿ ನಟನೆಯಾ 2 ಸಿನಿಮಾ?

ಅಣ್ಣ ಫ್ರಮ್ ಮೆಕ್ಸಿಕೋ ಚಿತ್ರದೊಂದಿಗೆ ಧನಂಜಯ್ ಮತ್ತು ಡಾ. ಶಿವರಾಜ್‌ಕುಮಾರ್ ನಟನೆಯ, ಹೇಮಂತ್ ಎಂ ರಾವ್ ನಿರ್ದೇಶನದ ಮತ್ತೊಂದು ಬಹುನಿರೀಕ್ಷಿತ ಚಿತ್ರ 666 ಆಪರೇಷನ್ ಡ್ರೀಮ್ ಥಿಯೇಟರ್ ಕೂಡ ಈ ವರ್ಷದ ಕೊನೆಯಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿತ್ತು. ಆದಾಗ್ಯೂ, ಅಣ್ಣ ಫ್ರಮ್ ಮೆಕ್ಸಿಕೋ ವರ್ಷಾಂತ್ಯದ ವಿಂಡೋವನ್ನು ಆಕ್ರಮಿಸಿಕೊಂಡಿರುವುದರಿಂದ, 666 ಆಪರೇಷನ್ ಡ್ರೀಮ್ ಥಿಯೇಟರ್ ಸಿನಿಮಾ ಅದಕ್ಕೂ ಮುಂಚೆ ಬಿಡುಗಡೆಯಾಗುತ್ತದೆಯೇ ಅಥವಾ 2027 ಕ್ಕೆ ಮುಂದೂಡಲ್ಪಡುತ್ತದೆಯೇ ಎಂದು ಕಾದು ನೋಡಬೇಕಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮಹಾರಾಷ್ಟ್ರ: ಬಿವಂಡಿಯಲ್ಲಿ ಕಟ್ಟಡ ಕುಸಿತ- ಸಾವಿನ ಸಂಖ್ಯೆ ಒಂಬತ್ತಕ್ಕೆ ಏರಿಕೆ; ರಕ್ಷಣಾ ಕಾರ್ಯಾಚರಣೆಯ ವೇಳೆ NDRF ಅಧಿಕಾರಿಗೆ ಗಾಯ

Iranಗೆ ಬೆಂಬಲ ಆರೋಪ: ಭಾರತದ ಕಂಪನಿ ಸೇರಿ 6 ಸಂಸ್ಥೆಗಳ ವಿರುದ್ಧ ಅಮೆರಿಕಾ ಕಠಿಣ ಕ್ರಮ, China-Russia ಸಂಸ್ಥೆಗಳೂ Black listಗೆ..!

ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್: ಸೋಮವಾರ ಸಂಜೆ ಪ್ರಮಾಣವಚನ ಸಾಧ್ಯತೆ, 18 ಸಚಿವರ ಸೇರ್ಪಡೆ ನಿರೀಕ್ಷೆ..!

ಪ್ರಶ್ನೆಪತ್ರಿಗೆ ಲೀಕ್ ದಂಧೆಗೆ ಬಿತ್ತು ಬ್ರೇಕ್: 'ಮಕ್ಕಳ ಭವಿಷ್ಯದ ಜೊತೆ ಆಟವಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ': ಸೆಲ್ಫೀ ವಿಡಿಯೋ ಮೂಲಕ ಪ್ರಧಾನಿ ಮೋದಿ ಖಡಕ್ ಎಚ್ಚರಿಕೆ..!

ಅಂತ್ಯದತ್ತ ಸಾಗಿದ ಇಸ್ರೇಲ್-ಹಮಾಸ್ ಯುದ್ಧ: 14 ದಿನಗಳಲ್ಲಿ ಶಸ್ತ್ರಾಸ್ತ್ರ ಹಸ್ತಾಂತರಕ್ಕೆ ಹಮಾಸ್ ಒಪ್ಪಿಗೆ, ಶಾಂತಿ ಒಪ್ಪಂದ ಘೋಷಿಸಿದ ಟ್ರಂಪ್..!